ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಸಬ್ಸಿಡಿ ರಹಿತ ಎಲ್ ಪಿಜಿ ಸಿಲಿಂಡರ್ ಬೆಲೆ ತುಸು ಏರಿಕೆ

|
Google Oneindia Kannada News

ನವದೆಹಲಿ, ಅಕ್ಟೋಬರ್ 01: ನರೇಂದ್ರ ಮೋದಿ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳು ಪ್ರತಿ ತಿಂಗಳ ಅಡುಗೆ ಅನಿಲ ಸಿಲಿಂಡರ್ ಬೆಲೆ ಪರಿಷ್ಕರಣೆ ಮುಂದುವರೆಸಿವೆ. ಅಕ್ಟೋಬರ್ ತಿಂಗಳ ಆರಂಭದಿನದಂದು ಸಬ್ಸಿಡಿ ರಹಿತ 14.2 ಕೆ.ಜಿ ಅಡುಗೆ ಅನಿಲ ಸಿಲಿಂಡರ್ ಬೆಲೆ ತುಸು ಏರಿಕೆಯಾಗಿದೆ.

ಮಂಗಳವಾರದಂದು ಎಲ್ಪಿಜಿ ಸಿಲಿಂದರ್ ಬೆಲೆ 13.5 ರು ಏರಿಕೆ ಮಾಡಿ ಸರ್ಕಾರಿ ಸ್ವಾಮ್ಯದ ಇಂಡಿಯನ್ ಆಯಿಲ್ ಕಾರ್ಪೊರೆಷನ್(ಐಒಸಿ) ಆದೇಶ ನೀಡಿದೆ. ಸೆಪ್ಟೆಂಬರ್ 01ರಂದು ಸಬ್ಸಿಡಿ ರಹಿತ ಎಲ್ ಪಿಜಿ ಸಿಲಿಂಡರ್ ಬೆಲೆ ಪ್ರತಿ ಸಿಲಿಂಡರ್ ಗೆ 15.5 ರು ಏರಿಕೆಯಾಗಿತ್ತು.

1 ರು ಇಡ್ಲಿ 'ಅಜ್ಜಿ' ಬಾಳಲ್ಲಿ ಬೆಳಕು ಮೂಡಿಸಿದ ಆನಂದ್ ಮಹೀಂದ್ರಾ ಟ್ವೀಟ್1 ರು ಇಡ್ಲಿ 'ಅಜ್ಜಿ' ಬಾಳಲ್ಲಿ ಬೆಳಕು ಮೂಡಿಸಿದ ಆನಂದ್ ಮಹೀಂದ್ರಾ ಟ್ವೀಟ್

ಪರಿಷ್ಕೃತ ದರ ಪಟ್ಟಿಯಂತೆ ಅಕ್ಟೋಬರ್ 01ರಿಂದ ದೆಹಲಿಯಲ್ಲಿ, 14.2 ಕೆ.ಜಿ ಸಬ್ಸಿಡಿ ರಹಿತ ಅನಿಲ ಸಿಲಿಂಡರ್ ಬೆಲೆ 605 ರೂಪಾಯಿ( 590ರು ಈ ಹಿಂದಿನ ದರ) ಯಾಗಿದೆ.19 ಕೆ.ಜಿ ಸಿಲಿಂಡರ್ ಬೆಲೆ 1085 ರೂಪಾಯಿಯಾಗಿದೆ.

ಮುಂಬೈಯಲ್ಲಿ ಸಬ್ಸಿಡಿ ರಹಿತ ಅನಿಲ ಸಿಲಿಂಡರ್ ಬೆಲೆ 574.5ರು ಕೋಲ್ಕತ್ತಾದಲ್ಲಿ 630 ರೂಪಾಯಿ ಹಾಗೂ ಚೆನ್ನೈನಲ್ಲಿ 620 ರೂಪಾಯಿಯಾಗಿದೆ. ಅಕ್ಟೋಬರ್ ಒಂದರಿಂದ ಜಾರಿಗೆ ಬರಲಿರುವ ದರಗಳು ಇನ್ನು ಆರು ತಿಂಗಳು ಜಾರಿಯಲ್ಲಿರಲಿದೆ.

ತೈಲ ಪೂರೈಕೆಯಲ್ಲಿ ವ್ಯತ್ಯಯವಾಗಿತ್ತು

ತೈಲ ಪೂರೈಕೆಯಲ್ಲಿ ವ್ಯತ್ಯಯವಾಗಿತ್ತು

ಸೌದಿ ತೈಲ ಘಟಕದ ಮೇಲೆ ಡ್ರೋನ್ ದಾಳಿ ಬಳಿಕ ತೈಲ ಪೂರೈಕೆಯಲ್ಲಿ ವ್ಯತ್ಯಯವಾಗಿತ್ತು. ಆದರೆ, ಭಾರತಕ್ಕೆ ಅಗತ್ಯ ಇಂಧನ ಪೂರೈಸುವ ಭರವಸೆಯನ್ನು ಸೌದಿ ಅರೇಬಿಯಾ ನೀಡಿದೆ. ಈ ನಡುವೆ ಒಎನ್‌ಜಿಸಿ ಮತ್ತು ಆಯಿಲ್ ಇಂಡಿಯಾ ಲಿಮಿಟೆಡ್ (ಐಒಸಿಎಲ್) ಉತ್ಪಾದಿಸುವ ನೈಸರ್ಗಿಕ ಅನಿಲದ ಬೆಲೆ ಇಳಿಕೆಯಾಗಿದೆ. ಹೊಸ ಬೆಲೆ ಅಕ್ಟೋಬರ್ ಒಂದರಿಂದ ಇನ್ನು ಆರು ತಿಂಗಳು ಜಾರಿಯಲ್ಲಿರಲಿದೆ. ನೈಸರ್ಗಿಕ ಅನಿಲ ಬೆಲೆಗಳನ್ನು ಪ್ರತಿ ಆರು ತಿಂಗಳಿಗೊಮ್ಮೆ ನಿಗದಿಪಡಿಸಲಾಗುತ್ತದೆ. ಪ್ರತಿ ವರ್ಷ ಏಪ್ರಿಲ್ 1 ಮತ್ತು ಅಕ್ಟೋಬರ್ 1 ರಂದು ಅನಿಲ ಬೆಲೆಗಳನ್ನು ಬದಲಾಯಿಸಲಾಗುತ್ತದೆ.

ಆಗಸ್ಟ್ 01ರಲ್ಲಿ ಬೆಲೆ ಇಳಿಕೆಯಾಗಿತ್ತು

ಆಗಸ್ಟ್ 01ರಲ್ಲಿ ಬೆಲೆ ಇಳಿಕೆಯಾಗಿತ್ತು

ಆಗಸ್ಟ್ 01ರಂದು ಗೃಹ ಬಳಕೆಯ 14.2 ಕೆಜಿ ಅಡುಗೆ ಅನಿಲ ಸಿಲಿಂಡರ್ ಬೆಲೆ ಇಳಿಕೆಯಾಗಿತ್ತು. ಪ್ರತಿ ಸಿಲಿಂಡರ್ ಬೆಲೆಯಲ್ಲಿ 62.5 ರು ಇಳಿಕೆಯಾಗಿದ್ದು, 637 ರೂ.ನಿಂದ 574.5 ರೂ. ಗೆ ಇಳಿಕೆ ಮಾಡಲಾಗಿತ್ತು. ಜೂನ್ 02ರಂದು ಸಬ್ಸಿಡಿ ರಹಿತ ಗ್ಯಾಸ್ ಬೆಲೆ 25 ರೂ. ಏರಿಕೆಯಾಗಿತ್ತು. ಸಬ್ಸಿಡಿ ಇರುವ ಗ್ಯಾಸ್ ಸಿಲಿಂಡರ್ ಬೆಲೆ 1.23 ರೂ.ಏರಿಕೆಯಾಗಿತ್ತು ಸತತ ನಾಲ್ಕನೇ ಬಾರಿಗೆ ಎಲ್ ಪಿಜಿ ಬೆಲೆ ಏರಿಕೆಯಾಗಿತ್ತು

ಸೆಪ್ಟೆಂಬರ್ ನಿಂದ ಬೆಲೆ ಏರಿಕೆ

ಸೆಪ್ಟೆಂಬರ್ ನಿಂದ ಬೆಲೆ ಏರಿಕೆ

ಜುಲೈ ಹಾಗೂ ಆಗಸ್ಟ್ ತಿಂಗಳಿನಲ್ಲಿ ಇಳಿಕೆ ಕಂಡು ಬಂದಿತ್ತು. ಆದರೆ ಈಗ ಮತ್ತೊಮ್ಮೆ ಬೆಲೆ ಏರಿಕೆಯಾಗಿದೆ. ಎಲ್ಲ ಎಲ್ ಪಿಜಿ ಗ್ರಾಹಕರೂ ಮಾರುಕಟ್ಟೆ ಬೆಲೆಯಲ್ಲಿ ಅನಿಲ ಖರೀದಿ ಮಾಡಬೇಕಿದೆ. ವರ್ಷಕ್ಕೆ 14.2 ಕೆಜಿ ತೂಕದ 12 ಸಿಲಿಂಡರ್‌ಗಳಿಗೆ ಸರ್ಕಾರ ಸಬ್ಸಿಡಿ ಒದಗಿಸುತ್ತಿದ್ದು, ಅದು ನೇರವಾಗಿ ಗ್ರಾಹಕರ ಬ್ಯಾಂಕ್ ಖಾತೆಗೆ ಜಮೆಯಾಗುತ್ತಿದೆ.

ಆರು ತಿಂಗಳು ಇದೇ ದರ ಬಹುತೇಕ ಖಚಿತ

ಆರು ತಿಂಗಳು ಇದೇ ದರ ಬಹುತೇಕ ಖಚಿತ

ಗಮನಿಸಿ: ಸರ್ಕಾರಿ ಸ್ವಾಮ್ಯದ ಇಂಧನ ಕಂಪನಿಗಳಾದ ಇಂಡಿಯನ್ ಆಯಿಲ್ ಕಾರ್ಪೊರೇಷನ್, ಹಿಂದೂಸ್ತಾನ್ ಪೆಟ್ರೋಲಿಯಂ, ಭಾರತ್ ಪೆಟ್ರೋಲಿಯಂ ಪ್ರತಿ ತಿಂಗಳ ಮೊದಲ ದಿನದಂದು ಇಂಧನ ದರ, ಸಬ್ಸಿಡಿ ರಹಿತ ಎಲ್ ಪಿಜಿ, ಜೆಟ್ ಇಂಧನ, ಸೀಮೆಎಣ್ಣೆ ಬೆಲೆ ಬಗ್ಗೆ ನಿರ್ಧಾರ ಕೈಗೊಳ್ಳುತ್ತವೆ. ಬೆಲೆ ಏರಿಕೆ ಹಾಗೂ ಇಳಿಕೆ ಎಲ್ಲವೂ ಜಾಗತಿಕ ಮಾರುಕಟ್ಟೆ ದರದ ಮೇಲೆ ಅವಲಂಬಿತವಾಗಿರುತ್ತದೆ.

English summary
Prices of non-subsidized 14.2 kg LPG (liquid petroleum gas) cylinders were raised marginally by an average of Rs 13.5 by the state-owned Indian Oil Corporation Limited (IOC).
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X