ಸತತ 14ದಿನಗಳಿಂದ ಪೆಟ್ರೋಲ್, ಡೀಸೆಲ್ ದರದಲ್ಲಿ ಬದಲಾವಣೆಯಿಲ್ಲ

ಬೆಂಗಳೂರು, ಏಪ್ರಿಲ್ 13: ದೇಶದ ಪ್ರಮುಖ ನಗರಗಳಲ್ಲಿ ಪೆಟ್ರೋಲ್, ಡೀಸೆಲ್ ದರವನ್ನು ಸತತ 14 ದಿನಗಳಿಂದ ಇಂಧನ ದರ ಪರಿಷ್ಕರಿಸಿಲ್ಲ. ಆದರೆ, ಕರ್ನಾಟಕದಲ್ಲಿ ಇತರೆ ಪಟ್ಟಣಗಳಿಗೆ ಹೋಲಿಸಿದರೆ ಬಳ್ಳಾರಿಯಲ್ಲಿ ಇಂಧನ ದರ ಏರಿಳಿತ ಸಾಮಾನ್ಯವಾಗಿದೆ. ಬಳ್ಳಾರಿಯಲ್ಲಿ ಪೆಟ್ರೋಲ್ ದರ 1.02 ಪೈಸೆ ಏರಿಕೆಯಾಗಿ 95.48ರು ಪ್ರತಿ ಲೀಟರ್ ಹಾಗೂ ಡೀಸೆಲ್ ದರ 93 ಪೈಸೆ ಏರಿಕೆಯಾಗಿ 87.49ರು ನಷ್ಟಿದೆ.

ಬೆಂಗಳೂರಲ್ಲಿ ಪೆಟ್ರೋಲ್ ಪ್ರತಿ ಲೀಟರ್‌ಗೆ 93.59ರೂಪಾಯಿಗೆ ತಲುಪಿದೆ. ಡೀಸೆಲ್ ದರವು ಪ್ರತಿ ಲೀಟರ್‌ಗೆ 85.75ರೂಪಾಯಿನಂತೆ ಮಾರಾಟವಾಗುತ್ತಿದೆ, ಮೆಟ್ರೋ ನಗರಗಳ ಪೈಕಿ ಮುಂಬೈನಲ್ಲಿ ಇಂಧನ ದರ ಅತ್ಯಧಿಕವಾಗಿದ್ದು, ಪೆಟ್ರೋಲ್ 96.98 ರು ಹಾಗೂ ಡೀಸೆಲ್ 87.96ರು ಎಂದು ಇಂಡಿಯನ್ ಆಯಿಲ್ ಕಾರ್ಪೊರೇಷನ್ ಪ್ರಕಟಿಸಿದೆ.

ಈ ನಡುವೆ ಮಾರ್ಚ್ 2021ರಲ್ಲಿ ಇಂಧನ ಬಳಕೆ ಅತ್ಯಧಿಕ ಎಂದು ಅಂಕಿ ಅಂಶ ತಿಳಿಸಿದೆ. ಡಿಸೆಂಬರ್ 2019ರ ನಂತರ ಭಾರಿ ಬೇಡಿಕೆ ಇದೀಗ ಕಂಡು ಬಂದಿದೆ. ಕಳೆದ ತಿಂಗಳು ವರ್ಷದಿಂದ ವರ್ಷಕ್ಕೆ ಹೋಲಿಸಿದರೆ ಪೆಟ್ರೋಲ್ ಶೇ 27.4 ರಷ್ಟು ಅಧಿಕ ಮಾರಾಟ ಕಂಡು ಬಂದಿದೆ. ಇದೇ ವೇಳೆ ಡಿಸೇಲ್ ಬಳಕೆ ಶೇ 27.6ರಷ್ಟು ಏರಿಕೆಯಾಗಿದೆ.

Petrol, Diesel Rates unchanged on April 13 across India

ಐದು ರಾಜ್ಯಗಳ ಚುನಾವಣೆ ಹಿನ್ನೆಲೆಯಲ್ಲಿ ಸುಮಾರು 24 ದಿನಗಳ ಕಾಲ ತೈಲ ಬೆಲೆ ಏರಿಕೆಯನ್ನು ತಡೆ ಹಿಡಿಯಲಾಗಿತ್ತು. ಕಚ್ಚಾತೈಲ ಬೆಲೆ ಏರುಪೇರಾದರೂ ತೈಲ ಕಂಪನಿಗಳು ಇಂಧನ ಬೆಲೆ ಪರಿಷ್ಕರಿಸಿರಲಿಲ್ಲ. ಈಗ ಮಾರ್ಚ್ 27ರಿಂದ ಕೆಲ ರಾಜ್ಯಗಳಲ್ಲಿ ಮತದಾನ ಪ್ರಕ್ರಿಯೆ ಆರಂಭವಾಗಿದೆ. ಮೇ 2ರಂದು ಫಲಿತಾಂಶ ಹೊರಬರಲಿದೆ.

ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾತೈಲ ಬೆಲೆ 63.69 ಯುಎಸ್ ಡಾಲರ್( 1 USD=75.41ರು) ಪ್ರತಿ ಬ್ಯಾರೆಲ್‌ನಷ್ಟಿದೆ. ಒಪೆಕ್ ರಾಷ್ಟ್ರಗಳು ತೈಲ ಪೂರೈಕೆಯಲ್ಲಿ ವ್ಯತ್ಯಯ ಮಾಡಿರುವುದರಿಂದ ಭಾರತದಂಥ ಅತಿ ಹೆಚ್ಚು ಆಮದು ಮಾಡಿಕೊಳ್ಳುವ ರಾಷ್ಟ್ರಕ್ಕೆ ಭಾರಿ ಹೊಡೆತ ಬಿದ್ದಿದೆ. ಭಾರತ ಸರ್ಕಾರ ಮೂಲ ಬೆಲೆಯ 125% ರಷ್ಟು ತೆರಿಗೆ ವಿಧಿಸುತ್ತದೆ. ಇಂಧನದ ಮೇಲೆ ಅಬಕಾರಿ ಸುಂಕ ಪೆಟ್ರೋಲ್ ಮೇಲೆ 32. 98ರು ಹಾಗೂ ಡೀಸೆಲ್ ಮೇಲೆ 31.80 ರು ನಷ್ಟಿದೆ.

ಪ್ರಮುಖ ನಗರಗಳಲ್ಲಿ ಏಪ್ರಿಲ್ 2ರಂದು ಇಂಧನ ದರ

ನಗರ ಪೆಟ್ರೋಲ್ ಡೀಸೆಲ್
ದೆಹಲಿ 90.56ರೂ 80.87ರೂ
ಮುಂಬೈ 96.98 ರೂ 87.96 ರೂ
ಚೆನ್ನೈ 92.58 ರೂ 85.88 ರೂ
ಬೆಂಗಳೂರು 93.65ರೂ 85.81 ರೂ
ಕೋಲ್ಕತ್ತಾ 90.77 ರೂ 83.75 ರೂ
ಹೈದರಾಬಾದ್ 94.16 ರು 88.20 ರು
ನೋಯ್ಡಾ 88.91 ರೂ 81.33 ರೂ
ಪಾಟ್ನ 92.89 ರು 86.12 ರು
ಲಕ್ನೋ 88.85 ರು 81.27 ರು

ನಿಮ್ಮ ನಗರ, ಪಟ್ಟಣಗಳಲ್ಲಿನ ಇಂಧನ ದರವನ್ನು ತಿಳಿಯಲು ಕ್ಲಿಕ್ ಮಾಡಿ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+