ರೆಪೋ, ರಿವರ್ಸ್ ರೆಪೋದಲ್ಲಿ ಬದಲಾವಣೆ ಮಾಡದ ರಿಸರ್ವ್ ಬ್ಯಾಂಕ್

Subscribe to Oneindia Kannada

ನವದೆಹಲಿ, ಡಿಸೆಂಬರ್ 6: ರಿಸರ್ವ್‌ ಬ್ಯಾಂಕ್‌ ಆಫ್ ಇಂಡಿಯಾವು ತನ್ನ ಹಣಕಾಸು ನೀತಿ ಪರಾಮರ್ಶೆಯಲ್ಲಿ ಅಲ್ಪಾವಧಿ ಬಡ್ಡಿ ದರಗಳಲ್ಲಿ ಯಾವುದೇ ಬದಲಾವಣೆಗಳನ್ನು ಮಾಡಿಲ್ಲ.

ಬ್ಯಾಂಕ್‌ಗಳಿಗೆ ರಿಸರ್ವ್ ಬ್ಯಾಂಕ್ ನಿಂದ ನೀಡುವ ಸಾಲದ ಬಡ್ಡಿ ದರವನ್ನು (ರೆಪೋ) ಶೇ 6.00 ಮತ್ತು ಕಮರ್ಷಿಯಲ್ ಬ್ಯಾಂಕ್‌ಗಳಿಂದ ಪಡೆಯುವ ಸಾಲಕ್ಕೆ ಪಾವತಿಸುವ ಬಡ್ಡಿ ದರವನ್ನು (ರಿವರ್ಸ್‌ ರೆಪೋ) ಶೇ 5.75ರ ಮಟ್ಟದಲ್ಲಿಯೇ ಉಳಿಸಿಕೊಳ್ಳುವ ನಿರ್ಧಾರ ಕೈಗೊಳ್ಳಲಾಗಿದೆ.

RBI keeps key repo rate unchanged at 6.00%

ರೆಪೊ ದರ ಇಳಿಕೆ ಆಗದೇ ಇರುವುದರಿಂದ ಗೃಹ ಸಾಲದ ಬಡ್ಡಿ ದರದಲ್ಲಿ ಇಳಿಕೆಯಾಗುವ ನಿರೀಕ್ಷೆ ಕಡಿಮೆಯಾಗಿದೆ.

ಈ ಕುರಿತು ಪತ್ರಿಕಾಗೋಷ್ಠಿಯಲ್ಲಿ ವಿವರ ನೀಡಿದ ಆರ್.ಬಿ.ಐ ಗವರ್ನರ್ ಊರ್ಜಿತ್ ಪಟೇಲ್, "ಸದ್ಯ ತೆಗೆದುಕೊಳ್ಳಲಾಗಿರುವ ಸುಧಾರಣಾ ಕ್ರಮಗಳು ಮುಂದಿನ ದಿನಗಳಲ್ಲಿ ಬೆಳವಣಿಗೆ ದರ ವೃದ್ಧಿಯಾಗಲು ಸಹಕಾರಿಯಾಗಲಿವೆ," ಎಂದು ಹೇಳಿದ್ದಾರೆ.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
The Reserve Bank of India on Wednesday kept the repo rate of 6.00% unchanged, at the end of its two-day long policy review meet.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ