Get Updates
Get notified of breaking news, exclusive insights, and must-see stories!

ಗುಡ್‌ನ್ಯೂಸ್: PPF, NSC, ಸಣ್ಣ ಉಳಿತಾಯ ಯೋಜನೆಗಳ ಬಡ್ಡಿದರದಲ್ಲಿ ಬದಲಾವಣೆ ಇಲ್ಲ

ನವದೆಹಲಿ, ಡಿಸೆಂಬರ್ 31: ಮಾರ್ಚ್ 31, 2021 ಕ್ಕೆ ಕೊನೆಗೊಳ್ಳುವ ಪ್ರಸಕ್ತ ಹಣಕಾಸು ವರ್ಷದ ಕೊನೆಯ ತ್ರೈಮಾಸಿಕದಲ್ಲಿ ಪಿಪಿಎಫ್, ಎನ್‌ಎಸ್‌ಸಿ ಸಣ್ಣ ಉಳಿತಾಯ ಯೋಜನೆಗಳು ಅಥವಾ ಅಂಚೆ ಕಚೇರಿ ಯೋಜನೆಗಳ ಮೇಲಿನ ಬಡ್ಡಿದರಗಳನ್ನು ಬದಲಾಗದೆ ಇರಿಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ.

ಸಾರ್ವಜನಿಕ ಭವಿಷ್ಯ ನಿಧಿ (ಪಿಪಿಎಫ್) ಮತ್ತು ರಾಷ್ಟ್ರೀಯ ಉಳಿತಾಯ ಪ್ರಮಾಣಪತ್ರ (ಎನ್‌ಎಸ್‌ಸಿ) ಕ್ರಮವಾಗಿ ಶೇಕಡಾ 7.1 ಮತ್ತು ಶೇಕಡಾ 6.8ರಷ್ಟಿದೆ.

ಸಣ್ಣ ಉಳಿತಾಯ ಯೋಜನೆಗಳಿಗೆ ಬಡ್ಡಿದರಗಳನ್ನು ಹಣಕಾಸು ಸಚಿವಾಲಯವು ತ್ರೈಮಾಸಿಕ ಆಧಾರದ ಮೇಲೆ ಪ್ರಕಟಿಸುತ್ತದೆ. ಮಾರ್ಚ್ 31 ಕ್ಕೆ ಕೊನೆಗೊಳ್ಳುವ 2020-21ರ ನಾಲ್ಕನೇ ತ್ರೈಮಾಸಿಕದಲ್ಲಿ ವಿವಿಧ ಸಣ್ಣ ಉಳಿತಾಯ ಯೋಜನೆಗಳ ಬಡ್ಡಿದರಗಳು ಮೂರನೇ ತ್ರೈಮಾಸಿಕದಲ್ಲಿ (ಅಕ್ಟೋಬರ್ 1-ಡಿಸೆಂಬರ್ 31, 2020) ಅಧಿಸೂಚನೆಗೊಳಗಾದವುಗಳಿಂದ ಬದಲಾಗದೆ ಉಳಿಯುತ್ತವೆ ಎಂದು ಹಣಕಾಸು ಸಚಿವಾಲಯ ತಿಳಿಸಿದೆ.

PPF, NSC Other Small Saving Schemes Interest Rates Unchanged For Q4 Of FY 2020-21

ಈ ಮೂಲಕ ಹಿರಿಯ ನಾಗರಿಕರ ಐದು ವರ್ಷದ ಉಳಿತಾಯ ಯೋಜನೆಯ ಬಡ್ಡಿದರವನ್ನು ಶೇಕಡಾ 7.4 ಕ್ಕೆ ಉಳಿಸಿಕೊಳ್ಳಲಾಗಿದೆ. ಹೆಣ್ಣು ಮಕ್ಕಳ ಉಳಿತಾಯ ಯೋಜನೆ ಸುಕನ್ಯಾ ಸಮೃದ್ಧಿ ಯೋಜನೆ ಪ್ರಸಕ್ತ ಹಣಕಾಸು ವರ್ಷದ ಮೂರನೇ ತ್ರೈಮಾಸಿಕದಲ್ಲಿ ಶೇಕಡಾ 7.6 ಬಡ್ಡಿ ದರವನ್ನು ನೀಡಲಿದೆ.

ಇನ್ನು ಕಿಸಾನ್ ವಿಕಾಸ್ ಪತ್ರ (ಕೆವಿಪಿ) ಮೇಲಿನ ವಾರ್ಷಿಕ ಬಡ್ಡಿದರವನ್ನು ಶೇಕಡಾ 6.9ರಷ್ಟು ಉಳಿಸಿಕೊಳ್ಳಲಾಗಿದೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+