ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಸಬ್ಸಿಡಿ ರಹಿತ ಅಡುಗೆ ಅನಿಲ ಸಿಲಿಂಡರ್ ಬೆಲೆ ಇಳಿಕೆ

|
Google Oneindia Kannada News

ನವದೆಹಲಿ, ಜುಲೈ 01: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆ ಮುಂದುವರೆದಿದೆ. ಲೋಕಸಭೆ ಚುನಾವಣೆ ಸಂದರ್ಭದಲ್ಲಿ ಬೆಲೆ ಏರಿಕೆ ಮಾಡದೆ ನಷ್ಟ ಅನುಭವಿಸಿದ್ದ ಸರ್ಕಾರಿ ಸ್ವಾಮ್ಯದ ಸಂಸ್ಥೆಗಳು ಈಗ ಎರಡನೇ ಬಾರಿಗೆ ಅಡುಗೆ ಅನಿಲ ದರವನ್ನು ಪರಿಷ್ಕರಿಸಿವೆ.

ಗೃಹ ಬಳಕೆಯ 14.2 ಕೆಜಿ ಅಡುಗೆ ಅನಿಲ ಸಿಲಿಂಡರ್ ಬೆಲೆ ಇಳಿಕೆ ಮಾಡಲಾಗಿದೆ. ಪ್ರತಿ ಸಿಲಿಂಡರ್ ಬೆಲೆಯಲ್ಲಿ 100.05 ರು ತಗ್ಗಿಸಲಾಗಿದೆ. ಹೊಸ ದರದ ಪ್ರಕಾರ, ಅಡುಗೆ ಅನಿಲ ಬೆಲೆ ಭಾನುವಾರ(ಜೂನ್ 30) ಮಧ್ಯರಾತ್ರಿಯಿಂದ ಪರಿಷ್ಕರಣೆಗೊಂಡು 637ರು ಪ್ರತಿ ಸಿಲಿಂಡರ್ ಆಗಲಿದೆ. ಇದಕ್ಕೂ ಮುನ್ನ 737.50ರು ನಷ್ಟಿತ್ತು. ಇದೇ ವೇಳೆ ಸಬ್ಸಿಡಿಯುಳ್ಳ ಅಡುಗೆ ಅನಿಲ ಸಿಲಿಂಡರ್ ಬೆಲೆ 494.35 ರು ಆಗಿದೆ.

Price of Non-Subsidised LPG reduced

ಜುಲೈ ತಿಂಗಳಿನಲ್ಲಿ ಇದೇ ಪರಿಷ್ಕೃತ ದರ ಮುಂದುವರೆಯಲಿದ್ದು, 142.65 ರು ಪ್ರತಿ ಸಿಲಿಂಡರ್ ಸಬ್ಸಿಡಿ ಮೊತ್ತವು ಗ್ರಾಹಕರ ಬ್ಯಾಂಕ್ ಖಾತೆಗೆ ನೇರವಾಗಿ ಸೇರಲಿದೆ ಎಂದು ಇಂಡಿಯನ್ ಆಯಿಲ್ ಕಾರ್ಪೊರೇಷನ್ ತಿಳಿಸಿದೆ.

ಮೋದಿ ಅಧಿಕಾರಕ್ಕೆ ಬಂದ ಬಳಿಕ ಎಲ್ ಪಿಜಿ ಸಿಲಿಂಡರ್ ಬೆಲೆ ಏರಿಕೆಮೋದಿ ಅಧಿಕಾರಕ್ಕೆ ಬಂದ ಬಳಿಕ ಎಲ್ ಪಿಜಿ ಸಿಲಿಂಡರ್ ಬೆಲೆ ಏರಿಕೆ

ಜೂನ್ 02ರಂದು ಸಬ್ಸಿಡಿ ರಹಿತ ಗ್ಯಾಸ್ ಬೆಲೆ 25 ರೂ. ಏರಿಕೆಯಾಗಿತ್ತು. ಸಬ್ಸಿಡಿ ಇರುವ ಗ್ಯಾಸ್ ಸಿಲಿಂಡರ್ ಬೆಲೆ 1.23 ರೂ.ಏರಿಕೆಯಾಗಿತ್ತು ಸತತ ನಾಲ್ಕನೇ ಬಾರಿಗೆ ಎಲ್ ಪಿಜಿ ಬೆಲೆ ಏರಿಕೆಯಾಗಿತ್ತು. ಜುಲೈ ತಿಂಗಳಿನಲ್ಲಿ ಬೆಲೆ ಇಳಿಕೆ ಮಾಡಲಾಗಿದೆ.

English summary
The price of Non-Susidised LPG was reduced by Rs 100.05 per cylinder. Under new rates, the cooking gas will cost Rs 637 per cylinder from midnight Jun 30,2019 as against Rs 737.50 currently.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X