ಕೋವಿಡ್ ಬಾಧಿತ ರಾಜ್ಯಗಳಿಗೆ ರಿಲಯನ್ಸ್‌ನಿಂದ ಆಮ್ಲಜನಕ ಪೂರೈಕೆ
ನವದೆಹಲಿ, ಏಪ್ರಿಲ್ 21: ಉದ್ಯಮಿ ಮುಕೇಶ್ ಅಂಬಾನಿ ಅವರ ರಿಲಯನ್ಸ್ ಇಂಡಸ್ಟ್ರೀಸ್ ಸಂಸ್ಥೆ ತನ್ನ ಜಾಮ್‌ನಗರ ತೈಲ ಸಂಸ್ಕರಣೆ ಘಟಕವನ್ನು ವೈದ್ಯಕೀಯ ಶ್ರೇಣಿಯ ಆಮ್ಲಜನಕ ಉತ್ಪಾದನಾ ಘಟಕವನ್ನಾಗಿ ಪರಿವರ್ತಿಸಿದೆ.
ಪ್ರತಿ ದಿನ ಇಲ್ಲಿ 700 ಟನ್‌ಗೂ ಅಧಿಕ ಆಮ್ಲಜನಕ ಉತ್ಪಾದನೆ ಮಾಡುತ್ತಿದ್ದು, ಕೋವಿಡ್-19ರಿಂದ ತೀವ್ರ ಸಂಕಷ್ಟಕ್ಕೆ ಒಳಗಾಗಿರುವ ರಾಜ್ಯಗಳಿಗೆ ಉಚಿತವಾಗಿ ಪೂರೈಸಲಾಗುತ್ತಿದೆ.
ಗುಜರಾತ್‌ನ ಜಾಮ್‌ನಗರದಲ್ಲಿರುವ ಸಂಸ್ಕರಣಾಗಾರವು ಆರಂಭದಲ್ಲಿ 100 ಟನ್‌ನಷ್ಟು ವೈದ್ಯಕೀಯ ಶ್ರೇಣಿಯ ಆಮ್ಲಜನಕವನ್ನು ಉತ್ಪಾದಿಸುತ್ತಿತ್ತು. ಇದನ್ನು ಕೂಡಲೇ 700 ಟನ್ ಸಾಮರ್ಥ್ಯಕ್ಕೆ ವೃದ್ಧಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ಗುಜರಾತ್, ಮಹಾರಾಷ್ಟ್ರ ಮತ್ತು ಮಧ್ಯಪ್ರದೇಶ ರಾಜ್ಯಗಳಿಗೆ ಆಮ್ಲಜನಕ ಪೂರೈಕೆ ಮಾಡುತ್ತಿದ್ದು, ಇದು ಗಂಭೀರ ಕಾಯಿಲೆಗಳಿಂದ ಬಳಲುತ್ತಿರುವ 70,000ಕ್ಕೂ ಅಧಿಕ ರೋಗಿಗಳಿಗೆ ಪ್ರತಿ ದಿನ ನೆಮ್ಮದಿ ಒದಗಿಸುತ್ತಿದೆ. ಕಂಪೆನಿಯು ವೈದ್ಯಕೀಯ ಶ್ರೇಣಿಯ ಆಮ್ಲಜನಕ ಉತ್ಪಾದನೆ ಸಾಮರ್ಥ್ಯವನ್ನು 1,000 ಟನ್‌ಗೆ ಹೆಚ್ಚಿಸಲು ಉದ್ದೇಶಿಸಿದೆ ಎಂದು ಮೂಲಗಳು ತಿಳಿಸಿವೆ. ಈ ಬಗ್ಗೆ ಯಾವುದೇ ಸಮಯದ ವಿವರವನ್ನು ನೀಡಿಲ್ಲ.
'ಗುಜರಾತ್‌ಗೆ ರಿಲಯನ್ಸ್ ಜಾಮ್‌ನಗರದಿಂದ ಪ್ರತಿ ದಿನವೂ 400 ಟನ್ ಆಮ್ಲಜನಕವನ್ನು ಪೂರೈಸಲಾಗುತ್ತಿದೆ. ಇದು ಗುಜರಾತ್ ಕುರಿತ ನಮ್ಮ ಬದ್ಧತೆಯನ್ನು ತೋರಿಸುತ್ತದೆ' ಎಂದು ಗುಜರಾತ್ ಕ್ರಿಕೆಟ್ ಸಂಸ್ಥೆಯ ಉಪಾಧ್ಯಕ್ಷ ಹಾಗೂ ರಿಲಯನ್ಸ್ ಮಾಲೀಕರ ಜತೆ ನಿಕಟ ಸಂಬಂಧ ಹೊಂದಿರುವ ಧನರಾಜ್ ನಥ್ವಾನಿ ಮಂಗಳವಾರ ಟ್ವೀಟ್ ಮಾಡಿದ್ದಾರೆ.
ರಿಲಯನ್ಸ್ ಫೌಂಡೇಷನ್ ಬೃಹನ್ ಮುಂಬೈ ಮುನಿಸಿಪಲ್ ಕಾರ್ಪೊರೇಷನ್‌ನ (ಬಿಎಂಸಿ) ಸಹಯೋಗದಲ್ಲಿ ಮುಂಬೈನಲ್ಲಿ ದೇಶದ ಮೊದಲ ಕೋವಿಡ್ ಆಸ್ಪತ್ರೆಯನ್ನು ಸ್ಥಾಪಿಸಿತ್ತು. 100 ಹಾಸಿಗೆಗಳ ಆಸ್ಪತ್ರೆಯನ್ನು ಕೇವಲ ಎರಡು ವಾರದಲ್ಲಿ ಸ್ಥಾಪಿಸಲಾಗಿತ್ತು. ಶೀಘ್ರದಲ್ಲೇ ಅದನ್ನು 250 ಹಾಸಿಗೆ ಸಾಮರ್ಥ್ಯಕ್ಕೆ ಹೆಚ್ಚಿಸಲಾಗಿತ್ತು.
-
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ -
Weekly Horoscope March 9–15: ಮಾರ್ಚ್ ವಾರಭವಿಷ್ಯ – 12 ರಾಶಿಗಳ ಸುಖ-ದುಃಖ, ಹಣಕಾಸು ಮತ್ತು ಆರೋಗ್ಯ ಫಲ -
ಡಿವೋರ್ಸ್ವರೆಗೆ ಪತಿಯ ನಿವಾಸದಲ್ಲೇ ವಾಸ್ತವ್ಯಕ್ಕೆ ಅವಕಾಶ ಕಲ್ಪಿಸಿ: ನಟ ವಿಜಯ್ ಪತ್ನಿ ಕೋರ್ಟ್ಗೆ ಮನವಿ -
Yash: ಪತ್ನಿ ರಾಧಿಕಾ ಪಂಡಿತ್ ಹುಟ್ಟುಹಬ್ಬಕ್ಕೆ ಹೊಸ ಲುಕ್ನಲ್ಲಿ ಯಶ್ ಪ್ರತ್ಯಕ್ಷ -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
ಟಿ20 ವಿಶ್ವಕಪ್ 2026 ಫೈನಲ್ ನಂತರ ಎಲ್ಲಾ ಮಾದರಿಯ ಕ್ರಿಕೆಟ್ಗೆ ಸೂರ್ಯಕುಮಾರ್ ಯಾದವ್ ನಿವೃತ್ತಿ ಘೋಷಣೆ ವದಂತಿ -
Vijay Divorce: ಡಿವೋರ್ಸ್ ವದಂತಿ ನಡುವೆಯೇ ನಟಿ ತ್ರಿಶಾ ಜೊತೆ ಕಾಣಿಸಿಕೊಂಡ ದಳಪತಿ ವಿಜಯ್; ವಿಡಿಯೋ ವೈರಲ್ -
UPSC Results: ಯಾದಗಿರಿ ಜಿಲ್ಲೆ ಒಂದರಲ್ಲೇ 4 ಮಂದಿ ಯುಪಿಎಸ್ಸಿ ಪಾಸ್, ಯಾರವರು? ಹಿನ್ನೆಲೆ ಏನು -
Karnataka Weather: ಕಲಬುರಗಿಯಲ್ಲಿ 39 ಡಿಗ್ರಿ ಸೆಲ್ಸಿಯಸ್ ಗರಿಷ್ಠ ತಾಪಮಾನ ದಾಖಲು, ರಾಜ್ಯದ ಹಲವು ಜಿಲ್ಲೆಗಳಲ್ಲಿ ಬಿಸಿಲ ಬೇಗೆ -
ದುಬೈ ವಿಮಾನ ನಿಲ್ದಾಣಕ್ಕೆ ನುಗ್ಗಿದ ಡ್ರೋನ್, ಎಲ್ಲಾ ವಿಮಾನ ಹಾರಾಟ ದಿಢೀರ್ ಸ್ಥಗಿತ | Operation Roaring Lion -
LPG Price Hike: ಗೃಹಬಳಕೆ ಎಲ್ಪಿಜಿ ಸಿಲಿಂಡರ್ ಬೆಲೆ 60 ರೂಪಾಯಿ ಏರಿಕೆ, ವಾಣಿಜ್ಯ ಸಿಲಿಂಡರ್ ದರ 115 ರೂಪಾಯಿ ಹೆಚ್ಚಳ -
SWR: ಬೆಂಗಳೂರಿನಿಂದ ಇಲ್ಲಿಗೆ ಮಾ.10ರಿಂದ ವಿಶೇಷ ರೈಲುಗಳ ಸಂಚಾರ, ವೇಳಾಪಟ್ಟಿ ಹೀಗಿದೆ












Click it and Unblock the Notifications