ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ನೋಂದಣಿ ಮತ್ತು ಮುದ್ರಾಂಕ ಶುಲ್ಕ ಹೆಚ್ಚಳ

|
Google Oneindia Kannada News

ಬೆಂಗಳೂರು, ನ.13 : ನೋಂದಣಿ ಮತ್ತು ಮುದ್ರಾಂಕ ಇಲಾಖೆಯು ಬೆಂಗಳೂರು ನಗರ, ಗ್ರಾಮಾಂತರ ಹಾಗೂ ರಾಮನಗರ ಜಿಲ್ಲೆಗಳ ಮಾರ್ಗಸೂಚಿ ದರವನ್ನು ಶೇ. 10ರಿಂದ 50ರವರೆಗೆ ಹೆಚ್ಚಳ ಮಾಡಿ ಆದೇಶ ಹೊರಡಿಸಿದೆ. ಹೊಸ ದರ ನ. 13ರಿಂದ ಅನ್ವಯವಾಗಲಿದೆ.

ಅ.15ರಂದು ಬೆಂಗಳೂರು, ಬೆಂಗಳೂರು ಗ್ರಾಮಾಂತರ ಮತ್ತು ರಾಮನಗರ ಜಿಲ್ಲೆಗಳ ಜಮೀನು, ನಿವೇಶನ ದರವನ್ನು ಶೇ. 10ರಿಂದ ಶೇ. 50ರಷ್ಟು ಹೆಚ್ಚಿಸಲು ತೀರ್ಮಾನ ಕೈಗೊಂಡು ಅಧಿಸೂಚನೆ ಹೊರಡಿಸಲಾಗಿತ್ತು. ಆಕ್ಷೇಪಣೆ ಸಲ್ಲಿಸಲು 15 ದಿನಗಳ ಕಾಲಾವಕಾಶ ನೀಡಲಾಗಿತ್ತು.

land

ಎಲ್ಲಾ ಆಕ್ಷೇಪಣೆಗಳನ್ನು ಸ್ವೀಕರಿಸಿದ ಬಳಿಕ ಬುಧವಾರ ನೋಂದಣಿ ಮತ್ತು ಮುದ್ರಾಂಕ ಇಲಾಖೆ ಅಂತಿಮ ಅಧಿಸೂಚನೆ ಹೊರಡಿಸಿದೆ. ಎಲ್ಲಾ ಉಪನೋಂದಣಾಧಿಕಾರಿಗಳ ಕಚೇರಿಯಲ್ಲಿ ನ. 13ರಿಂದ ನೋಂದಣಿ ಮತ್ತು ಮುದ್ರಾಂಕ ಶುಲ್ಕವನ್ನು ಪಾವತಿಸುವಾಗ ಹೊಸ ಮಾರ್ಗಸೂಚಿ ದರದ ಅನ್ವಯ ಶುಲ್ಕವನ್ನು ಪಾವತಿ ಮಾಡಬೇಕಾಗುತ್ತದೆ.

ಹೊಸ ಮಾರ್ಗಸೂಚಿ ದರದ ಮುದ್ರಿತ ಪ್ರತಿಗಳು ವಿಕಾಸಸೌಧದಲ್ಲಿರುವ ಸರ್ಕಾರಿ ಮುದ್ರಣಾಲಯದಲ್ಲಿ ಮತ್ತು ನೋಂದಣಿ ಮತ್ತು ಮುದ್ರಾಂಕ ಇಲಾಖೆಯ ಅಧಿಕೃತ ಅಂತರ್ಜಾಲ 'ಕಾವೇರಿ'ಯಲ್ಲಿ ಲಭ್ಯವಿದೆ. [ನೂತನ ದರ ಪಟ್ಟಿಗಾಗಿ ಇಲ್ಲಿದೆ ನೋಡಿ]

2013ರ ಆಗಸ್ಟ್ 12ರಿಂದ ಪೂರ್ವಾನ್ವಯವಾಗುವಂತೆ ಶೇ. 25ರಿಂದ 100ರವರೆಗೆ ಮಾರ್ಗಸೂಚಿ ದರವನ್ನು ಪರಿಷ್ಕರಿಸಿ ಸರ್ಕಾರ ಆದೇಶಿಸಿತ್ತು. ಕೇಂದ್ರ ಮೌಲ್ಯಮಾಪನ ಸಮಿತಿಯ ಶಿಫಾರಸಿನಂತೆ ಪ್ರತಿವರ್ಷವೂ ಮಾರುಕಟ್ಟೆ ದರಕ್ಕೆ ಅನುಗುಣವಾಗಿ ನೋಂದಣಿ ಶುಲ್ಕವನ್ನು ಹೆಚ್ಚಿಸಲಾಗುತ್ತಿದೆ.

English summary
The Karnataka government hiked stamp duty and registration charges as well as guidance value on registration of properties in Bengaluru, Bengaluru Rural and Ramanagara district.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X