ಸಬ್ಸಿಡಿ ಸಿಲಿಂಡರ್ ಬೆಲೆ ಏರಿಕೆ, ಸಬ್ಸಿಡಿ ರಹಿತ ಸಿಲಿಂಡರ್ ಇಳಿಕೆ
ಸಬ್ಸಿಡಿ ಸಿಲಿಂಡರ್ ಬೆಲೆ ಏರಿಕೆ ಹಾಗೂ ಸಬ್ಸಿಡಿ ರಹಿತ ಸಿಲಿಂಡರ್ ಇಳಿಕೆಯಾಗಿದೆ. ಗುರುವಾರ(ಜೂನ್ 01)ದಿಂದ ಹೊಸ ದರಗಳು ಜಾರಿಗೆ ಬರಲಿದೆ ಎಂದು ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳು ಹೇಳಿವೆ
ನವದೆಹಲಿ, ಜೂನ್ 01: ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿನ ತೈಲ ದರ ಏರಿಳಿಕೆಗೆ ತಕ್ಕಂತೆ ಭಾರತದಲ್ಲಿ ಅಡುಗೆ ಅನಿಲ ಸಿಲಿಂಡರ್ ದರಗಳನ್ನು ಪರಿಷ್ಕರಿಸಲಾಗಿದೆ. ಸಬ್ಸಿಡಿವುಳ್ಳ ಎಲ್ ಪಿಜಿ ಸಿಲಿಂಡರ್ ಬೆಲೆ ದರ ಏರಿಕೆಯಾಗಿದ್ದರೆ, ಸಬ್ಸಿಡಿ ರಹಿತ ಸಿಲಿಂಡರ್ ಬೆಲೆ ಇಳಿಕೆಯಾಗಿದೆ
ಸಬ್ಸಿಡಿವುಳ್ಳ ಸಿಲಿಂಡರ್ ಬೆಲೆ ಪ್ರತಿ ಸಿಲಿಂಡರ್ ಗೆ 3.88 ರು ಏರಿಕೆಯಾಗಿದ್ದರೆ, ಸಬ್ಸಿಡಿ ರಹಿತ ಸಿಲಿಂಡರ್ ಬೆಲೆ 78.50 ರು ಪ್ರತಿ ಸಿಲಿಂಡರ್ ಗೆ ಇಳಿಕೆಯಾಗಿದೆ.[ಬಡವರ ಮನೆಗೆ ಎಲ್ಪಿಜಿ, ಉಜ್ವಲ ಯೋಜನೆಯ ಸಾಧನೆ]

ನೂತನ ದರಗಳು ಗುರುವಾರ(ಜೂನ್ 01)ದಿಂದ ಜಾರಿಗೆ ಬರಲಿದೆ ಎಂದು ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳು ಹೇಳಿವೆ.[ಪ್ರಧಾನ ಮಂತ್ರಿ "ಉಜ್ವಲ" ಯೋಜನೆ ಎಂದರೇನು?]
ಪರಿಷ್ಕೃತ ದರ: 14.2 ಕೆಜಿ ಗೃಹ ಬಳಕೆ ಸಿಲಿಂಡರ್ ಬೆಲೆ 444.38 ರು ಆಗಿದೆ. 12 ಸಿಲಿಂಡರ್ ಕೋಟಾ ನಂತರ ಸಿಗುವ ಸಬ್ಸಿಡಿ ರಹಿತ ಸಿಲಿಂಡರ್ ಬೆಲೆ 723.3 ರು. ನಿಂದ 644.8ರುಗಳಿಗೆ ಇಳಿಕೆಯಾಗಿದೆ. ಮಾರ್ಚ್ 01ರಂದು 86 ರು ಗಳಷ್ಟು ಏರಿಕೆ ಕಂಡಿತ್ತು.
ಏಪ್ರಿಲ್ 03, 2017ರಂದು ಗೃಹ ಬಳಕೆ ಅಡುಗೆ ಅನಿಲದ ಸಿಲಿಂಡರ್ ಬೆಲೆ ಪ್ರತಿ ಸಿಲಿಂಡರ್ ಗೆ 5.57 ರೂ ಏರಿಸಲಾಗಿತ್ತು. ಇದಕ್ಕೂ ಮುನ್ನ ಎಲ್ ಪಿಜಿ ಸಿಲಿಂಡರ್ ದರವನ್ನು ಜನವರಿ 01ರಂದು 2 ರು ಏರಿಸಲಾಗಿತ್ತು. ಸಬ್ಸಿಡಿ ರಹಿತ ಎಲ್ ಪಿಜಿ ಸಿಲಿಂಡರ್ ಬೆಲೆ 14.50 ರೂ ಇಳಿಸಲಾಗಿತ್ತು.[ತೆರಿಗೆ ವಂಚಕರ ಪ್ಯಾನ್, ಎಲ್ ಪಿಜಿ ಸಬ್ಸಿಡಿ ಕಡಿತ]
ಗಮನಿಸಿ: ಸರ್ಕಾರಿ ಸ್ವಾಮ್ಯದ ಇಂಧನ ಕಂಪನಿಗಳಾದ ಇಂಡಿಯನ್ ಆಯಿಲ್ ಕಾರ್ಪೊರೇಷನ್, ಹಿಂದೂಸ್ತಾನ್ ಪೆಟ್ರೋಲಿಯಂ, ಭಾರತ್ ಪೆಟ್ರೋಲಿಯಂ ಪ್ರತಿ ತಿಂಗಳ ಮೊದಲ ದಿನದಂದು ಇಂಧನ ದರ, ಸಬ್ಸಿಡಿ ರಹಿತ ಎಲ್ ಪಿಜಿ, ಜೆಟ್ ಇಂಧನ, ಸೀಮೆಎಣ್ಣೆ ಬೆಲೆ ಬಗ್ಗೆ ನಿರ್ಧಾರ ಕೈಗೊಳ್ಳುತ್ತವೆ. ಬೆಲೆ ಏರಿಕೆ ಹಾಗೂ ಇಳಿಕೆ ಎಲ್ಲವೂ ಜಾಗತಿಕ ಮಾರುಕಟ್ಟೆ ದರದ ಮೇಲೆ ಅವಲಂಬಿತವಾಗಿರುತ್ತದೆ. (ಒನ್ ಇಂಡಿಯಾ ಸುದ್ದಿ)
-
ಎಲ್ಪಿಜಿ ಪೂರೈಕೆಯಲ್ಲಿ ತೊಂದರೆ ಇಲ್ಲ, ಕೇಂದ್ರ ಸಚಿವರಿಂದ ಭರವಸೆ ಸಿಕ್ಕಿದೆ: ಸಿಎಂ ಸಿದ್ದರಾಮಯ್ಯ -
Gold Rate Today: ಬಂಗಾರ ಪ್ರಿಯರಿಗೆ ಸಿಹಿಸುದ್ದಿ: ಇಂದೂ ಇಳಿಕೆ ಕಂಡ ಚಿನ್ನದ ಬೆಲೆ, ಬೆಂಗಳೂರಿನಲ್ಲಿ ದರಗಳು ಹೀಗಿವೆ -
Ragi Mudde: ಕರ್ನಾಟಕದ ರಾಗಿ ಮುದ್ದೆ ಸವಿಯಬೇಕು: ಮಂಡ್ಯದಲ್ಲಿ ಬಯಕೆ ಬಿಚ್ಚಿಟ್ಟ ಕೇಂದ್ರ ಸಚಿವ ಮನ್ಸುಖ್ ಮಾಂಡವೀಯ -
ರೈತರ ಹಿತಾಸಕ್ತಿಗೆ ಧಕ್ಕೆಯಿಲ್ಲ: 1 ರೂಪಾಯಿಗೆ ಲೀಟರ್ ಹಾಲು ವಿವಾದಕ್ಕೆ ಸ್ಪಷ್ಟನೆ ಕೊಟ್ಟ FlipKart -
ಮಾರ್ಚ್ 15 ದಿನ ಭವಿಷ್ಯ: ಈ ರಾಶಿಯವರಿಗೆ ಒಲಿಯಲಿದೆ ಅದೃಷ್ಟ; ನಿಮ್ಮ ಜಾತಕ ಹೇಗಿದೆ ತಿಳಿಯಿರಿ -
Gold Rate: ಆಭರಣ ಪ್ರಿಯರ ಗಮನಕ್ಕೆ; ಮಾರುಕಟ್ಟೆಯಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ ಗೊತ್ತಾ? ಇಲ್ಲಿದೆ ಮಾಹಿತಿ -
ಮಕ್ಕಳನ್ನ ಫ್ಯಾಕ್ಟರಿಯಂತೆ ಹೆರುತ್ತಾರೆ, ಪೋಷಿಸುವ ತಾಕತ್ತಿದ್ರೆ ಮಾತ್ರ ಮಕ್ಕಳು ಮಾಡ್ಕೊಳ್ಳಿ: ನಟಿ ವರಲಕ್ಷ್ಮಿ ಶರತ್ಕುಮಾರ್ -
Viral Video: ಶಾಲಾ ಕಾರ್ಯಕ್ರಮದಲ್ಲಿ ವಿದ್ಯಾರ್ಥಿನಿಯರ ಟವಲ್ ಡ್ಯಾನ್ಸ್: ಚರ್ಚೆ ಹುಟ್ಟುಹಾಕಿದ ವೈರಲ್ ವಿಡಿಯೋ -
Viral Video: ಪೋಷಕರಿಗೆ ಹೊಸ ಕಾರು ಗಿಫ್ಟ್ ಮಾಡಿದ ಹೆಣ್ಣುಮಕ್ಕಳು, ನೆಟ್ಟಿಗರ ಹೃದಯ ಗೆದ್ದ ಈ ವಿಡಿಯೋ -
Anushka Shetty Marriage: ಬೆಂಗಳೂರಿನ ಖ್ಯಾತ ಉದ್ಯಮಿ ಜೊತೆ ನಟಿ ಅನುಷ್ಕಾ ಶೆಟ್ಟಿ ಮದುವೆ, ಈ ವರ್ಷದಲ್ಲೇ ಮುಹೂರ್ತ: ವರದಿ -
1 ರೂಪಾಯಿಗೆ 1 ಲೀಟರ್ ಹಾಲು: ಫ್ಲಿಪ್ಕಾರ್ಟ್ ವಿರುದ್ಧ ಸಿಡಿದೆದ್ದ ಡಿ.ಕೆ. ಸುರೇಶ್; ಪ್ರಧಾನಿ ಮೋದಿಗೆ ದೂರು -
ಬಿಜೆಪಿಯಿಂದ ನಟ ವಿಜಯ್ಗೆ ಡಿಸಿಎಂ ಹುದ್ದೆ, 80 ಸೀಟುಗಳ ಆಫರ್; ತಮಿಳುನಾಡು ಚುನಾವಣೆಗೆ ಹೊಸ ಮೈತ್ರಿ ಲೆಕ್ಕಾಚಾರ












Click it and Unblock the Notifications