ಎಲ್ಲಾ ಸಹಕಾರಿ ಬ್ಯಾಂಕುಗಳು ಆರ್‌ಬಿಐ ವ್ಯಾಪ್ತಿಗೆ: ರಾಷ್ಟ್ರಪತಿ ಅಂಕಿತ

ನವದೆಹಲಿ, ಜೂನ್ 27: ದೇಶದ ಎಲ್ಲ ಸಹಕಾರಿ ಬ್ಯಾಂಕ್‌ಗಳನ್ನು ಆರ್‌ಬಿಐ ವ್ಯಾಪ್ತಿಗೆ ತರಲು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಶನಿವಾರ ಅಂಕಿತ ಹಾಕಿದ್ದಾರೆ.

Recommended Video

      ಇಂತಹ ಪರಿಸ್ಥಿತಿ ಯಾರಿಗೂ ಬರಬಾರದು. | Andhra Pradesh | Oneindia Kannada

      ಕೇಂದ್ರ ಸರ್ಕಾರದ ಮಹತ್ವದ ಸುಗ್ರೀವಾಜ್ಞೆಗೆ ರಾಷ್ಟ್ರಪತಿ ಸಮ್ಮತಿ ಸೂಚಿಸಿದ್ದಾರೆ.ಬ್ಯಾಂಕಿಂಗ್ ನಿಯಂತ್ರಣ (ತಿದ್ದುಪಡಿ) ಮಸೂದೆ - 2020 ಈ ವರ್ಷದ ಬಜೆಟ್‌ ಅಧಿವೇಶನದಲ್ಲಿ ಮಂಡಿಸಲು ಸರ್ಕಾರ ಮುಂದಾಗಿತ್ತು. ಆದರೆ ಕೋವಿಡ್‌ 19ನಿಂದಾಗಿ ಅಧಿವೇಶನವನ್ನು ಮುಂದೂಡಿದ್ದರಿಂದ ಮಸೂದೆ ಪಾಸ್‌ ಆಗಿರಲಿಲ್ಲ.

      ಹೀಗಾಗಿ ಸಹಕಾರಿ ಬ್ಯಾಂಕುಗಳಲ್ಲಿ ಠೇವಣಿ ಇರಿಸಿರುವ ಗ್ರಾಹಕರ ಹಿತವನ್ನು ಕಾಯಲು ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ಸರ್ಕಾರ ತಿಳಿಸಿತ್ತು.

      President Promulgates Ordinance To Bring Co-Operative Banks Under RBI Supervision

      ವಂಚನೆ ಪ್ರಕರಣಗಳು ಹೆಚ್ಚಾಗುತ್ತಿರುವ ಕಾರಣ ಸಹಕಾರಿ ಬ್ಯಾಂಕುಗಳು ಇನ್ನು ಮುಂದೆ ರಿಸರ್ವ್‌ ಬ್ಯಾಂಕ್‌ ಅಡಿಯಲ್ಲಿ ತರುವ ಕುರಿತು ಈ ಹಿಂದೆ ಕೇಂದ್ರ ಸರ್ಕಾರ ಸುಗ್ರೀವಾಜ್ಞೆ ಹೊರಡಿಸಿತ್ತು. ಈ ಕುರಿತಂತೆ ನಡೆದಿದ್ದ ಸಚಿವ ಸಂಪುಟ ಸಭೆಯ ಒಪ್ಪಿಗೆ ಪಡೆದು ಕೇಂದ್ರ ಸರ್ಕಾರ ಈ ಸುಗ್ರೀವಾಜ್ಞೆಯನ್ನು ಹೊರಡಿಸಿತ್ತು.

      ಬಳಿಕ ಇದನ್ನು ರಾಷ್ಟ್ರಪತಿಗಳ ಅಂಕಿತಕ್ಕೆ ಕಳುಹಿಸಲಾಗಿತ್ತು. ಇದೀಗ ಈ ಸುಗ್ರೀವಾಜ್ಞೆಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಅಂಕಿತ ಹಾಕಿದ್ದಾರೆ.

      ಕರ್ನಾಟಕದಲ್ಲೂ ಇಂತಹುದೇ ಹಗರಣ ಕೇಳಿಬಂದಿತ್ತು. ಬೆಂಗಳೂರಿನ ಗುರು ರಾಘವೇಂದ್ರ ಕೋ ಆಪರೇಟಿವ್‌ ಬ್ಯಾಂಕ್‌ನಲ್ಲಿ ಇತ್ತೀಚೆಗೆ ಹಗರಣ ನಡೆದಿದ್ದು, ಆರ್‌ಬಿಐ ಈ ಬ್ಯಾಂಕ್‌ನ ವ್ಯವಹಾರದ ಮೇಲೆ ನಿರ್ಬಂಧಗಳನ್ನು ವಿಧಿಸಿ ತನಿಖೆ ನಡೆಸಿದೆ.

      ಪಂಜಾಬ್ ಮಹಾರಾಷ್ಟ್ರ ಸಹಕಾರ ಬ್ಯಾಂಕ್ ನಲ್ಲಿ ನಡೆದ ಅವ್ಯವಹಾರ ಬೆಳಕಿಗೆ ಬಂದ ನಂತರ ಗ್ರಾಹಕರ ಹಿತವನ್ನು ಸರ್ಕಾರ ಕಾಪಾಡಬೇಕು ಎಂಬ ಆಗ್ರಹ ಕೇಳಿಬಂದಿತ್ತು. ಈ ವರ್ಷದ ಬಜೆಟ್‌ನಲ್ಲಿ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವುರ ಆರ್‌ಬಿಐ ಅಡಿಯಲ್ಲಿ ಸಹಕಾರಿ ಬ್ಯಾಂಕುಗಳು ತರಲಾಗುವುದು ಎಂದು ತಿಳಿಸಿದ್ದರು.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+