ಮುಗ್ಗರಿಸಿದ ಷೇರುಪೇಟೆ ಚೇತರಿಕೆ: ಸೆನ್ಸೆಕ್ಸ್ 450 ಪಾಯಿಂಟ್ಸ್‌ ಏರಿಕೆ

ನವದೆಹಲಿ, ಡಿಸೆಂಬರ್ 22: ಸೋಮವಾರ ಭಾರೀ ಕುಸಿತಕ್ಕೆ ಸಾಕ್ಷಿಯಾಗಿದ್ದ ಭಾರತೀಯ ಷೇರುಪೇಟೆಯು ಮಂಗಳವಾರ ಕೊಂಚ ಚೇತರಿಕೆ ಕಂಡಿದೆ. ಮುಂಬೈ ಷೇರುಪೇಟೆ ಸೆನ್ಸೆಕ್ಸ್ 452 ಪಾಯಿಂಟ್ಸ್‌ ಏರಿಕೆಗೊಂಡರೆ, ರಾಷ್ಟ್ರೀಯ ಷೇರುಪೇಟೆ ನಿಫ್ಟಿ 13,450 ಪಾಯಿಂಟ್ಸ್‌ಗಿಂತ ಹೆಚ್ಚಿದೆ.

ದಿನದ ವಹಿವಾಟು ಮುಕ್ತಾಯಕ್ಕೆ ಬಿಎಸ್‌ಇ ಸೂಚ್ಯಂಕ ಸೆನ್ಸೆಕ್ಸ್‌ 452.73 ಪಾಯಿಂಟ್ಸ್‌ ಅಥವಾ ಶೇಕಡಾ 0.99ರಷ್ಟು ಏರಿಕೆಗೊಂಡು 46,006.69ರಷ್ಟು ತಲುಪಿದೆ. ನಿಫ್ಟಿ 137.90 ಪಾಯಿಂಟ್ಸ್‌ ಅಥವಾ ಶೇಕಡಾ 1.03ರಷ್ಟು ಹೆಚ್ಚಾಗಿ 13,466.30 ಪಾಯಿಂಟ್ಸ್‌ಗೆ ತಲುಪಿದೆ. ಇಂದು 1537 ಷೇರುಗಳು ಲಾಭಗಳಿಸಿದರೆ, 1,325 ಷೇರುಗಳು ಕುಸಿತಗೊಂಡಿವೆ ಮತ್ತು 165 ಷೇರುಗಳು ಯಾವುದೇ ಬದಲಾವಣೆ ಆಗಿಲ್ಲ.

ಅದಾನಿ ಪೋರ್ಟ್ಸ್, ಎಚ್‌ಸಿಎಲ್ ಟೆಕ್, ಟೆಕ್ ಮಹೀಂದ್ರಾ, ಇನ್ಫೋಸಿಸ್ ಮತ್ತು ಗೇಲ್ ನಿಫ್ಟಿಯಲ್ಲಿ ಪ್ರಮುಖ ಲಾಭ ಗಳಿಸಿದ ಷೇರುಗಳಾಗಿದ್ದು, ಕೊಟಕ್ ಮಹೀಂದ್ರಾ ಬ್ಯಾಂಕ್, ಬಜಾಜ್ ಫೈನಾನ್ಸ್, ಎಚ್‌ಡಿಎಫ್‌ಸಿ, ಇಂಡಸ್ಇಂಡ್ ಬ್ಯಾಂಕ್ ಮತ್ತು ಹಿಂಡಾಲ್ಕೊ ನಷ್ಟ ಅನುಭವಿಸಿದ ಷೇರುಗಳಾಗಿವೆ.

Sensex Gains 452 Points: Nifty Above 13,450

ಸೆನ್ಸೆಕ್ಸ್ ಮತ್ತು ನಿಫ್ಟಿಯಲ್ಲಿ ಐಟಿ ಷೇರುಗಳು ಏರುಮುಖ ಸಾಧಿಸಿದ ಪರಿಣಾಮ ಹಸಿರು ಬಣ್ಣದಲ್ಲಿ ಕೊನೆಗೊಂಡಿತು. ಬಿಎಸ್‌ಇ ಮಿಡ್‌ಕ್ಯಾಪ್ ಮತ್ತು ಸ್ಮಾಲ್‌ಕ್ಯಾಪ್ ಸೂಚ್ಯಂಕಗಳು ತಲಾ 1 ರಷ್ಟು ಏರಿಕೆಯಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+