ಮದ್ಯ ಮಾರಾಟದಿಂದ 3ನೇ ದಿನದಂದು ಸರ್ಕಾರ ಗಳಿಸಿದ್ದೆಷ್ಟು?
ಬೆಂಗಳೂರು, ಮೇ 7: ಮೂರನೇ ಅವಧಿಯ ಲಾಕ್ಡೌನ್ ನಡುವೆಯೂ ಷರತ್ತುಗಳ ನಡುವೆ ಮೇ.04ರಿಂದ ಮದ್ಯದ ಅಂಗಡಿಗಳನ್ನು ತೆರೆಯಲು ರಾಜ್ಯ ಸರ್ಕಾರವು ಸಂಪೂರ್ಣ ಅನುಮತಿ ನೀಡಿದೆ. ಎಂಎಸ್ಐಎಲ್ ಹಾಗೂ ವೈನ್ ಶಾಪ್ ಮೂಲಕ ಮಾತ್ರ ಮದ್ಯ ಮಾರಾಟಕ್ಕೆ ಅನುಮತಿ ನೀಡಿ ಸುತ್ತೋಲೆ ಹೊರಡಿಸಲಾಗಿದೆ. ಇದರಿಂದ ಭರ್ಜರಿ ಗಳಿಕೆಯೂ ಆಗುತ್ತಿದೆ.
Recommended Video
ಮಂಗಳವಾರ ಒಂದೇ ದಿನ ಕರ್ನಾಟಕದಲ್ಲಿ 197 ಕೋಟಿ ರೂಪಾಯಿ ಮೌಲ್ಯದ ಮದ್ಯ ಮಾರಾಟವಾಗಿದೆ ಎಂದು ಅಬಕಾರಿ ಇಲಾಖೆ ಮಾಹಿತಿ ನೀಡಿದೆ. ಲಾಕ್ ಡೌನ್ ಮುನ್ನ ರಾಜ್ಯದಲ್ಲಿ ಸರಾಸರಿ 90 ರಿಂದ 95 ಕೋಟಿ ರೂಪಾಯಿ ಮದ್ಯ ಮಾರಾಟವಾಗುತ್ತಿತ್ತು. ಮೊದಲ ದಿನದಂದು ಸುಮಾರು 45 ಕೋಟಿ ರು ಮೌಲ್ಯದ ಗಳಿಕೆಯಾಗಿತ್ತು. ಈಗ ಮೂರನೇ ದಿನ ಬುಧವಾರ (ಮೇ 6) ದಂದು ಸುಮಾರು 231.60 ಕೋಟಿ ರು ನಷ್ಟು ಮದ್ಯ ಮಾರಾಟವಾಗಿದೆ.
2020-21ರ ಪ್ರಸಕ್ತ ಸಾಲಿನಲ್ಲಿ ಅಬಕಾರಿ ಇಲಾಖೆಯು ಬರೋಬ್ಬರಿ 26,440 ಕೋಟಿ ರೂಪಾಯಿ ಆದಾಯದ ನಿರೀಕ್ಷೆಯನ್ನು ಇಟ್ಟುಕೊಳ್ಳಲಾಗಿತ್ತು. ಮಂಗಳವಾರ ಒಂದೇ ದಿನ 197 ಕೋಟಿ ರೂಪಾಯಿ ಆದಾಯ ಸಂಗ್ರಹವಾಗಿದ್ದು ಹೊಸ ದಾಖಲೆ ಬರೆದಿದೆ.

ಮೂರನೇ ದಿನದ ಮಾರಾಟ ವಿವರ
ಮೂರನೇ ದಿನದಂದು 39 ಲಕ್ಷ ಲೀಟರ್ ಗಳಷ್ಟು ಭಾರತೀಯ ಲಿಕ್ಕರ್ (Indian made liquor) ಮಾರಾಟವಾಗಿದ್ದು, 216 ಕೋಟಿ ರು ಬಂದಿದೆ. 7 ಲಕ್ಷ ಲೀಟರ್ ಬಿಯರ್ ಮಾರಾಟವಾಗಿ 15.6 ಕೋಟಿ ರು ಗಳಿಕೆಯಾಗಿದೆ. ಮೊದಲ ಎರಡು ದಿನಗಳ ಒಟ್ಟು ಗಳಿಕೆ 242 ಕೋಟಿ ರು ಕಂಡು ಬಂದಿತ್ತು. ಬೆಳಿಗ್ಗೆ 9 ಗಂಟೆಯಿಂದ ಸಂಜೆ 7 ಗಂಟೆವರೆಗೆ ಮಾತ್ರ ಮದ್ಯ ಮಾರಾಟಕ್ಕೆ ಅನುಮತಿ ನೀಡಿ ರಾಜ್ಯ ಅಬಕಾರಿ ಇಲಾಖೆ ಆಯುಕ್ತರು ಸುತ್ತೋಲೆ ಹೊರಡಿಸಿದ್ದಾರೆ. ಕಂಟೇನ್ಮೆಂಟ್ ಝೋನ್ ಹೊರತುಪಡಿಸಿ, ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಮದ್ಯ ಮಾರಾಟವನ್ನು ಎಂಎಸ್ಐಎಲ್ ಹಾಗೂ ವೈನ್ ಶಾಪ್ ಮೂಲಕ ಮಾರಾಟಕ್ಕೆ ಅನುಮತಿ ನೀಡಲಾಗಿದೆ.

ಬಾರ್ ಅಂಡ್ ರೆಸ್ಟೋರೆಂಟ್ ಸದ್ಯಕ್ಕೆ ಓಪನ್ ಆಗಲ್ಲ
ಈ ನಡುವೆ ಬಾರ್ ಅಂಡ್ ರೆಸ್ಟೋರೆಂಟ್ ಸದ್ಯ ಓಪನ್ ಮಾಡುವ ಚಿಂತನೆ ಇಲ್ಲ, ಬಜೆಟ್ ನಲ್ಲಿ ಹೇಳಿದಂತೆ ಶೇ 6 ರಷ್ಟು ಹಾಗೂ ಈಗ ಶೇ 11ರಷ್ಟು ಸೇರಿಸಿ ಶೇ 17ರಷ್ಟು ಅಬಕಾರಿ ಸುಂಕ ಹೆಚ್ಚಳ ಮಾಡಲಾಗಿದೆ, ಈ ಬಗ್ಗೆ ಅಧಿಕೃತ ಅದೇಶದಲ್ಲಿ ವಿವರಣೆ ಸಿಗಲಿದೆ ಎಂದು ಅಬಕಾರಿ ಸಚಿವ ನಾಗೇಶ್ ತಿಳಿಸಿದ್ದಾರೆ. ಜೊತೆಗೆ ಇನ್ನೂ ಹದಿನೈದು ದಿನಕ್ಕೆ ಬೇಕಾದಷ್ಟು ಮದ್ಯ ನಮ್ಮ ಬಳಿ ಇದೆ. ನಿನ್ನೆಗಿಂತಲೂ ಹೆಚ್ಚು ಆದಾಯ ಇವತ್ತು ಸರ್ಕಾರಕ್ಕೆ ಬಂದಿದೆ.ಇವತ್ತು ಹೊಸ ತೆರಿಗೆ ಸೇರಿದೆ. ಹೀಗಾಗಿ ಹೆಚ್ಚು ರಾಜಧನ ಸರ್ಕಾರಕ್ಕೆ ಬರುತ್ತೆ ಎಂದು ಹೇಳಿದರು

5 ಜನ ಗ್ರಾಹಕರು ಮಾತ್ರ ಅಂಗಡಿ ಪ್ರವೇಶಿಸಬಹುದು
ಒಂದು ಬಾರಿಗೆ ಕೇವಲ 5 ಜನ ಗ್ರಾಹಕರು ಮಾತ್ರ ಅಂಗಡಿ ಪ್ರವೇಶಿಸಲು ಅನುಮತಿ ನೀಡಿದ್ದು, 6 ಅಡಿ ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ಕಡ್ಡಾಯ - ಮದ್ಯ ಮಾರಾಟ ಮಾಡುವ ಸನ್ನದಿನಲ್ಲಿನ ನೌಕರರು ಹಾಗೂ ಮದ್ಯ ಖರೀದಿಗೆ ಬರುವ ಗ್ರಾಹಕರು ಮಾಸ್ಕ್ ಧರಿಸುವುದು ಕಡ್ಡಾಯ. ಸ್ಯಾನಿಟೈಸರ್ ಗಳನ್ನು ಬಳಸುವುದು ಕಡ್ಡಾಯ. - ಕೇವಲ ಸ್ಟಾಂಡ್ ಅಲೋನ್ ಸಿಎಂಲ್-2 ಹಾಗೂ ಸಿಎಲ್ 11-ಸಿ ಸನ್ನದುಗಳನ್ನು ಮಾತ್ರ ಕಾರ್ಯನಿರ್ವಹಿಸುವುದು. ಮಾಲ್ ಗಳು ಹಾಗೂ ಸೂಪರ್ ಮಾರ್ಕೆಟ್ ಗಳಲ್ಲಿ ಸದರಿ ಸನ್ನದುಗಳು ಇದ್ದಲ್ಲಿ ಈ ಅನುಮತಿ ಅನ್ವಯವಾಗುವುದಿಲ್ಲ

ಸೋಮವಾರ ಹಾಗೂ ಮಂಗಳವಾರದ ಗಳಿಕೆ ಎಷ್ಟು?
ಸೋಮವಾರ ಒಂದೇ ದಿನದಲ್ಲಿ ಒಟ್ಟು 3.9 ಲಕ್ಷ ಲೀಟರ್ ಬಿಯರ್, 8.5 ಲಕ್ಷ ಲೀಟರ್ ಭಾರತೀಯ ತಯಾರಿಕಾ ಮದ್ಯ ಮಾರಾಟವಾಗಿದೆ. ಮಾರಾಟವಾಗಿರುವ ಒಟ್ಟು 12.4 ಲಕ್ಷ ಲೀಟರ್ ಮದ್ಯದ ಮೌಲ್ಯ 45 ಕೋಟಿ ರೂಪಾಯಿ ಎಂದು ಅಬಕಾರಿ ಇಲಾಖೆ ಆಯುಕ್ತರು ಮಾಹಿತಿ ನೀಡಿದ್ದರು. ಮಂಗಳವಾರ ಒಂದೇ ದಿನ ಭಾರತದಲ್ಲಿ ತಯಾರಿಸಿದ 4.21 ಲಕ್ಷ ಬಾಕ್ಸ್ ಕೇಸಸ್ ಮದ್ಯವು ಮಾರಾಟವಾಗಿದೆ. 36.37 ಲಕ್ಷ ಲೀಟರ್ ಭಾರತೀಯ ಮದ್ಯವು ಸೇಲ್ ಆಗಿದ್ದು, ಇದರ ಮೊತ್ತ ಬರೋಬ್ಬರಿ 182 ಕೋಟಿ ರೂಪಾಯಿ ಆಗಿದೆ. ಅಲ್ಲದೇ 7.02 ಲಕ್ಷ ಲೀಟರ್ ಬಿಯರ್ ಮಾರಾಟವಾಗಿದ್ದು, ಅದರ ಮೌಲ್ಯ 15 ಕೋಟಿ ಎನ್ನಲಾಗಿದೆ.

ಮದ್ಯ ಪೂರೈಕೆ 15 ದಿನಗಳಿಗೆ ಆಗುವಷ್ಟಿದೆ
ರಾಜ್ಯದಲ್ಲಿ ಎಂಎಸ್ಐಎಲ್, ಸಿಎಲ್-2 ಹಾಗೂ ಸಿಎಲ್-11 ಪರವಾನಗಿ ಹೊಂದಿರುವ ಮದ್ಯದ ಅಂಗಡಿಗಳಿಗೆ ಮಾತ್ರ ಮದ್ಯ ಮಾರಾಟ ಮಾಡುವುದಕ್ಕೆ ಅನುಮತಿ ನೀಡಲಾಗಿದೆ. ಮೊದಲ ದಿನವಾಗಿದ್ದ ಸೋಮವಾರ ರಾಜ್ಯದ ಹಲವೆಡೆ ಮದ್ಯವೆಲ್ಲ ಖಾಲಿಯಾಗಿ ಮಧ್ಯಾಹ್ನದ ವೇಳೆಗೆ ಅಂಗಡಿಗಳನ್ನು ಬಂದ್ ಮಾಡಲಾಗಿತ್ತು. ಆದರೆ ರಾಜ್ಯದಲ್ಲಿ ಮದ್ಯದ ದಾಸ್ತಾನು ಸಾಕಷ್ಟಿದೆ. ಮದ್ಯ ಖಾಲಿಯಾಗುತ್ತೆ ಎಂಬ ಯಾವುದೇ ಆತಂಕ ಬೇಕಿಲ್ಲ ಎಂದು ಅಬಕಾರಿ ಇಲಾಖೆಯ ಹೆಚ್ಚುವರಿ ಆಯುಕ್ತ ರಾಜೇಂದ್ರ ಪ್ರಸಾದ್ ತಿಳಿಸಿದ್ದಾರೆ.
-
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
IPL ಐಪಿಎಲ್ ಫ್ರೀ ಟಿಕೆಟ್ ವಿವಾದ: ವೆಂಕಟೇಶ್ ಪ್ರಸಾದ್ – ಸಿದ್ದರಾಮಯ್ಯ ಭೇಟಿ ಫೋಟೋಗೆ ತೇಜಸ್ವಿ ಸೂರ್ಯ ಕೆಂಡ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು -
1ನೇ ತರಗತಿ ದಾಖಲಾತಿ: 6 ವರ್ಷ ತುಂಬಿರಬೇಕು ಎಂಬ ನಿಯಮವನ್ನು ಕೊಂಚ ಸಡಿಲಿಕೆ ಮಾಡಿದ ಸರ್ಕಾರ -
ಮಾ.30ರಂದು ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ದಿಢೀರ್ ಮುಂದೂಡಿಕೆ: ಕಾರಣವೇನು? -
ಬೆಂಗಳೂರು-ಅರಸೀಕೆರೆ ನಡುವೆ ನೂತನ ಮೆಮು ರೈಲು ಸೇವೆ: ಈಡೇರಿತು ಪ್ರಯಾಣಿಕರ ಬಹುದಿನದ ಬೇಡಿಕೆ -
Viral Videlo: 2 ಗಂಟೆ ಸ್ಟ್ಯಾಚ್ಯೂ ರೀತಿ ನಿಂತ ಯುವಕ ವಿಡಿಯೋ ವೈರಲ್, ಭಾರತಕ್ಕೂ ಬಂತಾ ಅಮೆರಿಕದ ಜಾಂಬಿ ಡ್ರಗ್ಸ್ -
ಉದ್ಯೋಗ ಸಂದರ್ಶನ ಮಾಡಲು ಹೋದ CEOಗೆ ಬೆವರಿಳಿಸಿದ ಅಭ್ಯರ್ಥಿ, Viral ಆಯ್ತು ವಿಚಿತ್ರ ಕಥೆ -
Summer Camp: ನಟನ ಮೈಸೂರು ಸಂಸ್ಥೆಯಿಂದ ಮಕ್ಕಳಿಗೆ ಬೇಸಿಗೆ ಶಿಬಿರ 'ರಜಾಮಜಾ' ಆಯೋಜನೆ -
115 ರೂಪಾಯಿಯ ಪೊಂಗಲ್ಗೆ 273 ರೂ. ಬಿಲ್: ಸ್ವಿಗ್ಗಿ ವಿರುದ್ಧ ಸುಮಲತಾ ಅಂಬರೀಷ್ ಆಕ್ರೋಶ












Click it and Unblock the Notifications