ಭವಿಷ್ಯದಲ್ಲಿ ಡೆಬಿಟ್ ಕಾರ್ಡ್‌ಗಳ ಬಳಕೆಯೂ ಸ್ಥಗಿತ: ಎಸ್‌ಬಿಐ ಇಂಗಿತ
ಮುಂಬೈ, ಆಗಸ್ಟ್ 20: ಎಲ್ಲಾ ಕಡೆ ಸಾಮಾನ್ಯವಾಗಿ ಬಳಕೆಯಲ್ಲಿರುವ ಡೆಬಿಟ್ ಕಾರ್ಡ್‌ಗಳನ್ನು ಬ್ಯಾಂಕಿಂಗ್ ವ್ಯವಸ್ಥೆಯಿಂದಲೇ ತೆಗೆದುಹಾಕಲು ಭಾರತೀಯ ಸ್ಟೇಟ್ ಬ್ಯಾಂಕ್ ಮುಂದಾಗಿದೆ. ಡಿಜಿಟಲ್ ಪಾವತಿಗೆ ಹೆಚ್ಚಿನ ಆದ್ಯತೆ ನೀಡಲು ಬಯಸಿರುವ ಎಸ್‌ಬಿಐ, ಪ್ಲಾಸ್ಟಿಕ್ ಕಾರ್ಡ್‌ಗಳ ಬಳಕೆಯನ್ನು ಸಂಪೂರ್ಣವಾಗಿ ಸ್ಥಗಿತಗೊಳಿಸಲು ಉದ್ದೇಶಿಸಿದೆ.
ದೇಶದ ಜನಸಂಖ್ಯೆಯ ಶೇ 5ರಷ್ಟು ಗ್ರಾಹಕರನ್ನು ಹೊಂದಿರುವ ಎಸ್‌ಬಿಐ, ದೊಡ್ಡ ಪ್ರಮಾಣದಲ್ಲಿ ಜನರು ಡೆಬಿಟ್ ಕಾರ್ಡ್‌ಗಳ ಮೇಲೆ ಅವಲಂಬಿತರಾಗಿದ್ದರೂ, ಅದರ ಬಳಕೆಯನ್ನು ಅಂತ್ಯಗೊಳಿಸಲು ತೀರ್ಮಾನಿಸಿದೆ.
'ಡೆಬಿಟ್ ಕಾರ್ಡ್‌ಗಳನ್ನು ನಿರ್ಮೂಲನೆ ಮಾಡುವುದು ನಮ್ಮ ಬಯಕೆ. ನಾವು ಅವುಗಳನ್ನು ಸ್ಥಗಿತಗೊಳಿಸುತ್ತೇವೆ ಎನ್ನುವುದು ಖಚಿತ' ಎಂದು ಎಸ್‌ಬಿಐ ಅಧ್ಯಕ್ಷ ರಜನೀಶ್ ಕುಮಾರ್ ಅವರು ಸೋಮವಾರ ವಾರ್ಷಿಕ ಕಾರ್ಯಕ್ರಮದಲ್ಲಿ ಹೇಳಿದರು.

ದೇಶದಾದ್ಯಂತ ಸುಮಾರು 90 ಕೋಟಿ ಡೆಬಿಟ್ ಕಾರ್ಡ್‌ಗಳ ಬಳಕೆಯಾಗುತ್ತಿದೆ. ಕ್ರೆಡಿಟ್ ಕಾರ್ಡ್‌ಗಳ ಬಳಕೆ ಮೂರು ಕೋಟಿ ಇದೆ. ಡೆಬಿಟ್ ಕಾರ್ಡ್ ರಹಿತ ದೇಶದ ಸಾಧನೆ ಮಾಡಲು ಎಸ್‌ಬಿಐಗೆ ತನ್ನದೇ ಆದ 'ಯೋನೋ' ವೇದಿಕೆಯಂತಹ ಪ್ರಮುಖ ಡಿಜಿಟಲ್ ಪರಿಹಾರಗಳಿವೆ ಎಂದು ತಿಳಿಸಿದರು,
ಯೋನೋ ವೇದಿಕೆ ಮೂಲಕ ಗ್ರಾಹಕರು ಎಟಿಎಂ ಮೂಲಕ ಹಣವನ್ನು ಪಡೆದುಕೊಳ್ಳಬಹುದು ಅಥವಾ ಕಾರ್ಡ್ ಇಲ್ಲದೆಯೂ ವ್ಯಾಪಾರ ಮಳಿಗೆಗಳಲ್ಲಿ ಖರೀದಿ ಮಾಡಿ ಪಾವತಿಸಬಹುದು ಎಂದು ಹೇಳಿದರು.
ಎಸ್‌ಬಿಐ ಈಗಾಗಲೇ 68,000 ಯೋನೋ ಕ್ಯಾಶ್‌ಪಾಯಿಂಟ್‌ಗಳನ್ನು ಸ್ಥಾಪಿಸಿದೆ. ಮುಂದಿನ 18 ತಿಂಗಳಲ್ಲಿ ಹತ್ತು ಲಕ್ಷಕ್ಕೂ ಅಧಿಕ ಕ್ಯಾಶ್ ಪಾಯಿಂಟ್‌ಗಳನ್ನು ಸ್ಥಾಪಿಸುವ ಬೃಹತ್ ಯೋಜನೆ ಹೊಂದಿದೆ. ಇದರಿಂದ ಕಾರ್ಡ್ ಬಳಕೆ ಇನ್ನಷ್ಟು ಕಡಿಮೆಯಾಗಲಿದೆ ಎಂದರು.

ಇದರೊಂದಿಗೆ ಯೋನೋ ವೇದಿಕೆಯು ಕೆಲವು ನಿರ್ದಿಷ್ಟ ವ್ಯಾಪಾರಿಗಳಿಂದ ಖರೀದಿ ಮಾಡುವಾಗ ಸಾಲವನ್ನೂ ಒದಗಿಸುತ್ತದೆ. ಹೀಗಾಗಿ ಜೇಬಿನಲ್ಲಿರುವ ಕ್ರೆಡಿಟ್ ಕಾರ್ಡ್ ಬಳಕೆಯೂ ಕೆಲವೆಡೆ ಅಗತ್ಯವಿರುವುದಿಲ್ಲ. ಮುಂದಿನ ಐದು ವರ್ಷಗಳಲ್ಲಿ ನಿಮ್ಮ ಜೇಬಿನಲ್ಲಿ ಪ್ಲಾಸ್ಟಿಕ್ ಕಾರ್ಡ್‌ಗಳನ್ನು ಕೊಂಡೊಯ್ಯುವ ಅಗತ್ಯವೇ ಕಡಿಮೆಯಾಗಲಿದೆ. ವರ್ಚ್ಯುವಲ್ ಕೂಪನ್‌ಗಳು ಭವಿಷ್ಯದ ವಹಿವಾಟಿನ ಮೂಲವಾಗಲಿದೆ ಎಂದು ತಿಳಿಸಿದರು.
ಪಾವತಿಗಳನ್ನು ಮಾಡಲು ಕ್ಯೂಆರ್ ಕೋಡ್‌ಗಳ ಬಳಕೆ ಕೂಡ ಕಡಿಮೆ ವೆಚ್ಚದಾಯಕವಾಗಲಿವೆ ಎಂದು ಹೇಳಿದರು.
-
Gas Booking New Rules: ಎಲ್ಪಿಜಿ ಗ್ಯಾಸ್ ಬುಕ್ಕಿಂಗ್ನಲ್ಲಿ ಹೊಸ ನಿಯಮ, ಎಷ್ಟು ದಿನಕ್ಕೆ ಸಿಗುತ್ತೆ ಗ್ಯಾಸ್ ಸಿಲಿಂಡರ್ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Asha Bhosle Kannada Songs: ಆಶಾ ಭೋಸ್ಲೆ ಹಾಡಿದ ಕನ್ನಡದ ಹಾಡುಗಳು: ಕರ್ನಾಟಕದ ಜನರ ಮನ ಗೆದ್ದ ಖ್ಯಾತ ಗಾಯಕಿ -
Banana Price: ತಮಿಳುನಾಡು ಬಿಸಿಗಾಳಿ ಎಫೆಕ್ಟ್ಗೆ ಕುಸಿದ ಬಾಳೆಹಣ್ಣು ಧಾರಣೆ: ಬೆಂಗಳೂರಿನಲ್ಲಿ ಕೆ.ಜಿಗೆ 7 ರೂಪಾಯಿ -
Summer Specail Train: ಮೈಸೂರಿನಿಂದ ಇಲ್ಲಿಗೆ ವಿಶೇಷ ಎಕ್ಸ್ಪ್ರೆಸ್ ರೈಲು, 3 ರಾಜ್ಯಗಳಿಗೆ ಅನುಕೂಲ -
April 12 Horoscope: 12 ರಾಶಿಗಳಿಗೆ ಇಂದು ಹಣ-ಪ್ರೇಮದಲ್ಲಿ ಅದೃಷ್ಟ ಯಾರಿಗೆ? ಸಂಪೂರ್ಣ ವಿವರ -
IPL 2026: ಗಿಲ್ ಮತ್ತು ಬಟ್ಲರ್ ಸ್ಫೋಟಕ ಬ್ಯಾಟಿಂಗ್, ಎಲ್ಎಸ್ಜಿ ಮಣಿಸಿದ ಗುಜರಾತ್ ಟೈಟಾನ್ಸ್ -
Asha Bhosle: ಭಾರತೀಯ ಸಿನಿಮಾ ರಂಗದ ಖ್ಯಾತ ಗಾಯಕಿ ಆಶಾ ಭೋಸ್ಲೆ ಇನ್ನಿಲ್ಲ, ಸಂಗೀತ ರಾಣಿ ಎಂದೇ ಖ್ಯಾತಿ -
Karnataka Train: ಕಲಬುರಗಿ - ಕಲ್ಯಾಣ ಕರ್ನಾಟಕದಲ್ಲಿ ರೈಲು ಪ್ರಯಾಣಿಕರ ನಿತ್ಯ ಪರದಾಟ: ಸಿದ್ದು ಮಠಪತಿ ಬರಹ -
Vijay: ನಟ, ರಾಜಕಾರಣಿ ವಿಜಯ್ ಮಹತ್ವದ ಟ್ವೀಟ್ - ಅಪ್ರಬುದ್ಧ ರಾಜಕಾರಣಿ ಎಂದ ಡಿ.ಕೆ ಶಿವಕುಮಾರ್ Tamil Nadu Assembly Election -
Bhagyalakshmi Serial: ಕೊನೆಗೂ ಭಾಗ್ಯಲಕ್ಷ್ಮೀ - ಆದಿ ಮದುವೆ, ಮೂರು ಕುಟುಂಬಗಳನ್ನು ಒಂದು ಮಾಡುವ ಟಾಸ್ಕ್ -
Transfer: ಕರ್ನಾಟಕ ಶಿಕ್ಷಕರಿಗೆ ಸಿಹಿ ಸುದ್ದಿ: ವರ್ಗಾವಣೆ ನಿಯಮಗಳಲ್ಲಿ ಮಹತ್ವ ಬದಲಾವಣೆ, ಯಾರು ಅರ್ಹರು?












Click it and Unblock the Notifications