• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

Breaking: ರೆಪೋ ದರದಲ್ಲಿ 50 ಬೇಸಿಸ್ ಪಾಯಿಂಟ್ ಏರಿಕೆ

|
Google Oneindia Kannada News

ನವದೆಹಲಿ, ಸೆಪ್ಟೆಂಬರ್ 30: ಭಾರತೀಯ ರಿಸರ್ವ್ ಬ್ಯಾಂಕ್ (ಆರ್‌ಬಿಐ) ಗವರ್ನರ್ ಶಕ್ತಿಕಾಂತ ದಾಸ್ ತಕ್ಷಣದಿಂದ ಜಾರಿಗೆ ಬರುವಂತೆ ರೆಪೊ ದರದಲ್ಲಿ 50 ಬೇಸಿಸ್ ಪಾಯಿಂಟ್‌ಗಳನ್ನು 5.9ಕ್ಕೆ ಹೆಚ್ಚಿಸುವುದಾಗಿ ಘೋಷಿಸಿದ್ದಾರೆ.

ಸ್ಥಾಯಿ ಠೇವಣಿ ಸೌಲಭ್ಯವನ್ನು ಶೇಕಡಾ 5.6ಕ್ಕೆ ಹೊಂದಿಸಲಾಗಿದ್ದು, ಮಾರ್ಜಿನಲ್ ಸ್ಟ್ಯಾಂಡಿಂಗ್ ಸೌಲಭ್ಯ ಮತ್ತು ಬ್ಯಾಂಕ್ ದರವನ್ನು ಶೇಕಡಾ 6.15ಕ್ಕೆ ಹೊಂದಿಸಲಾಗಿದೆ ಎಂದು ಭಾರತೀಯ ರಿಸರ್ವ್ ಬ್ಯಾಂಕ್ ಮಾಹಿತಿ ನೀಡಿದೆ.

ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್‌: ಅಕ್ಟೋಬರ್ 1ರಿಂದ ಈ ಹೊಸ ನಿಯಮಗಳು ಜಾರಿ?ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್‌: ಅಕ್ಟೋಬರ್ 1ರಿಂದ ಈ ಹೊಸ ನಿಯಮಗಳು ಜಾರಿ?

ಜಾಗತಿಕ ಆರ್ಥಿಕ ಹಿಂಜರಿತದ ಭೀತಿ, ಹಣದುಬ್ಬರ ಹೆಚ್ಚುತ್ತಿರುವ ಜಾಗತಿಕ ತಲೆನೋವಿನ ಹೊರತಾಗಿಯೂ ಭಾರತೀಯ ಆರ್ಥಿಕತೆಯು ಚೇತರಿಸಿಕೊಳ್ಳುತ್ತಿದೆ ಎಂದು ಆರ್‌ಬಿಐ ಗವರ್ನರ್ ಶಕ್ತಿಕಾಂತ ದಾಸ್ ಹೇಳಿದ್ದಾರೆ. RBI ಗವರ್ನರ್ ಶಕ್ತಿಕಾಂತ ದಾಸ್ ಅವರು Q1FY24 ಬೆಳವಣಿಗೆಯನ್ನು ಶೇಕಡಾ 7.2 ಕ್ಕೆ ಪರಿಷ್ಕರಿಸಲಾಗಿದೆ ಎಂದು ಘೋಷಿಸಿದ್ದಾರೆ.

ಕರೆನ್ಸಿ ಮತ್ತು ಕಚ್ಚಾತೈಲದ ಬಗ್ಗೆ ಉಲ್ಲೇಖ:

ಭಾರತೀಯ ರೂಪಾಯಿ ವಿನಿಮಯ ದರವು ಮಾರುಕಟ್ಟೆಯ ಮೌಲ್ಯ ಮತ್ತು ಬದಲಾವಣೆಯ ಮೇಲೆ ನಿರ್ಧಾರವಾಗುತ್ತದೆ. ಇದು ಮುಕ್ತವಾದ ಕರೆನ್ಸಿಯಾಗಿದೆ ಎಂದು ಆರ್‌ಬಿಐ ಗವರ್ನರ್ ಶಕ್ತಿಕಾಂತ ದಾಸ್ ಹೇಳಿದರು. ಕಚ್ಚಾತೈಲ ಬೆಲೆ ತಿದ್ದುಪಡಿಯನ್ನು ಸುಸ್ಥಿರಗೊಳಿಸಿದರೆ, ಬೆಲೆಯ ಒತ್ತಡವನ್ನು ಕಡಿಮೆ ಮಾಡಬಹುದು ಎಂದು ಆರ್‌ಬಿಐ ಗವರ್ನರ್ ಶಕ್ತಿಕಾಂತ ದಾಸ್ ಹೇಳಿದ್ದಾರೆ.

ಷೇರು ಮಾರುಕಟ್ಟೆಯಲ್ಲಿ ಜಿಗಿತ:

ಹೂಡಿಕೆದಾರರು ಆರ್‌ಬಿಐ ದರ ಏರಿಕೆಯನ್ನು ಪಾಸಿಟಿವ್ ಆಗಿ ತೆಗೆದುಕೊಂಡಿದ್ದಾರೆ. ಇದರಿಂದ ಬೆಳಿಗ್ಗೆ 10:43ರ ಹೊತ್ತಿಗೆ ಸೆನ್ಸೆಕ್ಸ್ 424.14 ಪಾಯಿಂಟ್ ಅಥವಾ 0.75 ರಷ್ಟು ಏರಿಕೆಯಾಗಿದ್ದು 56,876.29 ಕ್ಕೆ ತಲುಪಿದೆ. ಅದೇ ರೀತಿ ಎನ್‌ಎಸ್‌ಇ ನಿಫ್ಟಿ 127.50 ಅಥವಾ 0.76 ರಷ್ಟು ಏರಿಕೆಯಾಗಿದ್ದು 16,945.55 ಕ್ಕೆ ತಲುಪಿದೆ.

English summary
RBI Monetary Policy: RBI Hikes Repo Rate By 50 Basis Points To 5.9% on Sep 30.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X