ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

34,432.46 ಕೋಟಿ ರುಪಾಯಿ ಬಂಡವಾಳ ಹೂಡಿಕೆ ಪ್ರಸ್ತಾವನೆಗಳಿಗೆ ಅನುಮೋದನೆ, 48,850 ಉದ್ಯೋಗಾವಕಾಶ ಸೃಷ್ಟಿ

|
Google Oneindia Kannada News

ಬೆಂಗಳೂರು, ಆಗಸ್ಟ್‌ 5: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಧ್ಯಕ್ಷತೆಯಲ್ಲಿ ಬೆಂಗಳೂರಿನಲ್ಲಿ ನಡೆದ ರಾಜ್ಯ ಉನ್ನತ ಮಟ್ಟದ ಒಪ್ಪಿಗೆ ನೀಡಿಕೆ ಸಮಿತಿಯ 59ನೇ ಸಭೆಯಲ್ಲಿ ಒಟ್ಟು 34,432.46 ಕೋಟಿ ರುಪಾಯಿಗಳ ಒಟ್ಟು 18 ಯೋಜನೆಗಳಿಗೆ ಒಪ್ಪಿಗೆ ನೀಡಲಾಯಿತು. ಇದರಿಂದ ರಾಜ್ಯದಲ್ಲಿ ಹೊಸದಾಗಿ 48,850 ಉದ್ಯೋಗ ಸೃಷ್ಟಿಯಾಗುವ ನಿರೀಕ್ಷೆ ಇದೆ.

ಟೊಯೊಟಾ ಮೋಟರ್ಸ್‌ ಸೇರಿದಂತೆ 8 ಹೊಸ ಕೈಗಾರಿಕಾ ಪ್ರಸ್ತಾವನೆಗಳು ಹಾಗೂ 10 ಹೆಚ್ಚುವರಿ ಹೂಡಿಕೆ ಯೋಜನೆಗಳ ಪ್ರಸ್ತಾವನೆ ಸೇರಿದಂತೆ ಒಟ್ಟು 18 ಪ್ರಸ್ತಾವನೆಗಳಿಗೆ ಒಪ್ಪಿಗೆ ನೀಡಿಕೆ ಸಮಿತಿಯ ಸಭೆಯಲ್ಲಿ ಅನುಮೋದನೆ ದೊರೆತಿದೆ.

ಐಟಿ ಉದ್ಯೋಗ ಸೃಷ್ಟಿಯಲ್ಲಿ ಹೈದರಾಬಾದ್ ಮೊದಲು: ಬೆಂಗಳೂರಿಗೆ ಎಷ್ಟನೇ ಸ್ಥಾನ ಗೊತ್ತಾ?ಐಟಿ ಉದ್ಯೋಗ ಸೃಷ್ಟಿಯಲ್ಲಿ ಹೈದರಾಬಾದ್ ಮೊದಲು: ಬೆಂಗಳೂರಿಗೆ ಎಷ್ಟನೇ ಸ್ಥಾನ ಗೊತ್ತಾ?

ಒಪ್ಪಿಗೆ ನೀಡಿಕೆ ಸಮಿತಿಯ ಸಭೆಯಲ್ಲಿ18 ಪ್ರಮುಖ ಯೋಜನೆಗಳಿಗೆ ಬಂಡವಾಳ ಹೂಡಲು ಒಪ್ಪಿಗೆ ನೀಡಿದ ನಂತರ ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, "ಎಥೆನಾಲ್‌, ಏರೋಸ್ಪೇಸ್, ಸೆಮಿ ಕಂಡಕ್ಟರ್‌ ತಯಾರಿಕಾ ಯಂತ್ರಗಳು, ಸ್ಟೀಲ್‌ ಹಾಗೂ ಆಟೋ ಮೊಬೈಲ್‌ ಉದ್ಯಮಗಳು ರಾಜ್ಯದಲ್ಲಿ ಹೂಡಿಕೆ ಮಾಡಲು ಮುಂದೆ ಬಂದಿವೆ. ಈ ಉದ್ಯಮಗಳ ಬಂಡವಾಳ ಹೂಡಿಕೆ ಪ್ರಸ್ತಾವನೆಗಳಿಗೆ ಅನುಮೋದನೆ ನೀಡಲಾಗಿದೆ, ಬೃಹತ್ ಪ್ರಮಾಣದ ಹೂಡಿಕೆಯಿಂದ ರಾಜ್ಯದಲ್ಲಿ ಮತ್ತಷ್ಟು ಉದ್ಯೋಗದ ಅವಕಾಶಗಳು ಸೃಷ್ಟಿಯಾಗಲಿವೆ" ಎಂದು ಮಾಹಿತಿ ನೀಡಿದರು.

State High Level Approval Committee Aproved 18 Projects Worth Rs 34,432.46 Crore

ಅನುಮೋದನೆ ಪಡೆದ ಪ್ರಮುಖ ಯೋಜನೆಗಳು

ಟೊಯೋಟಾ ಕಿರ್ಲೋಸ್ಕರ್ ಮೋಟಾರ್ ಪ್ರೈವೇಟ್ ಲಿಮಿಟೆಡ್ 3661.5 ಕೋಟಿ ರುಪಾಯಿ ಹೂಡಿಕೆ ಮಾಡಲು ಸರ್ಕಾರ ಒಪ್ಪಿಗೆ ನೀಡಿದೆ. ಟ್ರುಯಲ್ಟ್ ಬಯೋಎನರ್ಜಿ ಲಿಮಿಟೆಡ್, ಎಥೆನಾಲ್ ಘಟಕ ನಿರ್ಮಾಣಕ್ಕಾಗಿ 1,856.47 ಕೋಟಿ ರುಪಾಯಿ ಹೂಡಿಕೆ ಮಾಡಲು ಅನುಮೋದನೆ ದೊರೆತಿದೆ.

ಅಪ್ಲೈಡ್ ಮೆಟೀರಿಯಲ್ಸ್ ಇಂಡಿಯಾ ಸಂಸ್ಥೆ, ಸೆಮಿಕಂಡಕ್ಟರ್‌ ವಲಯದಲ್ಲಿ ಹೆಚ್ಚುವರಿಯಾಗಿ 1,573 ಕೋಟಿ ರುಪಾಯಿ ಹೂಡಿಕೆ ಮಾಡುವ ಪ್ರಸ್ತಾವನೆಗೆ ಒಪ್ಪಿಗೆ ಸಿಕ್ಕಿದೆ.

ಸ್ಪೆಕ್ಟಾಕಲ್ ಲೆನ್ಸ್, ಸ್ಪೆಕ್ಟಾಕಲ್ ಬ್ಲಾಂಕ್ಸ್/ಸೆಮಿ ಫಿನಿಶ್ಡ್ ಲೆನ್ಸ್ ಮತ್ತು ಇಂಡಸ್ಟ್ರಿಯಲ್ ಕ್ವಾಲಿಟಿ ಸಲ್ಯೂಷನ್‌ ಮಷಿನ್‌, ವೈದ್ಯಕೀಯ ಸಲಕರಣೆಯನ್ನು ಉತ್ಪಾದಿಸುವ ಕಾರ್ಲ್ ಝೈಸ್ ಇಂಡಿಯಾ ಪ್ರೈ. ಲಿಮಿಟೆಡ್ ಹೆಚ್ಚುವರಿಯಾಗಿ 977 ಕೋಟಿ ರುಪಾಯಿ ಹೂಡಿಕೆ ಮಾಡಲಿದೆ.

State High Level Approval Committee Aproved 18 Projects Worth Rs 34,432.46 Crore

ಪ್ರಕಾಶ್ ಸ್ಪಾಂಜ್ ಐರನ್ ಎಂಡ್ ಪ್ರೈವೆಟ್ ಲಿಮಿಟೆಡ್ ಕೂಡ ಹೆಚ್ಚುವರಿ 2,500.09 ಕೋಟಿ ರುಪಾಯಿ ಹೂಡಿಕೆ ಮಾಡಲಿದೆ. ಸೌರ ಕೋಶಗಳನ್ನು ಉತ್ಪಾದಿಸುವ ಎಂವಿ ಫೋಟೊವೋಲ್ಟಾಯಿಕ್ ಪವರ್ ಪ್ರೈವೇಟ್ ಲಿಮಿಟೆಡ್ 232.15 ಕೋಟಿ ರುಪಾಯಿ ಹೂಡಿಕೆ ಮಾಡಲು ಸಭೆಯಲ್ಲಿ ಒಪ್ಪಿಗೆ ನೀಡಿದೆ.

ಕೈಗಾರಿಕೆ ಅಭಿವೃದ್ಧಿ: ಆರ್‌ ಆಂಡ್‌ ಡಿ ನೀತಿಗೆ ಸರ್ಕಾರ ಅನುಮೋದನೆ-ಸಿಎಂಕೈಗಾರಿಕೆ ಅಭಿವೃದ್ಧಿ: ಆರ್‌ ಆಂಡ್‌ ಡಿ ನೀತಿಗೆ ಸರ್ಕಾರ ಅನುಮೋದನೆ-ಸಿಎಂ

ಶ್ರೀ ರೇಣುಕಾ ಶುಗರ್ಸ್ ಲಿಮಿಟೆಡ್, ಎಥೆನಾಲ್ ಘಟಕಕ್ಕಾಗಿ ಹೆಚ್ಚುವರಿಯಾಗಿ 775.35 ಕೋಟಿ ರುಪಾಯಿ ಹೂಡಿಕೆ ಮಾಡಲಿದೆ. ಚಿದಾನಂದ ಬಸವಪ್ರಭು ಕೋರೆ ಸಹಕಾರಿ ಸಕ್ಕರೆ ಕಾರ್ಖಾನೆ ನಿಯಮಿತ ಕೂಡು ಎಥೆನಾಲ್ ಘಟಕ ನಿರ್ಮಾಣ ಮಾಡಲು 270.36 ಕೋಟಿ ರುಪಾಯಿ ಹೂಡಿಕೆ ಮಾಡಲಿದೆ.

ಸಭೆಯಲ್ಲಿ ಪ್ರಮುಖ ಸಚಿವರು, ವಿವಿಧ ಇಲಾಖೆಗಳು ಭಾಗಿ

ಸಭೆಯಲ್ಲಿ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ, ಜಲ ಸಂಪನ್ಮೂಲ ಸಚಿವ ಗೋವಿಂದ ಕಾರಜೋಳ, ಸಕ್ಕರೆ ಸಚಿವ ಶಂಕರ ಪಾಟೀಲ್ ಮುನೇನಕೊಪ್ಪ, ತೋಟಗಾರಿಕೆ ಸಚಿವ ಮುನಿರತ್ನ, ವಸತಿ ಸಚಿವ ವಿ.ಸೋಮಣ್ಣ, ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ, ಮುಖ್ಯಮಂತ್ರಿಗಳ ಪ್ರಧಾನ ಕಾರ್ಯದರ್ಶಿ ಮಂಜುನಾಥ ಪ್ರಸಾದ್, ವಾಣಿಜ್ಯ ಮತ್ತು ಕೈಗಾರಿಕೆ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಡಾ.ಇ.ವಿ ರಮಣರೆಡ್ಡಿ, ಕೈಗಾರಿಕಾಭಿವೃದ್ಧಿ ಆಯುಕ್ತರಾದ ಗುಂಜನ್ ಕೃಷ್ಣ, ಕೆಐಎಡಿಬಿ ಸಿಇಒ ಡಾ.ಎನ್ ಶಿವಶಂಕರ್‌, ಕರ್ನಾಟಕ ಉದ್ಯೋಗ ಮಿತ್ರ ವ್ಯವಸ್ಥಾಪಕ ನಿರ್ದೇಶಕ ದೊಡ್ಡಬಸವರಾಜು ಸೇರಿದಂತೆ ವಿವಿಧ ಇಲಾಖೆಗಳ ಕಾರ್ಯದರ್ಶಿಗಳು, ಅಪರ ಮುಖ್ಯ ಕಾರ್ಯದರ್ಶಿಗಳು, ಆಯುಕ್ತರು ಹಾಗೂ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

Recommended Video

ಏಷ್ಯಾ ಕಪ್ ನಲ್ಲಿ ದಿನೇಶ್ ಕಾರ್ತಿಕ್ ಗೆ ಸಿಕ್ತು ಚಾನ್ಸ್:ಆದ್ರೆ ಇವರಿಬ್ಬರಿಗೆ ಆ ಅದೃಷ್ಟ ಮಿಸ್ | Oneindia Kannada

English summary
A total of 18 projects worth Rs 34,432.46 crore were approved in the 59th meeting of the State High Level Approval Committee held in Bangalore under the chairmanship of Chief Minister Basavaraja Bommai. This is expected to create 48,850 new jobs in the state.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X