ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ರಾಯ್ ಗೆ ವಿಮಾನ ಏರಲು ಅನುಮತಿ ಬೇಕು

By Mahesh
|
Google Oneindia Kannada News

ನವದೆಹಲಿ, ಅ.29: ಹೂಡಿಕೆ­ದಾರ­ರಿಂದ ಸಂಗ್ರಹಿಸಿದ ಸುಮಾರು 20 ಸಾವಿರ ಕೋಟಿ ರು ಮೊತ್ತವನ್ನು ಮರು ಪಾ­ವತಿಸುವಂತೆ ಸುಬ್ರತೋ ರಾಯ್ ಒಡೆತನದ ಸಹಾರಾ ಸಂಸ್ಥೆಗೆ ಸುಪ್ರೀಂ ಕೋರ್ಟ್ ತರಾಟೆ ತೆಗೆದುಕೊಂಡಿದೆ.

'ನಿಮ್ಮ (ಸಹಾರಾ ಸಮೂಹದ) ಕಣ್ಣಮುಚ್ಚಾಲೆ ಆಟ ಇನ್ನು ನಡೆಯದು. ನೀವು ನಂಬಿಕೆಯನ್ನು ಕಳೆದುಕೊಂ­ಡಿದ್ದೀರಿ. ಕೂಡಲೇ ಭಾರತೀಯ ಷೇರುಪೇಟೆ ನಿಯಂತ್ರಣ ಮಂಡಳಿಗೆ (ಸೆಬಿ) ರೂ.20 ಸಾವಿರ ಕೋಟಿ ಮೌಲ್ಯದ ಆಸ್ತಿ ಹಕ್ಕುಪತ್ರ ವರ್ಗಾಯಿಸಬೇಕು. 3 ವಾರದೊಳಗೆ ಈ ಆದೇಶ ಪಾಲಿಸಲು ವಿಫಲವಾದರೆ, ಕಂಪೆನಿ ಮುಖ್ಯಸ್ಥ ಸುಬ್ರತೋ ರಾಯ್ ದೇಶ ಬಿಟ್ಟು ಹೊರಗೆ ಹೋಗುವಂತಿಲ್ಲ' ಎಂದು ಕೆ.ಎಸ್. ರಾಧಾಕೃಷ್ಣನ್ ಮತ್ತು ಜೆ.ಎಸ್. ಕೇಹರ್ ಅವರನ್ನೊಳಗೊಂಡ ಪೀಠ ತಾಕೀತು ಮಾಡಿದೆ.

ತನ್ನ ಹೂಡಿಕೆದಾರರಿಗೆ ನೀಡಬೇಕಾಗಿದ್ದ ಒಟ್ಟಾರೆ 24 ಸಾವಿರ ಕೋಟಿ ರೂ.ಗಳನ್ನು ಮರುಪಾವತಿಸಲು ಸೋತಿರುವ ಸಹಾರಾ ಸಂಸ್ಥೆ ನ್ಯಾಯಾಲಯದ ಆದೇಶವನ್ನು ಉಲ್ಲಂಘಿಸಿದೆ. ಸಹರಾ ಸಮೂಹ ಉದ್ಯಮ ಸಂಸ್ಥೆಗೆ ಸೇರಿದ ಎರಡು ಕಂಪೆನಿಗಳ ಆಸ್ತಿಪಾಸ್ತಿಗಳನ್ನು ಷೇರು ವ್ಯವಹಾರಗಳ ನಿಯಂತ್ರಣ ಮಂಡಳಿ 'ಸೆಬಿ' ಮುಕ್ತ ಸ್ವಾತಂತ್ರವನ್ನು ಹೊಂದಿದೆ ಎಂದು ಸುಪ್ರೀಂಕೋರ್ಟ್ ಕಳೆದ ಫೆಬ್ರವರಿ ತಿಂಗಳಿನಲ್ಲಿ ಸೂಚಿಸಿತ್ತು.

ಸಹಾರಾ ಸಂಸ್ಥೆ ತನ್ನ ಹೂಡಿಕೆದಾರರಿಗೆ 24 ಸಾವಿರ ಕೋಟಿ ಹಿಂತಿರುಗಿಸಲು ಕಳೆದ ಡಿಸೆಂಬರ್2012 ರಲ್ಲಿ ಸುಪ್ರೀಂಕೋರ್ಟ್ ಹೆಚ್ಚಿನ ಕಾಲಾವಕಾಶ ನೀಡಿತ್ತು. ಎರಡು ತಿಂಗಳಲ್ಲಿ 24 ಸಾವಿರ ಕೋಟಿ ರು ಹಿಂತಿರುಗಿಸಲು ಸಹಾರಾ ಸಂಸ್ಥೆಗೆ ಸಾಧ್ಯವಾಗಿರಲಿಲ್ಲ. ನಂತರ ಕಳೆದ ಫೆಬ್ರವರಿಯಲ್ಲಿ ಮೂರು ತಿಂಗಳ ಗಡವು ಪಡೆದಿತ್ತು.

Sahara Group has 3 weeks to produce property deeds worth Rs 20k cr

ಸಹರಾ ಸಮೂಹದ ಸಂಸ್ಥೆಗಳಾದ ಸಹರಾ ಇಂಡಿಯಾ ರಿಯಲ್ ಎಸ್ಟೇಟ್ ಕಾರ್ಪೊರೇಶನ್ (ಎಸ್ ಐಆರ್ ಇಸಿ) ಹಾಗೂ ಸಹರಾ ಹೌಸಿಂಗ್ ಇನ್‌ವೆಸ್ಟ್‌ಮೆಂಟ್ ಕಾರ್ಪೊರೇಶನ್ (ಎಸ್ ಎಚ್ ಐಸಿ) ಸ್ವತ್ತುಗಳನ್ನು ಜಪ್ತಿ ಮಾಡುವಂತೆ ಹಾಗೂ ಅವುಗಳ ಬ್ಯಾಂಕ್ ಖಾತೆಗಳನ್ನು ಸ್ಥಗಿತಗೊಳಿಸುವ ಅಧಿಕಾರ ಸೆಬಿಗೆ ಸುಪ್ರೀಂಕೋರ್ಟ್ ನೀಡಿದೆ.

ಸೆಬಿಯ ಕಾನೂನುಗಳನ್ನು ಉಲ್ಲಂಘಿಸಿ ಹೂಡಿಕೆದಾರರಿಂದ ಹಣವನ್ನು ಸಂಗ್ರಹಿಸಿದ್ದಕ್ಕಾಗಿ ಸಹರಾ ಸಮೂಹದ ಈ ಎರಡು ಕಂಪೆನಿಗಳು ತಮ್ಮ ಹೂಡಿಕೆದಾರರಿಗೆ 24 ಸಾವಿರ ಕೋಟಿ ರೂ.ಗಳನ್ನು ಶೇ.15ರಷ್ಟು ವಾರ್ಷಿಕ ಬಡ್ಡಿಯೊಂದಿಗೆ ಮೂರು ತಿಂಗಳುಗಳೊಳಗೆ ಮರುಪಾವತಿಸಬೇಕೆಂದು ಸುಪ್ರೀಂಕೋರ್ಟ್ ಕಳೆದ ವರ್ಷದ ಆಗಸ್ಟ್ 3ರಂದು ನೀಡಿದ ಆದೇಶದಲ್ಲಿ ತಿಳಿಸಿತ್ತು.

ಏನಿದು ಪ್ರಕರಣ?: ಭಾರತೀಯ ಷೇರು ಮಾರುಕಟ್ಟೆ ನಿಯಂತ್ರಣ ಮಂಡಳಿ (ಸೆಬಿ) ನಿಯಮಗಳಿಗೆ ವಿರುದ್ಧವಾಗಿ ರೂ. 24,029 ಕೋಟಿ ರೂ. ಸಂಗ್ರಹಿಸಿದ್ದ ಸಹಾರಾ ಗ್ರೂಪ್ ಸಂಕಷ್ಟಕ್ಕೆ ಸಿಲುಕಿಕೊಂಡಿದೆ. 2008 ಮತ್ತು 2011ರ ನಡುವೆ ಷೇರು ಮಾರುಕಟ್ಟೆಯಲ್ಲಿ ಲಿಸ್ಟ್ ಆಗದಿರುವ ತನ್ನ ಎರಡು ಕಂಪನಿಗಳ ಮೂಲಕ ರೂ. 24,029 ಕೋಟಿ ನಿಯಮ ಉಲ್ಲಂಘಿಸಿ ಸಂಗ್ರಹಿಸಿದ ಆರೋಪ ಹೊತ್ತಿದೆ.

ಸಹಾರಾ ಹೌಸಿಂಗ್ ಇನ್ವೆಸ್ಟ್ ಮೆಂಟ್ ಕಾರ್ಪೊರೇಶನ್ ಮತ್ತು ಸಹಾರಾ ಇಂಡಿಯಾ ರಿಯಲ್ ಎಸ್ಟೇಟ್ ಕಾರ್ಪೊರೇಶನ್ ಮೂಲಕ ಠೇವಣಿದಾರರು ತಮಗೆ ಅಗತ್ಯವಿದ್ದಾಗ ಪರಿವರ್ತಿಸಬಹುದಾದ ಒಎಫ್ ಸಿಡಿ ಬಾಂಡ್ ಗಳನ್ನು ವಿತರಿಸುವ ಮೂಲಕ ಈ ನಿಧಿ ಸಂಗ್ರಹಿಸಲಾಗಿತ್ತು.

ಠೇವಣಿ ಸಂಗ್ರಹಣೆಯ ಸ್ಪಷ್ಟ ಉದ್ದೇಶವನ್ನು ಕಂಪನಿ ಸ್ಪಷ್ಟವಾಗಿ ತಿಳಿಸಿರಲಿಲ್ಲ. ಕಳೆದ 33 ವರ್ಷಗಳಲ್ಲಿ ಒಂದೇ ಒಂದು ಬೇನಾಮಿ ಖಾತೆ, ಹಣಕಾಸು ಅವ್ಯವಹಾರ ಕಾಣದೆ 12 ಕೋಟಿಗೂ ಅಧಿಕ ಹೂಡಿಕೆದಾರರನ್ನು ಸೃಷ್ಟಿಸಿದ ಸಹಾರಾ ಸಂಸ್ಥೆ ಎದೆಗುಂದದಿರುವುದು ಕುತೂಹಲಕಾರಿಯಾಗಿದೆ.

English summary
Holding that it was playing “hide and seek” and cannot be trusted any more, the Supreme Court on Monday directed the Sahara group to hand over title deeds of properties worth Rs 20,000 crore to SEBI, warning that failure to comply would mean Subrata Roy cannot leave India.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X