ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ವಿಶೇಷ ಆರ್ಥಿಕ ಪ್ಯಾಕೇಜ್‌, ಕೈಗಾರಿಕಾ ಕ್ಷೇತ್ರದ ಚೇತರಿಕೆ : ಶೆಟ್ಟರ್

|
Google Oneindia Kannada News

ಬೆಂಗಳೂರು ಮೇ 12: ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಘೋಷಿಸಿರುವ 20 ಲಕ್ಷ ಕೋಟಿ ರೂಪಾಯಿಗಳ ವಿಶೇಷ ಪ್ಯಾಕೇಜ್‌ ದೇಶದ ಕೈಗಾರಿಕಾ ಕ್ಷೇತ್ರದ ಅಭಿವೃದ್ದಿಗೆ ವೇಗ ನೀಡಲಿದೆ. ಇದೇ ವೇಳೆ ಗುಡಿ, ಗೃಹ, ಸಣ್ಣ, ಮಧ್ಯಮ ಹಾಗೂ ಬೃಹತ್‌ ಕೈಗಾರಿಕೆಗಳ ಚೇತರಿಕೆ ಅಗತ್ಯ ಜೀವವಾಯುವನ್ನು ಪೂರೈಸಲಿದೆ ಎಂದು ಬೃಹತ್‌ ಮತ್ತು ಮಧ್ಯಮ ಕೈಗಾರಿಕಾ ಸಚಿವ ಜಗದೀಶ್‌ ಶೆಟ್ಟರ್‌ ಪ್ರತಿಕ್ರಿಯಿಸಿದ್ದಾರೆ.

ಕರೋನಾ ಮಹಾಮಾರಿಯ ಲಾಕ್‌ ಡೌನ್‌ ಸಂಧರ್ಭದಲ್ಲಿ ಈ ರೀತಿಯ ವಿಶೇಷ ಪ್ಯಾಕೇಜ್‌ನ ಅವಶ್ಯಕತೆ ಬಹಳಷ್ಟಿತ್ತು. ಅದರಲ್ಲೂ ಲಾಕ್‌ ಡೌನ್‌ ನಿಂದಾಗಿ ತೊಂದರೆಗೆ ಈಡಾಗಿದ್ದ ಕೈಗಾರಿಕಾ ವಲಯದ ಚೇತರಿಕೆಗೆ ವಿಶೇಷ ವಾದಂತಹ ಸೌಲಭ್ಯ ನೀಡುವುದು ಅಗತ್ಯವಾಗಿತ್ತು. ಈ ನಿಟ್ಟಿನಲ್ಲಿ ನಮ್ಮ ದೇಶದ ಜಿಡಿಪಿಯ ಶೇಕಡಾ 10 ರಷ್ಟು ಮೌಲ್ಯದ ಪ್ಯಾಕೇಜ್‌ ಘೋಷಣೇ ನೀಡಿರುವುದು ಒಳ್ಳೆಯ ಬೆಳವಣಿಗೆ ಆಗಿದೆ. ಮುಂಬರುವ ದಿನಗಳಲ್ಲಿ ಕೇಂದ್ರದ ಆರ್ಥಿಕ ಸಚಿವರು ನೀಡುವ ಯೋಜನೆಯ ರೂಪು ರೇಷೆಗಳು ಇನ್ನಷ್ಟು ಆಶಾದಾಯಕವಾಗಿರಲಿವೆ ಎಂದು ಹೇಳಿದರು.

ಭಾರತೀಯರಿಗೆ 20 ಲಕ್ಷ ಕೋಟಿ ಪ್ಯಾಕೇಜ್ ಘೋಷಿಸಿದ ಪ್ರಧಾನಮಂತ್ರಿ!ಭಾರತೀಯರಿಗೆ 20 ಲಕ್ಷ ಕೋಟಿ ಪ್ಯಾಕೇಜ್ ಘೋಷಿಸಿದ ಪ್ರಧಾನಮಂತ್ರಿ!

ಭಾರತ ಜಾಗತಿಕ ಶಕ್ತಿ ಆಗಲು ಒಳ್ಳೆಯದಾದಂತಹ ಪ್ಯಾಕೇಜ್‌ ಇದಾಗಿದೆ. ಸ್ಥಳಿಯವಾಗಿ ಉತ್ಪಾದನೆಗೆ ಹೆಚ್ಚಿನ ಬಲ ನೀಡುವ ಮೂಲಕ, ಆತ್ಮ ನಿರ್ಭರ ಭಾರತ್‌ ಯೋಜನೆ ದೇಶದ ಎಲ್ಲಾ ವರ್ಗದ ಅಭಿವೃದ್ದಿಗೆ ಹೆಚ್ಚಿನ ಒತ್ತು ನೀಡಲಿದೆ ಎಂದು ತಿಳಿಸಿದರು.

Rs 20 lakh Cr Finance package will boost Industry: Shettar

ಭಾರತ ಲಾಕ್ ಡೌನ್ ಘೋಷಣೆಯಾದ ಬಳಿಕ 5ನೇ ಬಾರಿಗೆ ದೇಶವನ್ನು ಉದ್ದೇಶಿಸಿ ಪ್ರಧಾನಮಂತ್ರಿ ನರೇಂದ್ರ ಮೋದಿ ಭಾಷಣ ಮಾಡಿದರು. ನೊವೆಲ್ ಕೊರನಾ ವೈರಸ್ ವಿರುದ್ಧ ಹೋರಾಡುತ್ತಿರುವ ಭಾರತೀಯರಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿ 20 ಲಕ್ಷ ಕೋಟಿ ರೂಪಾಯಿಯ ಆರ್ಥಿಕ ಪ್ಯಾಕೇಜ್ ಘೋಷಿಸಿದ್ದಾರೆ. ದೇಶದ ಶ್ರಮಿಕರು, ರೈತರು, ಕಾರ್ಮಿಕರು ಹಾಗೂ ಮಧ್ಯಮ ವರ್ಗದ ಜನರಿಗೆ ಇದರಿಂದ ಲಾಭವಾಗಲಿದೆ ಎಂದಿದ್ದಾರೆ.

English summary
Rs 20 lakh Cr Finance package will boost Industry said Industry minister Jagadish Shettar.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X