ಸಬ್ಸಿಡಿ ಸಹಿತ ಅಡುಗೆ ಅನಿಲ ಸಿಲಿಂಡರ್ ಬೆಲೆ ಏರಿಕೆ

ನವದೆಹಲಿ, ಜುಲೈ 01: ಗೃಹ ಬಳಕೆ ಅಡುಗೆ ಅನಿಲ ಸಿಲಿಂಡರ್ ಬೆಲೆಯನ್ನು ಏರಿಕೆ ಮಾಡಲಾಗಿದೆ. ಅಂತಾರಾಷ್ಟ್ರೀಯ ಮಟ್ಟದಲ್ಲಿ ದರಗಳ ಏರಿಳಿತ, ಡಾಲರ್ ಎದುರು ರುಪಾಯಿ ಮೌಲ್ಯ ಕುಸಿತದ ಕಾರಣ ನೀಡಲಾಗಿದೆ. ಸಬ್ಸಿಡಿ ಸಹಿತ ಎಲ್ ಪಿಜಿ ಪ್ರತಿ ಸಿಲಿಂಡರ್ ಮೇಲೆ 2.71ರು ಏರಿಕೆ ಕಂಡು ಬಂದಿದೆ.

ಭಾನುವಾರ(ಜುಲೈ 01) ಮಧ್ಯರಾತ್ರಿಯಿಂದ ಜಾರಿಗೊಳ್ಳಲಿರುವ ಪರಿಷ್ಕೃತ ದರದಂತೆ ಸಬ್ಸಿಡಿ ಸಹಿತ ಎಲ್ ಪಿಜಿ ಬೆಲೆ 493.35 ರು ಆಗಲಿದೆ. ದೇಶಿ ಸಬ್ಸಿಡಿ ರಹಿತ ಎಲ್ ಪಿಜಿ ಮೇಲಿನ ಜಿಎಸ್ ಟಿ ದರ ಪರಿಷ್ಕರಣೆಗೊಂಡಿದ್ದು ದರ ಏರಿಕೆಗೆ ಕಾರಣ ಎಂದು ಸರ್ಕಾರಿ ಸ್ವಾಮ್ಯದ ಇಂಡಿಯನ್ ಆಯಿಲ್ ಕಾರ್ಪೊರೇಷನ್ ತಿಳಿಸಿದೆ.

Subsidised cooking gas price was hiked by Rs 2.71 per cylinder

ಜುಲೈ 2018ರಲ್ಲಿ ಗ್ರಾಹಕರ ಬ್ಯಾಂಕ್ ಖಾತೆಗೆ ಸೇರಲಿರುವ ಸಬ್ಸಿಡಿ ವರ್ಗಾವಣೆ ಮೊತ್ತವನ್ನು 257.7 ರು ಪ್ರತಿ ಸಿಲಿಂಡರ್ ಗೆ ಏರಿಕೆ ಮಾಡಲಾಗಿದೆ. ಜೂನ್ ತಿಂಗಳಿನಲ್ಲಿ 204.95ರು ನಷ್ಟಿತ್ತು. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿನ ದರ ವ್ಯತ್ಯಯದಿಂದ ಎಲ್ ಪಿಜಿ ಗ್ರಾಹಕರನ್ನು ಈ ಮೂಲಕ ರಕ್ಷಿಸಲಾಗಿದೆ ಎಂದು ಐಒಸಿ ಹೇಳಿದೆ.

ಗಮನಿಸಿ: ಸರ್ಕಾರಿ ಸ್ವಾಮ್ಯದ ಇಂಧನ ಕಂಪನಿಗಳಾದ ಇಂಡಿಯನ್ ಆಯಿಲ್ ಕಾರ್ಪೊರೇಷನ್, ಹಿಂದೂಸ್ತಾನ್ ಪೆಟ್ರೋಲಿಯಂ, ಭಾರತ್ ಪೆಟ್ರೋಲಿಯಂ ಪ್ರತಿ ತಿಂಗಳ ಮೊದಲ ದಿನದಂದು ಇಂಧನ ದರ, ಸಬ್ಸಿಡಿ ರಹಿತ ಎಲ್ ಪಿಜಿ, ಜೆಟ್ ಇಂಧನ, ಸೀಮೆಎಣ್ಣೆ ಬೆಲೆ ಬಗ್ಗೆ ನಿರ್ಧಾರ ಕೈಗೊಳ್ಳುತ್ತವೆ. ಬೆಲೆ ಏರಿಕೆ ಹಾಗೂ ಇಳಿಕೆ ಎಲ್ಲವೂ ಜಾಗತಿಕ ಮಾರುಕಟ್ಟೆ ದರದ ಮೇಲೆ ಅವಲಂಬಿತವಾಗಿರುತ್ತದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+