ಟಾಟಾ ಸಮೂಹ ತೆಕ್ಕೆಗೆ ಏರ್ ಇಂಡಿಯಾ; ಟಾಟಾ ಪಾಲಾದ ಮಹಾರಾಜ?
ನವದೆಹಲಿ,
ಅಕ್ಟೋಬರ್ 01: ಸಾಲದ ಭಾರಕ್ಕೆ ಕುಸಿಯುತ್ತಿರುವ ಏರ್ ಇಂಡಿಯಾದ ಉಕ್ಕಿನ ಹಕ್ಕಿಯ ಹೊಣೆಯನ್ನು ಯಾರು ಹೊತ್ತುಕೊಳ್ಳಲಿದ್ದಾರೆ ಎಂಬ ಕುತೂಹಲಕ್ಕೆ ತೆರೆ ಬಿದ್ದಿದೆ. ಏರ್ ಇಂಡಿಯಾ ಕೊಳ್ಳಲು ಬಿಡ್ ಸಲ್ಲಿಸಿದ್ದ ಸಂಸ್ಥೆಗಳ ಪೈಕಿ ಟಾಟಾ ಸನ್ಸ್ ಹಾಗೂ ಸ್ಪೈಸ್ ಜೆಟ್ ಪ್ರಮುಖ ಸಂಸ್ಥೆಗಳಾಗಿವೆ. ಈ ಪೈಕಿ ಏರ್ ಇಂಡಿಯಾವನ್ನು ಖರೀದಿಸಲು ಸಲ್ಲಿಸಿದ್ದ ಫೈನಲ್ ಬಿಡ್ ಟಾಟಾ ಸಮೂಹ ಸಂಸ್ಥೆ ಪಾಲಾಗಿದೆ ಎಂಬ ಸುದ್ದಿ ಬಂದಿದೆ. ಅಧಿಕೃತ ಹೇಳಿಕೆ ಇನ್ನೂ ಪ್ರಕಟವಾಗಿಲ್ಲ. 1953ರ ಬಳಿಕ ಮತ್ತೊಮ್ಮೆ ಏರ್ ಇಂಡಿಯಾದ ಮೇಲೆ ಟಾಟಾ ಸಂಸ್ಥೆ ತನ್ನ ಹಿಡಿತ ಸಾಧಿಸುತ್ತಿದೆ. ಟಾಟಾ ವಿಸ್ತಾರದ ಭಾಗವಾಗಿ ಏರ್ ಇಂಡಿಯಾ ಖರೀದಿ ಪ್ರಕ್ರಿಯೆಗೆ ಚಾಲನೆ ನೀಡಲಾಗಿದೆ. id="toptextpromo"> id='are-slot-1' class='oiad oi-axt oiadv'>ಸುಮಾರು
60,000 ಕೋಟಿ ರುಪಾಯಿಗೂ ಅಧಿಕ ಸಾಲದ ಹೊರೆ ಹೊತ್ತುಕೊಂಡಿರುವ ಏರ್ ಇಂಡಿಯಾ ಪುನಶ್ಚೇತನಕ್ಕಾಗಿ ಸರ್ಕಾರ ಇನ್ನಿಲ್ಲದ್ದಂತೆ ಯತ್ನಿಸಿ ಸೋತಿದೆ. ತನ್ನ ಪಾಲಿನ ಶೇಕಡಾ 76ರಷ್ಟು ಷೇರು ಮಾರಾಟಕ್ಕಿಟ್ಟರೂ ಖರೀದಿದಾರರು ಇಲ್ಲದ್ದಂತಾಗಿದೆ. ಏರ್ ಇಂಡಿಯಾ ಬದಲಿಗೆ ಜೆಟ್ ಏರ್ ಲೈನ್ಸ್ ಖರೀದಿಯತ್ತ ಟಾಟಾ ಸಮೂಹ ಸಂಸ್ಥೆ ಹೆಚ್ಚಿನ ಆಸಕ್ತಿ ವಹಿಸಿತ್ತು. ಆದರೆ ಈಗ ಟಾಟಾ ಸನ್ಸ್ ಚೇರ್ಮನ್ ಎನ್ ಚಂದ್ರಶೇಖರನ್ ಅವರು ಏರ್ ಇಂಡಿಯಾ ಖರೀದಿ ಪ್ರಕ್ರಿಯೆ ಬಗ್ಗೆ ಸುಳಿವು ನೀಡಿದ್ದರು. id='are-slot-2' class='oiad oi-axt oiadv'>
ಖರೀದಿ ಮೊತ್ತ ಎಷ್ಟು?
ಈಗ ಏರ್ ಇಂಡಿಯಾ ಎಕ್ಸ್ ಪ್ರೆಸ್ ಲಿಮೆಟೆಡ್ 50% ಹಾಗೂ ಏರ್ ಇಂಡಿಯಾ SATS ಏರ್ ಪೋರ್ಟ್ ಸರ್ವೀಸ್ ಪ್ರೈ ಲಿ ಮತ್ತು ಏರ್ ಏಷ್ಯಾ ಇಂಡಿಯಾ ವಿಲೀನ ಎಲ್ಲವನ್ನು ಟಾಟಾ ತೆಕ್ಕೆಗೆ ನೀಡಬೇಕಾಗುತ್ತದೆ. 60 ಸಾವಿರ ಸಾಲ ಹೊರೆ ಇರುವ ವಿಮಾನಯಾನ ಸಂಸ್ಥೆ ಖರೀದಿಸುವ ಸಂಸ್ಥೆ 23, 286.5 ಕೋಟಿ ರು ಪಾವತಿಸಿ ಹಕ್ಕು ಪಡೆದುಕೊಳ್ಳಬಹುದು. ಮಿಕ್ಕ ಮೊತ್ತವನ್ನು ಏರ್ ಇಂಡಿಯಾ ಆಸ್ತಿ ಹೋಲ್ಡಿಂಗ್ ಲಿಮಿಟೆಡ್(AIAHL)ಗೆ ವರ್ಗಾವಣೆಯಾಗಲಿದೆ. ಆದರೆ, ಖರೀದಿ ಮೊತ್ತ ಇನ್ನೂ ಬಹಿರಂಗವಾಗಿಲ್ಲ.

ಕರಾಚಿಯಿಂದ ಬಾಂಬೆಗೆ ಮೊದಲ ವಿಮಾನಯಾನ
1932ರಲ್ಲಿ ಜೆಆರ್‌ಡಿ ಟಾಟಾ ಅವರು ಟಾಟಾ ಏರ್ ಲೈನ್ಸ್ ಆರಂಭಿಸಿದರು. ಕರಾಚಿಯಿಂದ ಬಾಂಬೆಗೆ ಮೊದಲ ವಿಮಾನಯಾನಕ್ಕೆ ಟಾಟಾ ಪೈಲಟ್ ಆಗಿದ್ದರು. ವಿಮಾನ ಸಂಸ್ಥೆ ಟಾಟಾ ಅವರ ಕನಸಾಗಿತ್ತು. 1948ರಲ್ಲಿ ಏರ್ ಟ್ರಾನ್ಸ್ ಪೋರ್ಟ್ ಅಸೋಸಿಯೇಷನ್ (ಎಐಟಿಎ) ಸ್ಥಾಪಿಸಿದರು. 1978ರ ತನಕ ಏರ್ ಇಂಡಿಯಾದ ಏಳಿಗೆಗೆ ಶ್ರಮಿಸಿದ್ದರು. ಆದರೆ, ಟಾಟಾ ಕಟ್ಟಿ ಬೆಳೆಸಿದ ಸಂಸ್ಥೆ ರಾಜಕೀಯ ತಂತ್ರಕ್ಕೆ ಕೈ ತಪ್ಪಿತು. ದೇಶಕ್ಕಾಗಿ ಟಾಟಾ ಅವರು ತ್ಯಾಗಕ್ಕೆ ಸಿದ್ಧವಾಗಬೇಕಾಯಿತು.

ಸರ್ಕಾರಿ ಸ್ವಾಮ್ಯದ ಸಂಸ್ಥೆಯನ್ನು ಘೋಷಿಸಲು ಮುಂದಾದರು
1953ರಲ್ಲಿ ಅಂದಿನ ಪ್ರಧಾನಿ ಜವಾಹರ ಲಾಲ್ ನೆಹರೂ ಅವರು ಏರ್ ಇಂಡಿಯಾವನ್ನು ಸರ್ಕಾರಿ ಸ್ವಾಮ್ಯದ ಸಂಸ್ಥೆಯನ್ನು ಘೋಷಿಸಲು ಮುಂದಾದಾಗ ಟಾಟಾಗೆ ನಿಜಕ್ಕೂ ಆಘಾತವಾಗಿತ್ತು. ತಪ್ಪನ್ನು ಸರಿಪಡಿಸುವ ನಿಟ್ಟಿನಲ್ಲಿ ಟಾಟಾ ಅವರನ್ನು ಸಂಸ್ಥೆಯ ಚೇರ್ಮನ್ ಆಗಿ ಮುಂದುವರೆಯುವಂತೆ ನೆಹರೂ ಒಪ್ಪಿಸಿದರು. 1977ರಲ್ಲಿ ಅಂದಿನ ಪ್ರಧಾನಿ ಮೊರಾರ್ಜಿ ದೇಸಾಯಿ ಅವರು ಟಾಟಾ ಅವರನ್ನು ಸಂಸ್ಥೆ ಚೇರ್ಮನ್ ಸ್ಥಾನದಿಂದ ಕೆಳಗಿಸಿದರು. 1946ರಲ್ಲಿ ಟಾಟಾ ಏರ್ ಲೈನ್ಸ್ ಸಾರ್ವಜನಿಕ ಸಂಸ್ಥೆಯಾಗಿ ನಂತರ ಸರ್ಕಾರಿ ಸ್ವಾಮ್ಯದ ಏರ್ ಇಂಡಿಯಾ ಆಗಿದ್ದು ಈಗ ಇತಿಹಾಸ.

ಏರ್ ಇಂಡಿಯಾ ಸಂಸ್ಥೆ ಮೇಲೆ 58,000 ಕೋಟಿ ರು ಸಾಲ
2017-18ರಲ್ಲಿ 5,799 ಕೋಟಿ ರು ನಷ್ಟ ಅನುಭವಿಸಿದೆ. ಇಂದಿಗೆ ಏರ್ ಇಂಡಿಯಾ ಸಂಸ್ಥೆ ಮೇಲೆ 58,000 ಕೋಟಿ ರು ಸಾಲವಿತ್ತು. 2019ರ ಮಾರ್ಚ್ 31ಕ್ಕೆ ಈ ಪ್ರಮಾಣ 60, 074ಕೊಟಿರು ಗೇರಿದೆ. ಮಾರುಕಟ್ಟೆ ಮೌಲ್ಯ ಲೆಕ್ಕ ಹಾಕುವಾಗ ಕಡಿಮೆ ಹಾಗೂ ದೀರ್ಘಾವಧಿ ಸಾಲದ ಮೊತ್ತ ಕೂಡಾ ಸೇರಿಸಿಕೊಳ್ಳಬೇಕಾಗುತ್ತದೆ. ಇಂಧನ ಬಾಕಿ ಮೊತ್ತ ಪಾವತಿಸದ ಕಾರಣ, ಏರ್ ಇಂಡಿಯಾ ವಿಮಾನಗಳಿಗೆ ತೈಲ ಪೂರೈಕೆಯನ್ನು ಇಂಡಿಯನ್ ಆಯಿಲ್ ಕಾರ್ಪೊರೇಷನ್ ಸಂಸ್ಥೆ ಸ್ಥಗಿತಗೊಳಿಸಿತ್ತು. 6 ವಿಮಾನ ನಿಲ್ದಾಣಗಳಲ್ಲಿ ಏರ್ ಇಂಡಿಯಾ ವಿಮಾನ ಹಾರಾಟ ಕಂಡಿರಲಿಲ್ಲ. ಬೇರೆ ದೇಶಿ ವಿಮಾನಯಾನ ಸಂಸ್ಥೆಗೆ ಹೋಲಿಸಿದರೆ, ವಿಮಾನ ರದ್ದು (2.6%), ಸರಿಯಾದ ಸಮಯಕ್ಕೆ ಕಾರ್ಯಕ್ಷಮತೆ (53.5%), ಏರ್ ಲೈನ್ ಲೋಡ್ ಫ್ಯಾಕ್ಟರ್ 80.9% ನಷ್ಟು ಹಿಂದೆ ಉಳಿದಿದೆ.












Click it and Unblock the Notifications