ಟಾಟಾದಿಂದ 1 ಜಿಬಿ ಡಾಟಾಗೆ 91 ರು ಯೋಜನೆ
ಬೆಂಗಳೂರು, ಅಕ್ಟೋಬರ್ 27: ದೇಶದ ಮುಂಚೂಣಿಯಲ್ಲಿರುವ ಟೆಲಿಕಾಂ ಸಂಸ್ಥೆಗಳಲ್ಲಿ ಒಂದಾಗಿರುವ ಟಾಟಾ ಡೊಕೊಮೊ ಕರ್ನಾಟಕ ಮಾರುಕಟ್ಟೆಯ ತನ್ನ ಪ್ರೀಪೇಯ್ಡ್ ಗ್ರಾಹಕರಿಗಾಗಿ ಒಂದು ವಿನೂತನವಾದ ಡಾಟಾ ಯೋಜನೆಯನ್ನು ದೀಪಾವಳಿ ಪ್ರಯುಕ್ತ ಪ್ರಕಟಿಸಿದೆ.
ಮೈ ಬೆಸ್ಟ್ ಆಫರ್(ಎಂಬಿಒ) ಎಂಬ ಈ ಯೋಜನೆಯಡಿ ಪ್ರತಿ ಒಂದು ಜಿಬಿಗೆ 91 ರೂಪಾಯಿಯಿಂದ ಆರಂಭವಾಗುವ ಡಾಟಾ ಪ್ಯಾಕ್ ಅನ್ನು ಬಿಡುಗಡೆ ಮಾಡಿದ್ದು, ಇದರಲ್ಲಿ ಯಾವುದೇ ಗೌಪ್ಯ ಶುಲ್ಕ ಅಥವಾ ಇನ್ನಾವುದೇ ಶುಲ್ಕ ಇರುವುದಿಲ್ಲ.
ಗ್ರಾಹಕರು 91 ರೂಪಾಯಿಗಳ ರೀಚಾರ್ಜ್ ಮಾಡಿಸಿದರೆ 1 ಜಿಬಿ ಡಾಟಾ ಪಡೆಯಲಿದ್ದಾರೆ. ಅದೇ ರೀತಿ, 182 ರೂಪಾಯಿಗಳಿಗೆ 2 ಜಿಬಿ ಮತ್ತು 273 ರೂಪಾಯಿಗೆ 3 ಜಿಬಿ ಡಾಟಾ ಪಡೆಯಬಹುದಾಗಿದೆ. ಈ ಹೊಸ ಸೇವೆಗಳ ಮಾಹಿತಿಗಾಗಿ ಗ್ರಾಹಕರು *123# ಗೆ ಕರೆ ಮಾಡಬಹುದಾಗಿದೆ.

ಈ ಸಂದರ್ಭದಲ್ಲಿ ಮಾತನಾಡಿದ ಟಾಟಾ ಟೆಲಿ ಸರ್ವೀಸಸ್ ಲಿಮಿಟೆಡ್ ನ ಕರ್ನಾಟಕ-ಕೇರಳ ವೃತ್ತದ ಗ್ರಾಹಕ ವ್ಯವಹಾರಗಳ ಮುಖ್ಯಸ್ಥ ಬಾಲಾಜಿ ಪ್ರಕಾಶ್ ಅವರು, ಗುಣಮಟ್ಟದ ಡಾಟಾ ಸೇವೆಗಳಿಗೆ ಹೆಚ್ಚಿದ ಬೇಡಿಕೆ ಪರಿಣಾಮ ಮಾರುಕಟ್ಟೆಯಲ್ಲಿ ಕೆಲವೊಂದು ಗೌಪ್ಯ ದರಗಳೂ ಒಳಗೊಂಡಂತೆ ಡಾಟಾ ಉತ್ಪನ್ನಗಳ ಪ್ರಮಾಣ ಹೆಚ್ಚಳವಾಗಲು ಕಾರಣವಾಗಿದೆ.
ಆದರೆ, ಟಾಟಾ ಡೊಕೊಮೊ ಪಾರದರ್ಶಕತೆಗೆ ಹೆಚ್ಚು ಒತ್ತು ಕೊಡುತ್ತಿದ್ದು, ಅದರಲ್ಲಿ ಬದ್ಧತೆ, ವಿಶ್ವಾಸವನ್ನೂ ಹೊಂದಿದೆ. ಈ ಹಿನ್ನೆಲೆಯಲ್ಲಿ ಗ್ರಾಹಕರು ಯಾವುದೇ ಗೌಪ್ಯ ಶುಲ್ಕಗಳ ಬಗ್ಗೆ ತಲೆ ಕೆಡಿಸಿಕೊಳ್ಳುವಂತಿಲ್ಲ ಅಥವಾ ಆತಂಕಪಡಬೇಕಿಲ್ಲ.
ಈ ಹೊಸ ಡಾಟಾ ಆಫರ್ ನಲ್ಲಿ ಗ್ರಾಹಕರು ಆಯ್ಕೆ ಮಾಡಿಕೊಂಡ ಪ್ಲಾನಿಗೆ ಅನುಗುಣವಾಗಿ ಡಾಟಾ ಪಡೆಯಲಿದ್ದಾರೆ. ಈ ನಮ್ಮ ಹೊಸ ಡಾಟಾ ಯೋಜನೆಯಿಂದ ಗ್ರಾಹಕರು ಸಂತುಷ್ಟರಾಗುತ್ತಾರೆ ಎಂಬ ವಿಶ್ವಾಸ ನಮ್ಮದಾಗಿದೆ ಎಂದು ತಿಳಿಸಿದ್ದಾರೆ.
ಭಾರತದಲ್ಲಿ ಸ್ಮಾರ್ಟ್ ಫೋನ್ ಗಳ ಬಳಕೆ ಗಣನೀಯ ಪ್ರಮಾಣದಲ್ಲಿ ಏರಿಕೆಯಾಗುತ್ತಿದೆ. ಇದರ ಪರಿಣಾಮ ಇಂಟರ್‍ನೆಟ್ ಬಳಕೆ ಪ್ರಮಾಣವೂ ಹೆಚ್ಚಾಗುತ್ತಿದೆ. ಈ ಹಿನ್ನೆಲೆಯಲ್ಲಿ ಗ್ರಾಹಕರಲ್ಲಿ ಉಂಟಾಗಿರುವ ಬದಲಾವಣೆಗಳಿಗೆ ಅನುಗುಣವಾಗಿ ಅವರಿಗೆ ಉತ್ತಮ ಸೇವೆ ನೀಡುವ ಉದ್ದೇಶದಿಂದ ಟಾಟಾ ಡೊಕೊಮಾ ಆವಿಷ್ಕಾರಕ ಕ್ರಮಗಳನ್ನು ಕೈಗೊಳ್ಳುತ್ತಿದೆ.
ಇದೀಗ ಕಂಪನಿ ಕೈಗೆಟುಕುವ ದರದಲ್ಲಿ ವಾಯ್ಸ್ ಪ್ಲಾನ್, ಡಾಟಾ ಪ್ಲಾನ್, ಮೌಲ್ಯಕ್ಕೆ ತಕ್ಕಂತೆ ಕಾಂಬೋ ಪ್ಯಾಕ್, ಹಬ್ಬ-ಹರಿದಿನಗಳ ಸಂದರ್ಭದಲ್ಲಿ ವಿಶೇಷ ಯೋಜನೆಗಳು, ಮೌಲ್ಯವರ್ಧಿತ ಸೇವೆಗಳನ್ನು ಗ್ರಾಹಕರಿಗೆ ನೀಡುತ್ತಾ ಬಂದಿದೆ. ಈ ಎಲ್ಲಾ ಸೇವೆಗಳು ಗ್ರಾಹಕ ಸ್ನೇಹಿಯಾಗಿದ್ದು, ಪ್ರತಿಯೊಬ್ಬ ಗ್ರಾಹಕರ ಹಿತವನ್ನು ಕಾಯುವಂತಹ ಯೋಜನೆಗಳಾಗಿವೆ.
-
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
IPL 2026 Ticket: ಐಪಿಎಲ್ ಟಿಕೆಟ್ ಖರೀದಿ ಕುರಿತು ಬೆಂಗಳೂರು ಪೊಲೀಸರಿಂದ ಕ್ರಿಕೆಟ್ ಪ್ರೇಮಿಗಳಿಗೆ ಮಹತ್ವದ ಸಲಹೆ -
By-Election: ದಾವಣಗೆರೆ ದಕ್ಷಿಣದಲ್ಲಿ ಮೊದಲ ಬಾರಿ ಬಿಜೆಪಿ ಗೆಲುವು ನಿಶ್ಚಿತ; ಬಸವರಾಜ ಬೊಮ್ಮಾಯಿ ವಿಶ್ವಾಸ -
ಆರ್ಸಿಬಿ ವಿರುದ್ಧದ ಪಂದ್ಯಕ್ಕೂ ಮುನ್ನ ಕೇವಲ 42 ಎಸೆತಗಳಲ್ಲಿ 94 ರನ್ ಸಿಡಿಸಿದ ಅಭಿಷೇಕ್ ಶರ್ಮಾ: ಭಾರೀ ವೈರಲ್












Click it and Unblock the Notifications