ರಿಯಲ್‌ಮಿ X7 5G ಭಾರತದಲ್ಲಿ ಬಿಡುಗಡೆ: ಬೆಲೆ, ಫೀಚರ್ಸ್ ಇಲ್ಲಿದೆ

ನವದೆಹಲಿ, ಫೆಬ್ರವರಿ 04: ಕಳೆದ ವರ್ಷ ಸೆಪ್ಟೆಂಬರ್‌ನಲ್ಲಿ ಚೀನಾದಲ್ಲಿ ಪಾದಾರ್ಪಣೆ ಮಾಡಿದ ನಂತರ ರಿಯಲ್‌ಮಿ ಎಕ್ಸ್ 7 ಪ್ರೊ 5 ಜಿ ಮತ್ತು ರಿಯಲ್‌ಮಿ ಎಕ್ಸ್7 5ಜಿ ಅನ್ನು ಭಾರತದಲ್ಲಿ ಗುರುವಾರ ಬಿಡುಗಡೆ ಮಾಡಲಾಯಿತು. ಎರಡೂ ಫೋನ್‌ಗಳು 5ಜಿ ಸಪೋರ್ಟ್ ಹೊಂದಿದೆ.

ಈ ಸ್ಮಾರ್ಟ್‌ಫೋನ್ 4310mAh ಬ್ಯಾಟರಿ ಬ್ಯಾಕ್‌ಅಪ್‌ ಸಾಮರ್ಥ್ಯವನ್ನು ಒಳಗೊಂಡಿದೆ. ಇದರೊಂದಿಗೆ ಮೀಡಿಯಾ ಟೆಕ್ ಡೈಮೆನ್ಸಿಟಿ 800U 5G SoC ಪ್ರೊಸೆಸರ್‌ ಅನ್ನು ಒಳಗೊಂಡಿದೆ.

ಇದರ ಜೊತೆಗೆ 6.4 ಇಂಚಿನ ಹೆಚ್‌ಡಿ ಡಿಸ್‌ಪ್ಲೇಯನ್ನು ಹೊಂದಿದ್ದು, AMOLED ಮಾದರಿಯಲ್ಲಿದೆ. ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್ 10 ಆಧಾರಿತ ರಿಯಲ್‌ಮಿ UI ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಇದರೊಂದಿಗೆ 6GB + 128GB ಮತ್ತು 8GB + 128GB ಆಯ್ಕೆ ಹೊಂದಿದೆ.

Realme X7 Pro 5G, Realme X7 5G Launched in India: Price, Specifications

ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾಪಿಕ್ಸೆಲ್ ಸೆನ್ಸಾರ್‌ಹೊಂದಿದೆ. ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ಸೆನ್ಸಾರ್‌ ಹೊಂದಿದ್ದು ಇನ್ನು ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಸೆನ್ಸಾರ್‌ ಅನ್ನು ಹೊಂದಿದೆ.

ರಿಯಲ್‌ಮಿ X7 ಸ್ಮಾರ್ಟ್‌ಫೋನ್ 6GB + 128GB ಸ್ಟೋರೇಜ್ ಹೊಂದಿರುವ ಮೊಬೈಲ್ ಬೆಲೆಯು 19,999 ರೂ. ಆಗಿದೆ. ಹಾಗೆಯೇ 8GB + 128GB ಬೆಲೆಯು 21,999ರೂ. ಆಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+