ಸೆ. 26: ದೇಶದೆಲ್ಲೆಡೆ ಪೆಟ್ರೋಲ್ ದರ ಸ್ಥಿರ, ಡೀಸೆಲ್ ದರ ಏರಿಕೆ
ನವದೆಹಲಿ, ಸೆ. 26: ಜಾಗತಿಕವಾಗಿ ಕಚ್ಚಾತೈಲ ಬೆಲೆ ಎರಡು ತಿಂಗಳಲ್ಲೇ ಕಾಣದಷ್ಟು ಏರಿಕೆಯಾಗಿದೆ. ಆದರೆ, ಭಾರತದಲ್ಲಿ ಇಂದು (ಸೆ.26) ದಂದು ಪೆಟ್ರೋಲ್ ದರ ಪರಿಷ್ಕರಿಸಲಾಗಿಲ್ಲ, ಡೀಸೆಲ್ ಬೆಲೆ 23 ರಿಂದ 27 ಪೈಸೆಯಷ್ಟು ಏರಿಕೆಯಾಗಿದೆ ಎಂದು ದೇಶದ ಪ್ರಮುಖ ಮೂರು ತೈಲ ಕಂಪನಿಗಳು ಮಾಹಿತಿ ನೀಡಿವೆ. ಸೆ.5ರಂದು ಪೆಟ್ರೋಲ್ ಹಾಗೂ ಡೀಸೆಲ್ ಬೆಲೆಯಲ್ಲಿ ಸರಾಸರಿ 15 ರಿಂದ 19 ಪೈಸೆಯಷ್ಟು ಇಳಿಕೆ ಮಾಡಲಾಗಿತ್ತು. ಮಿಕ್ಕಂತೆ ಸತತವಾಗಿ ಕಳೆದ 19 ದಿನಗಳಿಂದ ಡೀಸೆಲ್ ದರದಲ್ಲಿ ಬದಲಾವಣೆಯಾಗಿರಲಿಲ್ಲ. ನಂತರ ಸತತವಾಗಿ ಬೆಲೆ ಏರಿಕೆಯಾಗುತ್ತಿದೆ.
ತಮಿಳುನಾಡಿನಂತೆ ಪುದುಚೇರಿ ಸರ್ಕಾರ ಕೂಡಾ ಪೆಟ್ರೋಲ್ ಮೇಲಿನ ತೆರಿಗೆ ತಗ್ಗಿಸಿದೆ. ಇದರಿಂದ ಪ್ರತಿ ಲೀಟರ್ ಮೇಲೆ ಸರಾಸರಿ 3 ರು ತಗ್ಗಿತ್ತು. ಹೀಗಾಗಿ ಇತರೆ ರಾಜ್ಯಗಳಿಗೆ ಹೋಲಿಸಿದರೆ ಇಲ್ಲಿ ಬೆಲೆ ಕಡಿಮೆಯಿದೆ. ಡೀಸೆಲೆ ಬೆಲೆ ಮಾತ್ರ ಏರಿಕೆಯಾಗಿದೆ.
ಜಾಗತಿಕವಾಗಿ ಕಚ್ಚಾತೈಲ ಬೆಲೆ ತೀವ್ರ ಏರಿಳಿತ ನಡುವೆಯೂ ಇಂಧನ ದರದಲ್ಲಿ ವ್ಯತ್ಯಾಸ ಕಂಡು ಬಂದಿರಲಿಲ್ಲ. ಪ್ರತಿ ಬ್ಯಾರೆಲ್ ಬೆಲೆ 66 ಯುಎಸ್ ಡಾಲರ್‌ಗಿಂತಲೂ ಕಡಿಮೆ ಮೊತ್ತಕ್ಕೂ ಕುಸಿದಿತ್ತು. ಆದರೆ, ಕಳೆದ 19 ದಿನಗಳಿಂದ ಚೇತರಿಸಿಕೊಂಡಿದೆ. ತಮಿಳುನಾಡಿನ ಬಜೆಟ್‌ನಲ್ಲಿ ಪೆಟ್ರೋಲ್ ಮೇಲಿನ ರಾಜ್ಯ ತೆರಿಗೆಯನ್ನು ಪ್ರತಿ ಲೀಟರ್ ಮೇಲೆ 3 ರು ತಗ್ಗಿಸಿದ್ದು ಬಿಟ್ಟರೆ, ಉಳಿದೆಡೆ ಇಂಧನ ದರ ಪ್ರತಿ ಲೀಟರ್ ಮೇಲೆ 100 ರು ಬೆಲೆ ಇದ್ದೇ ಇದೆ.
ಉಳಿದಂತೆ, ಉಳಿದ ಎಲ್ಲಾ ರಾಜ್ಯಗಳಲ್ಲಿನ ಸೆಸ್, ವ್ಯಾಟ್ ಅಧಿಕವಾಗಿರುವುದರಿಂದ ಯಾವ ರಾಜ್ಯದಲ್ಲೂ ಪೆಟ್ರೋಲ್ ಬೆಲೆ ಪ್ರತಿ ಲೀಟರ್ ಮೇಲೆ 100 ರು ಗಿಂತ ತಗ್ಗಿಲ್ಲ.
ಮೇ 4ರಿಂದ ಇಂದಿನ ತನಕ ಪೆಟ್ರೋಲ್ ಒಟ್ಟು 40 ಬಾರಿ ಹಾಗೂ ಡೀಸೆಲ್ 37 ಬಾರಿ ಏರಿಕೆಯಾಗಿತ್ತು. ಮೇ 4ರಿಂದ ಪೆಟ್ರೋಲ್ 11.15 ರು ಪ್ರತಿ ಲೀಟರ್ ಹಾಗೂ ಡೀಸೆಲ್ 10.80 ರು ಪ್ರತಿ ಲೀಟರ್ ಆಗಿದೆ.
ಮಹಾರಾಷ್ಟ್ರ, ದೆಹಲಿ, ಪಶ್ಚಿಮ ಬಂಗಾಳ, ತಮಿಳುನಾಡು, ಆಂಧ್ರಪ್ರದೇಶ, ತೆಲಂಗಾಣ, ರಾಜಸ್ಥಾನ, ಮಧ್ಯಪ್ರದೇಶ, ಕರ್ನಾಟಕ, ಉತ್ತರಪ್ರದೇಶ, ಹರ್ಯಾಣ, ಜಮ್ಮು ಮತ್ತು ಕಾಶ್ಮೀರ, ಒಡಿಶಾ, ಲಡಾಕ್, ಬಿಹಾರ, ಕೇರಳ, ಪಂಜಾಬ್, ಸಿಕ್ಕಿಂ ಹಾಗೂ ನಾಗಾಲ್ಯಾಂಡ್ ರಾಜ್ಯಗಳಲ್ಲಿ ಪೆಟ್ರೋಲ್ ಬೆಲೆ 100 ರು ಪ್ಲಸ್ ದಾಟಿದೆ. ಈ ಪೈಕಿ ಅನೇಕ ರಾಜ್ಯಗಳಲ್ಲಿ ವ್ಯಾಟ್, ಸೆಸ್ ದರ ಅಧಿಕವಾಗಿವೆ.
ದೆಹಲಿಯಲ್ಲಿ ದರ ಭಾನುವಾರದಂದು ಪೆಟ್ರೋಲ್ ಪ್ರತಿ ಲೀಟರ್‌ಗೆ 101.19ರು ಹಾಗೂ ಡೀಸೆಲ್ ಪ್ರತಿ ಲೀಟರ್‌ಗೆ 88.62ರು ಆಗಿದೆ. ದೇಶದ ವಿವಿಧ ನಗರಗಳ ದರ ಪಟ್ಟಿ ವಿವರ ಮುಂದಿದೆ...

ಕಚ್ಚಾತೈಲ ಬೆಲೆ ಹೇಗೆ ನಿರ್ಧರಿತವಾಗುತ್ತದೆ?
ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಸೆಪ್ಟೆಂಬರ್ 26ರಂದು ಈ ಸಮಯಕ್ಕೆ ಕಚ್ಚಾತೈಲ ಬೆಲೆ ಕೊಂಚ ಏರಿಕೆ ಕಂಡು 78.09ಯುಎಸ್ ಡಾಲರ್(1 USD=74.05ರೂ) ಪ್ರತಿ ಬ್ಯಾರೆಲ್‌ನಷ್ಟಿದೆ. ಕಚ್ಚಾ ತೈಲ ಬೆಲೆ ಫೆಬ್ರವರಿಯಲ್ಲಿ 61.22 ಡಾಲರ್, ಮಾರ್ಚ್ ತಿಂಗಳಲ್ಲಿ 64.73 ಡಾಲರ್, ಏಪ್ರಿಲ್ ತಿಂಗಳಲ್ಲಿ 66 ಡಾಲರ್ ಹಾಗೂ ಮೇ ತಿಂಗಳಲ್ಲಿ ಸರಾಸರಿ 68 ಡಾಲರ್ ನಷ್ಟಿತ್ತು. ಭಾರತ ಸರ್ಕಾರ ಮೂಲ ಬೆಲೆಯ 125% ರಷ್ಟು ತೆರಿಗೆ ವಿಧಿಸುತ್ತದೆ. ಇಂಧನದ ಮೇಲೆ ಅಬಕಾರಿ ಸುಂಕ ಪೆಟ್ರೋಲ್ ಮೇಲೆ 32. 98 ರೂ ಹಾಗೂ ಡೀಸೆಲ್ ಮೇಲೆ 31.80 ರೂ ನಷ್ಟಿದೆ.

ಯಾವ್ಯಾವ ನಗರದಲ್ಲಿ ಎಷ್ಟಿದೆ ಇಂಧನ ಬೆಲೆ
ನವದೆಹಲಿ: ಪೆಟ್ರೋಲ್ 101.19ರೂ- ಡೀಸೆಲ್ 89.07ರೂ
ಕೋಲ್ಕತಾ: ಪೆಟ್ರೋಲ್ 101.62ರೂ- ಡೀಸೆಲ್ 92.17ರೂ
ಮುಂಬೈ: ಪೆಟ್ರೋಲ್ 107.26ರೂ- ಡೀಸೆಲ್ 96.68ರೂ
ಚೆನ್ನೈ: ಪೆಟ್ರೋಲ್ 98.96ರೂ- ಡೀಸೆಲ್ 93.69ರೂ
ಬೆಂಗಳೂರು: ಪೆಟ್ರೋಲ್ 104.70 ರೂ- ಡೀಸೆಲ್ 94.53ರೂ
ತಿರುವನಂತಪುರಂ: ಪೆಟ್ರೋಲ್ 103.70ರೂ- ಡೀಸೆಲ್ 96.13ರೂ
ಪಾಟ್ನಾ: ಪೆಟ್ರೋಲ್ 103.79ರೂ- ಡೀಸೆಲ್ 95.10ರೂ
ಹೈದರಾಬಾದ್: ಪೆಟ್ರೋಲ್ 105.42ರೂ- ಡೀಸೆಲ್ 97.35ರೂ
ನೋಯ್ಡಾ: ಪೆಟ್ರೋಲ್ 98.49ರೂ- ಡೀಸೆಲ್ 89.64ರೂ
ಜೈಪುರ: ಪೆಟ್ರೋಲ್ 108.13ರೂ- ಡೀಸೆಲ್ 98.26ರೂ
(ಮಾಹಿತಿ ಕೃಪೆ: ಗುಡ್ ರಿಟರ್ನ್ಸ್ .ಇನ್)

ಇಂಧನ ಬೆಲೆ 100 ರೂ ಬೆಲೆ ದಾಟಿದ ರಾಜ್ಯಗಳು
ಮಹಾರಾಷ್ಟ್ರ, ದೆಹಲಿ, ಪಶ್ಚಿಮ ಬಂಗಾಳ, ಆಂಧ್ರಪ್ರದೇಶ, ತೆಲಂಗಾಣ, ರಾಜಸ್ಥಾನ, ಮಧ್ಯಪ್ರದೇಶ, ಕರ್ನಾಟಕ, ಉತ್ತರಪ್ರದೇಶ, ಹರ್ಯಾಣ, ಜಮ್ಮು ಮತ್ತು ಕಾಶ್ಮೀರ, ಒಡಿಶಾ, ಲಡಾಖ್, ಬಿಹಾರ, ಕೇರಳ, ಪಂಜಾಬ್, ಸಿಕ್ಕಿಂ ಹಾಗೂ ನಾಗಾಲ್ಯಾಂಡ್ ರಾಜ್ಯಗಳಲ್ಲಿ ಪೆಟ್ರೋಲ್ ಬೆಲೆ 100 ರೂ ದಾಟಿದೆ. ರಾಜಸ್ಥಾನದಲ್ಲಿ ಡೀಸೆಲ್ ಬೆಲೆ ಕೂಡಾ 100 ರು ಪ್ಲಸ್ ಇದೆ. ಚೆನ್ನೈ, ಗುರುಗ್ರಾಮ, ಚಂಡೀಗಢ, ನೋಯ್ಡಾ ಹಾಗೂ ಲಕ್ನೋದಲ್ಲಿ 100ರುಗಿಂತ ಕೆಳಗಿದೆ.
Recommended Video

ಹೆಚ್ಚು ವ್ಯಾಟ್, ಸೆಸ್ ವಿಧಿಸಿರುವ ರಾಜ್ಯಗಳು
ರಾಜಸ್ಥಾನ, ತೆಲಂಗಾಣ, ಮಧ್ಯಪ್ರದೇಶ ಹಾಗೂ ಒಡಿಶಾ ಹೆಚ್ಚು ವ್ಯಾಟ್, ಸೆಸ್ ವಿಧಿಸುತ್ತಿವೆ. ದೇಶದಲ್ಲಿ ಈ ರಾಜ್ಯಗಳಲ್ಲಿ ಇಂಧನ ದರ ದುಬಾರಿಯಾಗಿದೆ. ಅರುಣಾಚಲ ಪ್ರದೇಶ ಹಾಗೂ ಮಿಜೋರಾಂ ರಾಜ್ಯಗಳಲ್ಲಿ ಇಂಧನ ದರದ ಮೇಲೆ ತೆರಿಗೆ ಅತ್ಯಂತ ಕಡಿಮೆ ಇದೆ. ರಾಜಸ್ಥಾನದ ಗಂಗಾನಗರ ಜಿಲ್ಲೆಯಲ್ಲಿ ಪ್ರತಿ ಪೆಟ್ರೋಲ್ ಬೆಲೆ ದೇಶದಲ್ಲೇ ಅತ್ಯಧಿಕ 112.55ರೂ ನಷ್ಟಿದೆ, ಡೀಸೆಲ್ ಬೆಲೆ 102.32ರೂ ಆಗಿದೆ. ಅಲ್ಲದೆ ರಾಜಸ್ಥಾನದ ಎಲ್ಲಾ ಪ್ರಮುಖ ಪಟ್ಟಣಗಳಲ್ಲಿ ಪೆಟ್ರೋಲ್ ಬೆಲೆ ಪ್ರತಿ ಲೀಟರ್ ಬೆಲೆ 100 ರೂ ಗಡಿ ದಾಟಿದೆ.
-
ಸೌದಿ ಅರೇಬಿಯಾದಲ್ಲಿ ಪಾಕಿಸ್ತಾನಿ ಸೇನಾಪಡೆ ನಿಯೋಜನೆ: ಮಿತ್ರ ರಾಷ್ಟ್ರಕ್ಕೆ 13,000 ಸೈನಿಕರು, ಯುದ್ಧ ವಿಮಾನಗಳ ರವಾನೆ -
Weekly Horoscope: ನಾಲ್ಕು ರಾಶಿಯವರಿಗೆ ಅದೃಷ್ಟ ಹೊತ್ತು ತರುವ ವಾರ ಇದು: ಹೇಗಿದೆ ನೋಡಿ ನಿಮ್ಮ ವಾರ ಭವಿಷ್ಯ -
PUC Revaluation: ಸ್ಕ್ಯಾನ್ ಪ್ರತಿ ಪಡೆದವರ ಉತ್ತರ ಪತ್ರಿಕೆ ಮರುಮೌಲ್ಯಮಾಪನ; ಶುಲ್ಕ, ಪ್ರಮುಖ ದಿನಾಂಕಗಳು -
Bengaluru Property: ಬೆಂಗಳೂರು ಮೆಟ್ರೋದ ಈ ಮಾರ್ಗಗಳಲ್ಲಿ ಭೂಮಿ, ಪ್ರಾಪರ್ಟಿ ಬೆಲೆ ಶೇ 20% ರಿಂದ ಶೇ 30% ಹೆಚ್ಚಳ -
Gold Price Drop: ವಾರದ ಮೊದಲ ದಿನವೇ ಚಿನ್ನ-ಬೆಳ್ಳಿ ದರ ಭರ್ಜರಿ ಕುಸಿತ, ಇಂದಿನ ದರಪಟ್ಟಿ -
Career Break: ಅಲಾರಂ ಇಲ್ಲದ ಜೀವನ ಬೇಕು ಎಂದು ಗೂಗಲ್ ಕೆಲಸ ಬಿಟ್ಟ ಯುವ ಟೆಕ್ಕಿ, ನೆಟ್ಟಿಗರ ಮೆಚ್ಚುಗೆ -
E-Khata: ಜನ ಸೇವಕ ಯೋಜನೆ: ಮನೆಯಲ್ಲೇ ಕುಳಿತು ಇ - ಖಾತಾ ಪಡೆಯಿರಿ, ಈ 5 ದಾಖಲೆಗಳಿದ್ದರೆ ಸಾಕು -
Gold Rings: ಅಕ್ಷಯ ತೃತೀಯಕ್ಕೆ ಖರೀದಿಸಬಹುದಾದ ಆಕರ್ಷಕ ವಿನ್ಯಾಸದ 5 ಚಿನ್ನದ ಉಂಗುರಗಳು -
ಮಂಡ್ಯದಲ್ಲಿ 500 ಎಕರೆ ಆಟೋ ಕೈಗಾರಿಕಾ ಹಬ್: ಎಂಬಿ ಪಾಟೀಲ, ಎಚ್ಡಿ ಕುಮಾರಸ್ವಾಮಿ ಮಹತ್ವದ ಚರ್ಚೆ -
April 13 Horoscope: 12 ರಾಶಿಗಳಿಗೆ ಇಂದು ಪ್ರೇಮ, ಹಣಕಾಸು, ಉದ್ಯೋಗದಲ್ಲಿ ಏನು ಹೇಳುತ್ತದೆ ನಿಮ್ಮ ರಾಶಿ? -
Bengaluru power cut: ಬೆಂಗಳೂರಿನ ಹಲವೆಡೆ ಹೆಚ್ಚಾಯ್ತು ದಿಢೀರ್ ಪವರ್ ಕಟ್, ಹೈರಾಣಾದ ಜನ: ಬೆಸ್ಕಾಂ ಕೊಟ್ಟ ಉತ್ತರ ಇಲ್ಲಿದೆ -
School Holiday: ರಾಜ್ಯದಲ್ಲಿ 2026-27ನೇ ಸಾಲಿನ ಶೈಕ್ಷಣಿಕ ವೇಳಾಪಟ್ಟಿ ಪ್ರಕಟ: ದಸರಾ, ಬೇಸಿಗೆ ರಜೆ, ಕೆಲಸದ ದಿನಗಳ ವಿವರ












Click it and Unblock the Notifications