ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಬ್ಯಾಂಕುಗಳನ್ನು ಮುಚ್ಚುವ ವದಂತಿ ನಂಬಬೇಡಿ: ಆರ್‌ಬಿಐ ಮನವಿ

|
Google Oneindia Kannada News

ಮುಂಬೈ, ಸೆಪ್ಟೆಂಬರ್ 25: ಒಂಬತ್ತು ಬ್ಯಾಂಕುಗಳನ್ನು ಮುಚ್ಚಲಾಗುತ್ತದೆ ಎಂದು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿರುವ ವದಂತಿಗಳನ್ನು ತಳ್ಳಿಹಾಕಿರುವ ಭಾರತೀಯ ರಿಸರ್ವ್ ಬ್ಯಾಂಕ್ (ಆರ್‌ಬಿಐ), ಯಾವುದೇ ವಾಣಿಜ್ಯ ಬ್ಯಾಂಕುಗಳನ್ನು ಮುಚ್ಚುವುದಿಲ್ಲ ಎಂದು ಸ್ಪಷ್ಟನೆ ನೀಡಿದೆ.

ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿರುವ ಸಂದೇಶಗಳು ಕಿಡಿಗೇಡಿತನ ಎಂದು ಹಣಕಾಸು ಕಾರ್ಯದರ್ಶಿ ರಾಜೀವ್ ಕುಮಾರ್ ಹೇಳಿದ್ದಾರೆ. ಸಾರ್ವಜನಿಕ ವಲಯದ ಬ್ಯಾಂಕುಗಳಲ್ಲಿ ಬಂಡವಾಳ ತೊಡಗಿಸುವ ಮೂಲಕ ಅವುಗಳನ್ನು ಬಲಗೊಳಿಸುವ ಪ್ರಕ್ರಿಯೆ ನಡೆಸಲಾಗುತ್ತಿದೆ ಎಂದಿದ್ದಾರೆ.

ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ 199 ಹುದ್ದೆಗಳಿಗೆ ಅರ್ಜಿ ಆಹ್ವಾನರಿಸರ್ವ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ 199 ಹುದ್ದೆಗಳಿಗೆ ಅರ್ಜಿ ಆಹ್ವಾನ

'ಕೆಲವು ವಾಣಿಜ್ಯ ಬ್ಯಾಂಕುಗಳನ್ನು ಆರ್‌ಬಿಐ ಮುಚ್ಚುತ್ತಿದೆ ಎಂದು ಸಾಮಾಜಿಕ ಮಾಧ್ಯಮಗಳ ಕೆಲವು ವರ್ಗಗಳಲ್ಲಿ ಹರಿದಾಡುತ್ತಿರುವ ಸುದ್ದಿ ಸುಳ್ಳು' ಎಂದು ಆರ್‌ಬಿಐ ಹೇಳಿಕೆಯಲ್ಲಿ ಸ್ಪಷ್ಟಪಡಿಸಿದೆ.

 Rumours in Social Media Closing Commercial Banks Are False RBI

ಒಂಬತ್ತು ಬ್ಯಾಂಕುಗಳನ್ನು ಆರ್‌ಬಿಐ ಶಾಶ್ವತವಾಗಿ ಸ್ಥಗಿತಗೊಳಿಸುತ್ತಿವೆ. ಹೀಗಾಗಿ ಜನರು ಕೂಡಲೇ ಅವುಗಳಲ್ಲಿನ ತಮ್ಮ ಹಣವನ್ನು ವಾಪಸ್ ಪಡೆದುಕೊಳ್ಳಬೇಕು ಎಂದು ಕೆಲವು ಸಾಮಾಜಿಕ ಮಾಧ್ಯಮಗಳಲ್ಲಿ ಸುದ್ದಿ ಹರಿದಾಡುತ್ತಿದೆ.

ಊಹಿಸಿದ್ದಕ್ಕಿಂತಲೂ ಹೆಚ್ಚು ಕುಸಿದಿದೆ ಜಿಡಿಪಿ: ಆರ್‌ಬಿಐ ಗೌರ್ನರ್ಊಹಿಸಿದ್ದಕ್ಕಿಂತಲೂ ಹೆಚ್ಚು ಕುಸಿದಿದೆ ಜಿಡಿಪಿ: ಆರ್‌ಬಿಐ ಗೌರ್ನರ್

'ಯಾವುದೇ ಸಾರ್ವಜನಿಕ ವಲಯದ ಬ್ಯಾಂಕುಗಳನ್ನು ಮುಚ್ಚುವ ಪ್ರಶ್ನೆಯೇ ಇಲ್ಲ. ಇವು ನಂಬಿಕೆಯ ಸಂಸ್ಥೆಗಳು. ಅದರ ಬದಲು ಸರ್ಕಾರವು ಪಿಎಸ್‌ಬಿಗಳನ್ನು ಬಲವರ್ಧನೆ ಮಾಡುವ ಮತ್ತು ಅದರ ಗ್ರಾಹಕರಿಗೆ ಉತ್ತಮ ಸೇವೆ ಸಲ್ಲಿಸಲು ಬಂಡವಾಳವನ್ನು ಹೆಚ್ಚಿಸುವ ಕಾರ್ಯ ಮಾಡುತ್ತಿದೆ' ರಾಜೀವ್ ಕುಮಾರ್ ಅವರು ಟ್ವೀಟ್ ಮಾಡಿದ್ದಾರೆ.

ಪಂಜಾಬ್ ಮತ್ತು ಮಹಾರಾಷ್ಟ್ರ ಸಹಕಾರ ಬ್ಯಾಂಕ್‌ನಿಂದ (ಪಿಎಂಸಿ) ಹಣ ವಿತ್‌ಡ್ರಾ ಮಾಡಿಕೊಳ್ಳುವುದರ ಮೇಲೆ ಆರ್‌ಬಿಐ ನಿಯಂತ್ರಣ ಹೇರಿದ ಮರುದಿನದಿಂದಲೇ ಈ ವದಂತಿ ಹರಿದಾಡುತ್ತಿದೆ.

English summary
RBI clarified that the rumours in social media of closing nine commercial banks are false.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X