• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಹೂಡಿಕೆದಾರರ ಸಮಾವೇಶದ ಸಿದ್ಧತೆ: ಜಪಾನ್‌ಗೆ ಮುರುಗೇಶ್ ನಿರಾಣಿ ಭೇಟಿ

|
Google Oneindia Kannada News

ಟೋಕಿಯೋ, ಆಗಸ್ಟ್‌ 06: ನವೆಂಬರ್‌ನಲ್ಲಿ ಬೆಂಗಳೂರಿನಲ್ಲಿ 'ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶ' ನಡೆಯಲಿದೆ. ಈ ಸಂಬಂಧ ಸಿದ್ಧತೆ ಚುರುಕುಗೊಳಿಸಿರುವ ಸಚಿವ ಮುರುಗೇಶ್ ನಿರಾಣಿ ಮತ್ತವರ ನಿಯೋಗವು ಉದ್ಯಮಿಗಳೊಂದಿಗೆ ಸಮಾಲೋಚನೆಗಾಗಿ ಜಪಾನ್‌ಗೆ ತೆರಳಿದೆ.

ಉದ್ಯಮ ಕ್ಷೇತ್ರದಲ್ಲಿ ಕರ್ನಾಟಕ ಮತ್ತು ಜಪಾನ್ ನಡುವಿನ ಔದ್ಯಮಿಕ ಸಂಬಂಧ ಉತ್ತಮವಾಗಿದೆ. ವಿಶೇಷವಾಗಿ, ಜಪಾನ್‌ಗೆ ಸಂಬಂಧಿಸಿದಂತೆ, ತುಮಕೂರಿನ ವಸಂತನರಸಪುರದಲ್ಲಿ ಜಪಾನೀಸ್‌ ಕೈಗಾರಿಕಾ ಟೌನ್‌ಶಿಪ್ ಸ್ಥಾಪಿಸಲಾಗಿದೆ. ಅದಕ್ಕಾಗಿ 519.55 ಎಕರೆ ಭೂಮಿ ಮೀಸಲಿಡಲಾಗಿದ್ದು, ಮೂಲ ಸೌಲಭ್ಯಗಳನ್ನು ಕಲ್ಪಿಸಲಾಗಿದೆ. ಜಪಾನಿನ ಕಂಪನಿಗಳಿಂದ ನೇರ ಹೂಡಿಕೆಗೆ ಎಲ್ಲಾ ರೀತಿಯ ಸಹಕಾರ ಒದಗಿಸಲಾಗುವುದು ಎಂದು ಬೃಹತ್‌ ಮತ್ತು ಮಧ್ಯಮ ಕೈಗಾರಿಕೆ ಸಚಿವ ಡಾ.ಮುರುಗೇಶ್ ನಿರಾಣಿ ತಿಳಿಸಿದರು.

ಜಪಾನ್ ಭೇಟಿ ವೇಳೆ ಅಲ್ಲಿನ 'ಟೋಕಿಯೋ ಕನ್ನಡ ಬಳಗ' ಶನಿವಾರ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಜತೆಗೆ ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶದಲ್ಲಿ ಪಾಲ್ಗೊಂಡು ಕಾರ್ಯಕ್ರಮ ಯಶಸ್ವಿಗೊಳಿಸುವಂತೆ ಟೋಕಿಯೋ ಕನ್ನಡ ಬಳಗವನ್ನು ಅವರು ಇದೇ ವೇಳೆ ಆಹ್ವಾನಿಸಿದ್ದಾರೆ.

ಬಂಡವಾಳ ಹೂಡಿಕೆ ಆಕರ್ಷಣೆಯಲ್ಲಿ ರಾಜ್ಯ ಮುಂದಿದೆ

ಹೆಚ್ಚಿನ ಆರ್ಥಿಕ ಪ್ರಗತಿ ಸಾಧಿಸುವ ಉದ್ದೇಶದಿಂದ ಎಲ್ಲಾ ಕ್ಷೇತ್ರಗಳಲ್ಲಿ ವಿದೇಶಿ ಕಂಪನಿಗಳ ನೇರ ಹೂಡಿಕೆಯನ್ನು ರಾಜ್ಯ ಸರ್ಕಾರ ಉತ್ತೇಜಿಸುತ್ತಿದೆ. ಅತೀ ಹೆಚ್ಚು ವಿದೇಶಿ ನೇರ ಬಂಡವಾಳ ಆಕರ್ಷಿಸಿರುವ ರಾಜ್ಯಗಳ ಸಾಲಿನಲ್ಲಿ ಕರ್ನಾಟಕ ಮೊದಲ ಸ್ಥಾನದಲ್ಲಿದೆ. ದೇಶದ ಒಟ್ಟಾರೆ ವಿದೇಶಿ ನೇರ ಹೂಡಿಕೆಯಲ್ಲಿ ನಮ್ಮ ರಾಜ್ಯದ ಪಾಲು ಶೇ.38ರಷ್ಟಿದೆ ಎಂದು ಅವರು ವಿವರಿಸಿದರು.

ಪ್ರಧಾನಿ ನರೇಂದ್ರ ಮೋದಿ ಅವರ ದೂರದೃಷ್ಟಿಯ ಫಲವಾಗಿ ಭಾರತ ಇಂದು ಜಾಗತಿಕ ಮಟ್ಟದಲ್ಲಿ ಸ್ಪರ್ಧೆ ಒಡ್ಡುವ ಮಟ್ಟಕ್ಕೇರಿದೆ. ದಾವೋಸ್‌ನಲ್ಲಿ ನಡೆದ ವಿಶ್ವ ಆರ್ಥಿಕ ಶೃಂಗ ಸಭೆ ಫಲಪ್ರದವಾಗಿದ್ದು, ಬಂಡವಾಳ ಹೂಡಿಕೆ ಆಕರ್ಷಿಸುವಲ್ಲಿ ಕರ್ನಾಟಕ ಯಶಸ್ವಿಯಾಗಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನೇತೃತ್ವದಲ್ಲಿ ಕಳೆದ 3ರಿಂದ 4 ತಿಂಗಳಿಂದೀಚೆಗೆ ಬರೋಬ್ಬರಿ 1ಲಕ್ಷ ಕೋಟಿ ರೂಪಾಯಿ ಮೊತ್ತದ ಒಪ್ಪಂದಗಳಿಗೆ ಸಹಿ ಮಾಡಲಾಗಿದೆ. ಇದು ರಾಜ್ಯದ ಮೇಲೆ ದೊಡ್ಡ ದೊಡ್ಡ ಕಂಪನಿಗಳು ಇಟ್ಟಿರುವ ನಂಬಿಕೆ ಮತ್ತು ವಿಶ್ವಾಸಕ್ಕೆ ಸಾಕ್ಷಿ ಎಂದು ಅವರು ಹರ್ಷ ವ್ಯಕ್ತಪಡಿಸಿದರು.

 Preparations for investors conference Murugesh Nirani visit to Japan

ಇದೇ ಸಂದರ್ಭದಲ್ಲಿ ಮಾತನಾಡಿದ ಟೋಕಿಯೊ ಕನ್ನಡ ಬಳಗದ ಗಣೇಶ್‌ ಕೃಷ್ಣಯ್ಯ, ಟೋಕಿಯೋ ಕನ್ನಡ ಬಳಗದಲ್ಲಿ 1,000ಕ್ಕೂಹೆಚ್ಚು ಸದಸ್ಯರಿದ್ದಾರೆ. ಜಪಾನಿನ ಅಭಿವೃದ್ಧಿಗೆ ನೀಡಿರುವ ಕೊಡುಗೆಯನ್ನು ಪರಿಗಣಿಸಿ ಹಲವು ಕನ್ನಡಿಗರು ಇಲ್ಲಿನ ಸರ್ಕಾರದ ಗೌರವಕ್ಕೆ ಪಾತ್ರರಾಗಿದ್ದಾರೆ. ಕನ್ನಡ ಬಳಗ ಆಯೋಜಿಸುವ ಯುಗಾದಿ ಉತ್ಸವದಲ್ಲಿ ಜಪಾನ್‌ ನಾಗರಿಕರು ಪಾಲ್ಗೊಂಡು ಸಂಭ್ರಮಿಸುತ್ತಾರೆ ಎಂದು ಅವರು ತಿಳಿಸಿದರು.

ಜಪಾನ್ ಕನ್ನಡಿಗರ ಹರ್ಷೋದ್ಘಾರ

ಜಪಾನ್ ಭೇಟಿ ವೇಳೆ ಟೋಕಿಯೋ ಕನ್ನಡ ಬಳಗದ ಕಾರ್ಯಕ್ರಮದಲ್ಲಿ ಹರ್ಷದಿಂದಲೇ ಪಾಲ್ಗೊಂಡ ಸಚಿವ ಮುರುಗೇಶ್ ನಿರಾಣಿಯವರು ಕಾರ್ಯಕ್ರಮವನ್ನು ಕನ್ನಡ ಮಾತನಾಡುವ ಮೂಲಕವೇ ಆರಂಭಿಸಿದ್ದಾರೆ. ತಮ್ಮ ಭಾಷಣದ ಆರಂಭದಲ್ಲಿ 'ಎಲ್ಲಾದರು ಇರು ಎಂತಾದರು ಇರು, ಎಂದೆಂದಿಗು ನೀ ಕನ್ನಡವಾಗಿರು'....ಎಂಬ ಕವಿವಾಣಿಯೊಂದಿಗೆ ಸಚಿವರು ಮಾತು ಆರಂಭಿಸಿದರು. ಇದನ್ನು ಕೇಳಿದ ಅಲ್ಲಿನ ಕನ್ನಡಿಗರ ಹರ್ಷೋದ್ಘಾರ ಮುಗಿಲು ಮುಟ್ಟಿತ್ತು ಎನ್ನಲಾಗಿದೆ.

ಕಾರ್ಯಕ್ರಮದಲ್ಲಿ ಭಾರತೀಯ ರಾಯಭಾರ ಕಚೇರಿಯ ಉಪ ಮುಖ್ಯಸ್ಥ ಮಯಾಂಕ್ ಜೋಶಿ ಮತ್ತು ಭಾರತೀಯ ರಾಯಭಾರಿ ಕಚೇರಿಯ ಮೊದಲ ಕಾರ್ಯದರ್ಶಿ ಮನೋಜ್ ಸಿಂಗ್ ನೇಗಿ, ಕನ್ನಡ ಬಳಗದ ಸದಸ್ಯರು ಮತ್ತಿತರರು ಪಾಲ್ಗೊಂಡಿದ್ದರು.

English summary
Preparations for Globle Investors' conference at Bengaluru on November minister Murugesh Nirani visit to Japan.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X