ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಸಣ್ಣ ಉಳಿತಾಯ ಯೋಜನೆಗಳ ಬಡ್ಡಿ ದರ ಕಡಿತ ಆದೇಶವನ್ನು ಹಿಂಪಡೆದ ಸರ್ಕಾರ

|
Google Oneindia Kannada News

ನವದೆಹಲಿ, ಏಪ್ರಿಲ್ 1: ಸಣ್ಣ ಉಳಿತಾಯ ಯೋಜನೆಗಳ ಬಡ್ಡಿ ದರ ಕಡಿತದ ಆದೇಶವನ್ನು ಸರ್ಕಾರ ಹಿಂಪಡೆದಿರುವುದಾಗಿ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ತಿಳಿಸಿದ್ದಾರೆ.

ಸುಕನ್ಯಾ ಸಮೃದ್ಧಿ ಯೋಜನೆ, ರಾಷ್ಟ್ರೀಯ ಉಳಿತಾಯ ಪತ್ರ, ಪಿಪಿಎಫ್, ನಿಗದಿತ ಠೇವಣಿ, ಉಳಿತಾಯ ಖಾತೆ ಸೇರಿದಂತೆ ಬಹುತೇಕ ಎಲ್ಲಾ ಉಳಿತಾಯ ಯೋಜನೆಗಳ ಮೇಲಿನ ಬಡ್ಡಿ ದರ ಇಳಿಕೆ ಮಾಡಲಾಗಿತ್ತು.

ಸಣ್ಣ ಉಳಿತಾಯ ಯೋಜನೆಗಳ ಮೇಲಿನ ಬಡ್ಡಿದರ ಇಳಿಕೆಸಣ್ಣ ಉಳಿತಾಯ ಯೋಜನೆಗಳ ಮೇಲಿನ ಬಡ್ಡಿದರ ಇಳಿಕೆ

ಪರಿಷ್ಕೃತ ಬಡ್ಡಿ ದರಗಳು ಏಪ್ರಿಲ್ 1 ರಿಂದ ಅನ್ವಯ ಆಗಲಿದ್ದು, ಏಪ್ರಿಲ್- ಜೂನ್ ತ್ರೈಮಾಸಿಕದಲ್ಲಿ ಜಾರಿಯಲ್ಲಿ ಇರಲಿದೆ ಎಂದು ಹೇಳಲಾಗಿತ್ತು.

ಬಡ್ಡಿದರ ಪರಿಷ್ಕೃತಗೊಳಿಸಿ ಆದೇಶ ಹಿಂದಕ್ಕೆ

ಬಡ್ಡಿದರ ಪರಿಷ್ಕೃತಗೊಳಿಸಿ ಆದೇಶ ಹಿಂದಕ್ಕೆ

ಸಣ್ಣ ಉಳಿತಾಯ ಯೋಜನೆಗಳ ಮೇಲೆ ಗರಿಷ್ಠ ಶೇ.1.1ರವರೆಗೆ ಬಡ್ಡಿ ಇಳಿಕೆ ಮಾಲಡಾಗಿತ್ತು. ಗುರುವಾರ ಬೆಳಗ್ಗೆ ಟ್ವೀಟ್ ಮಾಡಿರುವ ನಿರ್ಮಲಾ ಸೀತಾರಾಮನ್ ಭಾರತ ಸರ್ಕಾರದ ಸಣ್ಣ ಉಳಿತಾಯ ಯೋಜನೆಗಳ ಮೇಲಿನ ಬಡ್ಡಿದರಗಳು 2021-21 ನಾಲ್ಕನೇ ತ್ರೈಮಾಸಿಕದಲ್ಲಿ ಅಂದರೆ 2021ರ ಮಾರ್ಚ್‌ವರೆಗೆ ಇದ್ದ ದರಗಳು ಮುಂದುವರೆಯಲಿವೆ ಎಂದು ಹೇಳಿದ್ದಾರೆ.

ಪ್ರಮುಖ ಬದಲಾವಣೆಗಳು ಏನಾಗಿತ್ತು?

ಪ್ರಮುಖ ಬದಲಾವಣೆಗಳು ಏನಾಗಿತ್ತು?

ಸಾರ್ವಜನಿಕ ಭವಿಷ್ಯ ನಿಧಿ(ಪಿಪಿಎಫ್) ದರ ಶೇ 7.1ರಿಂದ ಶೇ 6.4ಕ್ಕಿಳಿದಿದೆ. ರಾಷ್ಟ್ರೀಯ ಉಳಿತಾಯ ಪ್ರಮಾಣ ಪತ್ರ(ಎನ್‌ಎಸ್‌ಸಿ) ಶೇ 6.8ರಿಂದ ಶೇ 5.9ಕ್ಕಿಳಿಸಲಾಗಿದೆ. ಸುಕನ್ಯಾ ಸಮೃದ್ಧಿ ಯೋಜನಾ (ಎಸ್ಎಸ್‌ವೈ) ಶೇ 7.6 ರಿಂದ ಶೇ 6.9ಕ್ಕಿಳಿಸಲಾಗಿದೆ. ಅಂಚೆ ಕಚೇರಿ ಹೂಡಿಕೆ ವಿವಿಧ ಅವಧಿಗೆ ಶೇ 1.1%ರಿಂದ0.40 ಕ್ಕೆ ಇಳಿಸಲಾಗಿದ್ದು, ಶೇ 4.4-5.3% ಬಡ್ಡಿ ನಿರೀಕ್ಷಿಸಬಹುದು ಎಂದು ಹೇಳಲಾಗಿತ್ತು.

ಬಡ್ಡಿಯನ್ನು 3 ತಿಂಗಳಿಗೊಮ್ಮೆ ಪರಿಷ್ಕರಣೆ

ಬಡ್ಡಿಯನ್ನು 3 ತಿಂಗಳಿಗೊಮ್ಮೆ ಪರಿಷ್ಕರಣೆ

ಸಣ್ಣ ಉಳಿತಾಯ ಯೋಜನೆಗಳ ಮೇಲಿನ ಬಡ್ಡಿಯನ್ನು ಪ್ರತಿ ಮೂರು ತಿಂಗಳಿಗೆ ಒಮ್ಮೆ ಪರಿಷ್ಕರಣೆ ಮಾಡಲಾಗುತ್ತದೆ.

ಕಿಸಾನ್ ವಿಕಾಸ್ ಪತ್ರ ಹೂಡಿಕೆ ಅವಧಿ

ಕಿಸಾನ್ ವಿಕಾಸ್ ಪತ್ರ ಹೂಡಿಕೆ ಅವಧಿ

124 ತಿಂಗಳು ಇದ್ದ ಕಿಸಾನ್ ವಿಕಾಸ ಪತ್ರ ಹೂಡಿಕೆ ಅವಧಿಯನ್ನು 138 ತಿಂಗಳ ಅವಧಿಗೆ ಹೆಚ್ಚಿಸಲಾಗಿತ್ತು. ಹಿರಿಯ ನಾಗರಿಕರ 5 ವರ್ಷಗಳ ಉಳಿತಾಯ ಯೋಜನೆಯ ಮೇಲಿನ ಬಡ್ಡಿ ಶೇ.0.9ರಷ್ಟು ಇಳಿಕೆ ಮಾಡಲಾಗಿತ್ತು. ಹಾಗೂ ಪಿಪಿಎಫ್ ಬಡ್ಡಿ ದರ ಶೇ.6.4ರಷ್ಟು ನಿಗದಿ ಮಾಡಲಾಗಿತ್ತು.

Recommended Video

ಇವರ ಕೆಟ್ಟ ಆಡಳಿತದ ವಿರುದ್ಧ ನಾವು ಹೋರಾಟ ಮಾಡ್ತೀವಿ ! | DK Shivakumar | Oneindia Kannada

ಕ್ಷಣ ಕ್ಷಣದ ಸುದ್ದಿಗಳಿಗಾಗಿ ಒನ್ ಇಂಡಿಯಾ ಕನ್ನಡ ಟೆಲಿಗ್ರಾಂ ಚಾನಲ್ ಸೇರಿ

English summary
The government on Thursday withdrawn the order which slashed interest rates on Public Provident Fund (PPF) and other small savings schemes for the June quarter.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X