ಈ ನಗರಗಳಲ್ಲಿ ಪೆಟ್ರೋಲ್ ದರ ಲೀಟರ್ಗೆ 90 ರೂ. ಗಡಿ ದಾಟಿದೆ
ನವದೆಹಲಿ, ಡಿಸೆಂಬರ್ 01: ಕಳೆದ ಹಲವು ದಿನಗಳಿಂದ ಏರಿಕೆಯಾಗುತ್ತಲೇ ಸಾಗಿರುವ ತೈಲ ಬೆಲೆಯು ಮಂಗಳವಾರ ಯಾವುದೇ ಬದಲಾವಣೆ ಕಂಡು ಬಂದಿಲ್ಲ. ಆದರೆ ದೇಶದ ಕೆಲವು ನಗರಗಳಲ್ಲಿ ಪೆಟ್ರೋಲ್ಗೆ ಚಿನ್ನದಂತಹ ಬೆಲೆ ಬಂದಿದ್ದು, ಲೀಟರ್ಗೆ 90 ರೂಪಾಯಿ ಗಡಿ ದಾಟಿದೆ.
ಸತತ 10 ದಿನಗಳ ಏರಿಕೆಯಿಂದಾಗಿ ಪೆಟ್ರೋಲ್ ದರ ಕೆಲವು ನಗರಗಳಲ್ಲಿ 90 ರೂಪಾಯಿಗಿಂತ ಹೆಚಿದ್ದರೆ, ಡೀಸೆಲ್ ಪ್ರತಿ ಲೀಟರ್ಗೆ 80 ರೂಪಾಯಿ ಗಡಿ ದಾಟಿದೆ.
ಭೋಪಾಲ್ನಲ್ಲಿ ಪೆಟ್ರೋಲ್ ದರ ಪ್ರತಿ ಲೀಟರ್ಗೆ 90.05 ರೂ.ಗೆ ಹೆಚ್ಚಿಸಲಾಗಿದೆ. ಅದೇ ಸಮಯದಲ್ಲಿ, ಇಲ್ಲಿ ಡೀಸೆಲ್ ದರ ಪ್ರತಿ ಲೀಟರ್ಗೆ 80.10 ರೂ. ಇದೆ. ಇದಲ್ಲದೆ ಮಧ್ಯಪ್ರದೇಶದ ಇಂದೋರ್ನಲ್ಲಿ ಪೆಟ್ರೋಲ್ ದರವು ಪ್ರತಿ ಲೀಟರ್ಗೆ 90.16 ರೂ.ಗೆ ಹೆಚ್ಚಿಸಲಾಗಿದೆ. ಔರಂಗಾಬಾದ್ನಲ್ಲಿ ಪೆಟ್ರೋಲ್ ದರವನ್ನು ಲೀಟರ್ಗೆ 90.25 ರೂ.ಗೆ ಹೆಚ್ಚಿಸಲಾಗಿದೆ.

ದೆಹಲಿಯಲ್ಲಿ 1 ಲೀಟರ್ ಪೆಟ್ರೋಲ್ ಬೆಲೆ 82.34 ರೂಪಾಯಿ, ಡೀಸೆಲ್ ಬೆಲೆ ಪ್ರತಿ ಲೀಟರ್ಗೆ 72.42 ರೂ.
ಕೋಲ್ಕತ್ತಾದಲ್ಲಿ 1 ಲೀಟರ್ ಪೆಟ್ರೋಲ್ ಬೆಲೆ 83.87 ರೂಪಾಯಿ. ಡೀಸೆಲ್ ಬೆಲೆ ಪ್ರತಿ ಲೀಟರ್ಗೆ 75.99 ರೂ.
ಮುಂಬೈನಲ್ಲಿ 1 ಲೀಟರ್ ಪೆಟ್ರೋಲ್ ಬೆಲೆ 89.02 ರೂ. ಡೀಸೆಲ್ ಬೆಲೆ ಪ್ರತಿ ಲೀಟರ್ಗೆ 78.97 ರೂ.
ಬೆಂಗಳೂರಿನಲ್ಲಿ 1 ಲೀಟರ್ ಪೆಟ್ರೋಲ್ ಬೆಲೆ 85.09 ರೂ. ಡೀಸೆಲ್ ಬೆಲೆ ಪ್ರತಿ ಲೀಟರ್ಗೆ 76.77 ರೂ.
ಚೆನ್ನೈನಲ್ಲಿ 1 ಲೀಟರ್ ಪೆಟ್ರೋಲ್ ಬೆಲೆ 85.31 ರೂಪಾಯಿ. ಡೀಸೆಲ್ ಬೆಲೆ ಪ್ರತಿ ಲೀಟರ್ಗೆ 77.84 ರೂ.
ಸರ್ಕಾರಿ ತೈಲ ಕಂಪನಿಗಳು, ಬೆಲೆಗಳನ್ನು ಪರಿಶೀಲಿಸಿದ ನಂತರ, ಪ್ರತಿದಿನ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ನಿಗದಿಪಡಿಸುತ್ತವೆ. ಇಂಡಿಯನ್ ಆಯಿಲ್, ಭಾರತ್ ಪೆಟ್ರೋಲಿಯಂ ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಪರಿಷ್ಕರಿಸುತ್ತವೆ ಮತ್ತು ಪ್ರತಿದಿನ ಸಂಜೆ 6 ಗಂಟೆಯಿಂದ ಪೆಟ್ರೋಲ್ ದರ ಮತ್ತು ಡೀಸೆಲ್ ದರವನ್ನು ನೀಡುತ್ತವೆ.
-
Karnataka Rains: ಸಮುದ್ರ ಮಲ್ಮೈ ಸುಳಿಗಾಳಿ, ಏಪ್ರಿಲ್ 14-17ರವರೆಗೆ ಬೆಂಗಳೂರು, ಇತರ ಜಿಲ್ಲೆಗಳಲ್ಲಿ ಮಳೆ -
Aditya: ನಿನ್ನೆ ಮೊನ್ನೆ ಬಂದೋರೆಲ್ಲ ದರ್ಶನ್ಗೆ ಕ್ಲೋಸ್ ಅಂತಿದ್ದಾರೆ, ಅವನು ಎಂದಿಗೂ ನನ್ನ ದೋಸ್ತ್: ನಟ ಆದಿತ್ಯ -
ಮುಂಬೈ ವಿರುದ್ಧದ ಹೈವೋಲ್ಟೇಜ್ ಕದನಕ್ಕೆ ಆರ್ಸಿಬಿ ಪ್ಲೇಯಿಂಗ್ 11ನಲ್ಲಿ ಮಹತ್ವದ ಬದಲಾವಣೆ ಸಾಧ್ಯತೆ -
Dhurandhar 2 Pakistan: ಅರಬ್ ರಾಷ್ಟ್ರದ ಸಾಲ ತೀರಿಸಲು ದುರಂಧರ್ 2 ಬಿಡುಗಡೆಗೆ ಮುಂದಾಯ್ತಾ ಪಾಕಿಸ್ತಾನ, ಟ್ವಿಸ್ಟ್ -
Lata Mangeshkar & Asha Bhosle: ಆ ಒಂದು ಕಾರಣಕ್ಕೆ ತಂಗಿ ಆಶಾ ಬೋಸ್ಲೆ ಜೊತೆ ಮಾತು ಬಿಟ್ಟಿದ್ದ ಲತಾ ಮಂಗೇಶ್ಕರ್ -
Karntaka Weather: ಹವಾಮಾನ ವೈಪರೀತ್ಯ! ರಾಜ್ಯದ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ -
ಗಂಡ-ಹೆಂಡತಿ ಜಗಳ ಇಡೀ ದಿನ ತೋರಿಸಿದರೆ ಸಮಾಜಕ್ಕೆ ಏನು ಪ್ರಯೋಜನ: ಮಾಧ್ಯಮಗಳಿಗೆ ಸಿಎಂ ಪ್ರಶ್ನೆ -
Gas Booking New Rules: ಎಲ್ಪಿಜಿ ಗ್ಯಾಸ್ ಬುಕ್ಕಿಂಗ್ನಲ್ಲಿ ಹೊಸ ನಿಯಮ, ಎಷ್ಟು ದಿನಕ್ಕೆ ಸಿಗುತ್ತೆ ಗ್ಯಾಸ್ ಸಿಲಿಂಡರ್ -
ಮೈಸೂರು-ಬೆಂಗಳೂರು ರೈಲು ಪ್ರಯಾಣಿಕರಿಗೆ ಗುಡ್ನ್ಯೂಸ್ ಕೊಟ್ಟ ವಿ.ಸೋಮಣ್ಣ -
'ಕೋಟಿಗೊಬ್ಬ' ರೀರಿಲೀಸ್: ವಿಷ್ಣುದಾದಾ ಅಭಿಮಾನಿಗಳಿಂದ ಸಂಭ್ರಮ, ಪ್ರಸನ್ನ ಥಿಯೇಟರ್ನಲ್ಲಿ ನಾಳೆ 10,000 ಮಂದಿಗೆ ನಾನ್ವೆಜ್ ಊಟ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Smriti Mandhana: ಸ್ಮೃತಿ ಮಂಧಾನ-ಪಲಾಶ್ ಮುಚ್ಚಲ್ ಮತ್ತೆ ಒಂದಾಗ್ತಾರಾ? ಇಬ್ಬರ ಕುಟುಂಬಗಳ ಸೀಕ್ರೆಟ್ ಮೀಟಿಂಗ್ ವಿಡಿಯೋ ವೈರಲ್












Click it and Unblock the Notifications