ಡಿ.13 ಮಧ್ಯರಾತ್ರಿಯಿಂದ 24x7x365 RTGS ಸೌಲಭ್ಯ: ಆರ್ಬಿಐ
ನವದೆಹಲಿ, ಡಿ. 13: ಡಿಜಿಟಲ್ ವ್ಯವಹಾರಗಳಿಗೆ ಪ್ರೋತ್ಸಾಹ ನೀಡಿ, ಡಿಜಿಟಲ್ ಹಣಕಾಸಿನ ವ್ಯವಹಾರ ಸಲೀಸಾಗಿ ಆಗಲಿ ಎಂಬ ಕಾರಣದಿಂದ ದಿನದ 24X7 ಅವಧಿಗೂ RTGS ಸೌಲಭ್ಯವನ್ನು ವಿಸ್ತರಿಸಿ ಘೋಷಣೆ ಮಾಡಲಾಗಿತ್ತು. ಡಿ.1ರಿಂದಲೇ ಜಾರಿಗೆ ಬರಬೇಕಾಗಿತ್ತು. ಆದರೆ, ವಿಳಂಬವಾದರೂ ಡಿ. 13ರಿಂದ ಜಾರಿಗೆ ಬರುತ್ತಿದೆ.
ಭಾರತೀಯ ರಿಸರ್ವ್ ಬ್ಯಾಂಕ್ (ಆರ್ಬಿಐ) ಗವರ್ನರ್ ಆಗಿ ಎರಡು ವರ್ಷ ಪೂರೈಸಿರುವ ಶಕ್ತಿಕಾಂತ್ ದಾಸ್ ಅವರು ಭಾನುವಾರ(ಡಿ. 13) ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಡಿಸೆಂಬರ್ 13ರ ಮಧ್ಯರಾತ್ರಿ ನಂತರ 12:30ಕ್ಕೆ RTGS ಸೌಲಭ್ಯವನ್ನು ವಿಸ್ತರಣೆ ಜಾರಿಗೊಳ್ಳಲಿದೆ. ಈ ಮೂಲಕ 24x7x365 RTGS ಸೌಲಭ್ಯ ಹೊಂದಿರುವ ಕೆಲವೇ ದೇಶಗಳ ಪೈಕಿ ಭಾರತವೂ ಸೇರ್ಪಡೆಯಾಗಿದೆ ಎಂದು ಹೇಳಿದರು.
ಬ್ಯಾಂಕ್ ಖಾತೆಗಳಿಂದ ಆನ್ ಲೈನ್ ಮೂಲಕ ಹಣ ವರ್ಗಾವಣೆ ಮೇಲಿದ್ದ ಶುಲ್ಕವನ್ನು ಕಡಿತಗೊಳಿಸಿದ್ದ ಭಾರತೀಯ ರಿಸರ್ವ್ ಬ್ಯಾಂಕ್ (ಆರ್ ಬಿಐ) ಗ್ರಾಹಕರಿಗೆ ಈ ಮೂಲಕ ಮತ್ತೊಂದು ಶುಭ ಸುದ್ದಿ ನೀಡಿದೆ.

National Electronic funds transfer(NEFT) ಸೌಲಭ್ಯ ಬಳಸಿ ಗ್ರಾಹಕರು ತಮ್ಮ ಬ್ಯಾಂಕ್ ಖಾತೆಯಿಂದ ಮೂಲಕ 2 ಲಕ್ಷ ರೂ.ಗಳ ವರೆಗೆ ಹಾಗೂ real time gross settlement (RTGS) ಮೂಲಕ 2 ಲಕ್ಷಕ್ಕಿಂತ ಅಧಿಕ ಮೊತ್ತವನ್ನು ವರ್ಗಾಯಿಸಬಹುದಾಗಿದೆ. ಇಲ್ಲಿ ತನಕ ಬ್ಯಾಂಕ್ ಕಾರ್ಯ ನಿರ್ವಹಿಸುವ ಸಮಯದಲ್ಲಿ ಮಾತ್ರ RTGS ಬಳಸಬಹುದಾಗಿತ್ತು.
ಕಳೆದ ಡಿಸೆಂಬರ್ ತಿಂಗಳಿನಿಂದ NEFT ಕೂಡಾ ದಿನದ 24 ಗಂಟೆಗಳ ಕಾಲ ಬಳಕೆಗೆ ಲಭ್ಯವಾಗಿದೆ. ಇದಕ್ಕೂ ಮುನ್ನ NEFT ಬೆಳಗ್ಗೆ 8 ರಿಂದ ರಾತ್ರಿ 7ರ ತನಕ ಮಾತ್ರ ಲಭ್ಯವಿತ್ತು. ಅಲ್ಲದೆ ಎರಡನೇ ಹಾಗೂ ನಾಲ್ಕನೇ ಶನಿವಾರ, ಭಾನುವಾರ ಬಳಕೆ ಮಾಡಲು ಸಾಧ್ಯವಾಗುತ್ತಿರಲಿಲ್ಲ.
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
ಅರಬ್ ದೇಶಗಳ ಬ್ಯಾಕಿಂಗ್ ಸೇವೆ ಮೇಲೆ ಇರಾನ್ ಸೇನೆ ದಾಳಿ ಸಾಧ್ಯತೆ ಹಿನ್ನೆಲೆ ಕಟ್ಟೆಚ್ಚರ | Operation Roaring Lion












Click it and Unblock the Notifications