• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ಅ.1: ವಾಣಿಜ್ಯ ಬಳಕೆ ಎಲ್‌ಪಿಜಿ ಸಿಲಿಂಡರ್ ಬೆಲೆ ಏರಿಕೆ

|
Google Oneindia Kannada News

ನವದೆಹಲಿ, ಅಕ್ಟೋಬರ್ 1: ಕೊರೊನಾ ಸಾಂಕ್ರಾಮಿಕದ ನಡುವೆ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ಕಂಗಾಲಾಗಿರುವ ಜನರಿಗೆ ಮತ್ತೆ ಕಹಿಸುದ್ದಿ ಸಿಕ್ಕಿದೆ. ಸಬ್ಸಿಡಿ ರಹಿತ ಗೃಹ ಬಳಕೆಯ ಸಿಲಿಂಡರ್ ಬೆಲೆಯನ್ನು ಪರಿಷ್ಕರಿಸಿಲ್ಲ. ಆದರೆ, ಅಕ್ಟೋಬರ್ 01ರಿಂದ ವಾಣಿಜ್ಯ ಬಳಕೆಯ ಅಡುಗೆ ಅನಿಲ ಪ್ರತಿ ಸಿಲಿಂಡರ್ ಮೇಲೆ ಹೆಚ್ಚುವರಿ 43ರು ತೆರಬೇಕಾಗುತ್ತದೆ. ಹೀಗಾಗಿ, ರೆಸ್ಟೋರೆಂಟ್, ದಾಬಾ, ಹೋಟೆಲ್ ಗಳಲ್ಲಿ ತಿಂಡಿ, ಊಟದ ಬೆಲೆ ಏರಿಕೆಯಾಗುವ ಸಾಧ್ಯತೆ ಹೆಚ್ಚಿದೆ.

ಪರಿಷ್ಕೃತ ದರ ಪಟ್ಟಿ ಶುಕ್ರವಾರದಿಂದಲೇ ಜಾರಿಗೆ ಬರಲಿದೆ ಎಂದು ಸರ್ಕಾರಿ ಸ್ವಾಮ್ಯದ ಪೆಟ್ರೋಲಿಯಂ ಕಂಪನಿಗಳು ಹೇಳಿವೆ. ಕಳೆದ ತಿಂಗಳು ಸಬ್ಸಿಡಿ ರಹಿತ ಗೃಹ ಬಳಕೆಯ ಸಿಲಿಂಡರ್ ಬೆಲೆಯನ್ನು 25 ರೂ. ಏರಿಕೆ ಮಾಡಿದ್ದಲ್ಲದೆ, ವಾಣಿಜ್ಯ ಬಳಕೆಯ 19 ಕೆಜಿ ಸಿಲಿಂಡರ್ ಬೆಲೆ 75 ರೂ. ನಷ್ಟು ಏರಿಸಲಾಗಿತ್ತು.

ಇಂಡಿಯನ್ ಆಯಿಲ್ ವೆಬ್ ತಾಣದ ಪ್ರಕಾರ, ಪರಿಷ್ಕೃತ ದರ ಪಟ್ಟಿಯಂತೆ ರಾಜಧಾನಿ ದೆಹಲಿಯಲ್ಲಿ ಪ್ರತಿ ಸಿಲಿಂಡರ್ ಬೆಲೆ 1,736 ರು ಆಗಲಿದೆ. ಆದರೆ, 14.2 ಕೆಜಿ ತೂಗುವ ಸಿಲಿಂಡರ್ ಬೆಲೆ ಬದಲಾವಣೆ ಮಾಡಲಾಗಿಲ್ಲ. ಗುರುವಾರದಂದು ನೈಸರ್ಗಿಕ ಅನಿಲ ದರವನ್ನು ಶೇ 62ರಷ್ಟು ಏರಿಕೆ ಮಾಡಲಾಗಿತ್ತು. ಸಿಎನ್ ಜಿ ಉತ್ಪಾದನೆ, ರಸಗೊಬ್ಬರ, ವಿದ್ಯುತ್ ಸ್ಥಾವರಗಳಲ್ಲಿ ನೈಸರ್ಗಿಕ ಅನಿಲ ಬಳಕೆ ಮಾಡಲಾಗುತ್ತದೆ.

19 ಕೆ.ಜಿ ಸಿಲಿಂಡರ್ ದರ ಪಟ್ಟಿ
ದೆಹಲಿ: 1741ರು (ಸೆಪ್ಟೆಂಬರ್ ದರ: 1698 ರು) / (ಆಗಸ್ಟ್ ದರ: 1623.00)
ಮುಂಬೈ: 1697.5 ರು (ಸೆಪ್ಟೆಂಬರ್ ದರ:1654.5 ರು)/ (ಆಗಸ್ಟ್ ದರ: 1579.50)
ಕೋಲ್ಕತಾ: 1819.5 ರು (ಸೆಪ್ಟೆಂಬರ್ ದರ:1776.5 ರು)/ (ಆಗಸ್ಟ್ ದರ: 1701.50)
ಚೆನ್ನೈ: 1879ರು (ಸೆಪ್ಟೆಂಬರ್ ದರ:1836 ರು/ / (ಆಗಸ್ಟ್ ದರ:1761.00)
ಮಾಹಿತಿಕೃಪೆ: ಗುಡ್ ರಿಟರ್ನ್ಸ್.ಇನ್/ ಐಒಸಿಎಲ್)

ಪೆಟ್ರೋಲಿಯಂ ಕಂಪನಿಗಳು ಪ್ರತಿ ತಿಂಗಳ 1 ಮತ್ತು 15ನೇ ತಾರೀಕಿನ ಬಳಿಕ ಸಿಲಿಂಡರ್ ಬೆಲೆಯನ್ನು ಪರಿಷ್ಕರಣೆ ಮಾಡುತ್ತವೆ. ಬೆಲೆ ಏರಿಕೆಯಾಗುತ್ತಲೇ ಹೋಗುತ್ತಿದ್ದು, ಬಡ ಮತ್ತು ಮಧ್ಯಮ ವರ್ಗದ ಜನರು ಮತ್ತಷ್ಟು ಸಂಕಷ್ಟಕ್ಕೆ ಸಿಲುಕಿದ್ದಾರೆ.

ಮೇ 1, 2014ರಲ್ಲಿ 410.50 ರು ಇದ್ದ ಸಿಲಿಂಡರ್ ಬೆಲೆ ದ್ವಿಗುಣವಾಗಿ ಈಗ ಸರಾಸರಿ 859.50 ರು ನಷ್ಟಾಗಿದೆ. 2021ರ ಫೆಬ್ರವರಿ ತಿಂಗಳಲ್ಲಿ 100 ರು ಏರಿಕೆ ಮಾಡಲಾಗಿತ್ತು. ಫೆಬ್ರವರಿ 4, ಫೆ.14 ಹಾಗೂ ಫೆ.25ರಂದು ಎಲ್‌ಪಿಜಿ ಸಿಲಿಂಡರ್ ದರ ಏರಿಕೆ ಮಾಡಲಾಗಿದ್ದು, ಇದೇ ಮೊದಲ ಬಾರಿಗೆ ಒಂದೇ ತಿಂಗಳಲ್ಲಿ ಮೂರು ಬಾರಿ ಬೆಲೆ ಹೆಚ್ಚಳ ಮಾಡಿ ದಾಖಲೆ ಬರೆಯಲಾಗಿತ್ತು. ಒಟ್ಟಾರೆ ಕಳೆದ 2020ರ ಡಿಸೆಂಬರ್ ತಿಂಗಳಿನಿಂದ 200 ರು ಪ್ರತಿ ಸಿಲಿಂಡರ್ ನಂತೆ ಏರಿಕೆ ಕಂಡಿತ್ತು. ಕಳೆದ ನವೆಂಬರ್ ತಿಂಗಳಿನಿಂದಲೂ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆ ಹಾಗೂ ಪೆಟ್ರೋಲಿಯಂ ಉತ್ಪನ್ನಗಳ ಬೆಲೆ ಏರಿಕೆಯಾಗಿತ್ತು. ಹೀಗಾಗಿ ಭಾರತದಲ್ಲಿಯೂ ಪೆಟ್ರೋಲಿಯಂ ಉತ್ಪನ್ನಗಳ ಬೆಲೆ ಏರಿಕೆ ಕಂಡಿತ್ತು. ಪೆಟ್ರೋಲ್, ಡೀಸೆಲ್ ದರ ಸೇರಿದಂತೆ ಎಲ್‌ಪಿಜಿ ಸಿಲಿಂಡರ್ ದರದಲ್ಲಿಯೂ ಏರಿಕೆ ಮಾಡಲಾಗಿತ್ತು. ಒಟ್ಟಾರೆ ಜನವರಿ 1, 2021ರಿಂದ ಸೆಪ್ಟೆಂಬರ್ 1, 2021 ಅವಧಿಯಲ್ಲಿ 190 ರು ನಷ್ಟು ಬೆಲೆ ಏರಿಕೆಯಾಗಿದೆ.

ಗಮನಿಸಿ: ಸರ್ಕಾರಿ ಸ್ವಾಮ್ಯದ ಇಂಧನ ಕಂಪನಿಗಳಾದ ಇಂಡಿಯನ್ ಆಯಿಲ್ ಕಾರ್ಪೊರೇಷನ್, ಹಿಂದೂಸ್ತಾನ್ ಪೆಟ್ರೋಲಿಯಂ, ಭಾರತ್ ಪೆಟ್ರೋಲಿಯಂ ಪ್ರತಿ ತಿಂಗಳ ಮೊದಲ ದಿನದಂದು ಇಂಧನ ದರ, ಸಬ್ಸಿಡಿ ರಹಿತ ಎಲ್‌ಪಿಜಿ, ಜೆಟ್ ಇಂಧನ, ಸೀಮೆಎಣ್ಣೆ ಬೆಲೆ ಬಗ್ಗೆ ನಿರ್ಧಾರ ಕೈಗೊಳ್ಳುತ್ತವೆ. ಬೆಲೆ ಏರಿಕೆ ಹಾಗೂ ಇಳಿಕೆ ಎಲ್ಲವೂ ಜಾಗತಿಕ ಮಾರುಕಟ್ಟೆ ದರದ ಮೇಲೆ ಅವಲಂಬಿತವಾಗಿರುತ್ತದೆ. ಇದಲ್ಲದೆ ಆರು ತಿಂಗಳಿಗೊಮ್ಮೆ ನೈಸರ್ಗಿಕ ಅನಿಲದ ಸರಾಸರಿ ದರ ನಿಗದಿಪಡಿಸಲಾಗುತ್ತದೆ. ಈ ಹೊಸ ದರಗಳು ಪ್ರಧಾನ್ ಮಂತ್ರಿ ಉಜ್ವಲ ಯೋಜನೆಯ (ಪಿಎಂಯುವೈ) ಫಲಾನುಭವಿಗಳ ಮೇಲೆ ಪರಿಣಾಮ ಬೀರುವುದಿಲ್ಲ ಎಂದು ಸರ್ಕಾರಿ ಸ್ವಾಮ್ಯದ ತೈಲ ಮತ್ತು ಅನಿಲ ಕಂಪನಿ ಹೇಳಿದೆ. ಏಕೆಂದರೆ ಅವುಗಳು ಪ್ರಧಾನ್ ಮಂತ್ರಿ ಗರಿಬ್ ಕಲ್ಯಾಣ್ ಯೋಜನೆಗೆ ಒಳಪಟ್ಟಿವೆ.

English summary
Petroleum companies increase price of commercial LPG cylinders by Rs 43. Price of a 19 kg commercial cylinder in Delhi now Rs 1736.50. On Sept 1st, price of commercial LPG cylinder was increased by Rs 75. New rates effective from today. No change in domestic LPG cylinder rates.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X