ಆದಾಯ ತೆರಿಗೆ ವಿನಾಯಿತಿ ಮಿತಿ 3 ಲಕ್ಷ ರೂಗಳಿಗೆ ಏರಿಕೆ?

ನವದೆಹಲಿ, ಜನವರಿ 10: 2018-19ನೇ ಸಾಲಿನ ಕೇಂದ್ರ ಬಜೆಟ್ ನಲ್ಲಿ ತೆರಿಗೆ ವಿನಾಯಿತಿ ಮಿತಿಯನ್ನು ವಿಸ್ತರಿಸುವ ಬಗ್ಗೆ ಮೋದಿ ಸರ್ಕಾರ ಚಿಂತನೆ ನಡೆಸಿದೆ. ಈ ಮೂಲಕ ಮಧ್ಯಮ ವರ್ಗದ ಜನತೆಗೆ ಶುಭ ಸುದ್ದಿ ನೀಡಲಿದ್ದಾರೆ ಎಂಬ ಸುದ್ದಿ ಬಂದಿದೆ.

ಕೇಂದ್ರ ವಿತ್ತ ಸಚಿವ ಅರುಣ್ ಜೇಟ್ಲಿ ಅವರು ಫೆಬ್ರವರಿ 1 ರಂದು ಈ ಸಾಲಿನ ಬಜೆಟ್ ಮಂಡಿಸಲಿದ್ದಾರೆ. ಈಗಿರುವ 2.5 ಲಕ್ಷ ರು ವಾರ್ಷಿಕ ತೆರಿಗೆ ವಿನಾಯಿತಿ ಮಿತಿಯನ್ನು 3 ಲಕ್ಷ ರು ಗಳಿಗೆ ಏರಿಸುವ ಸಾಧ್ಯತೆಯಿದೆ.

5 ಲಕ್ಷ ರೂ.ತನಕ ತೆರಿಗೆ ವಿನಾಯಿತಿ ಮಿತಿ ನೀಡಬೇಕು ಎಂಬ ಬೇಡಿಕೆ ಇದೆ. ಆದರೆ, ಈ ಬಗ್ಗೆ ಸರ್ಕಾರ ನಿರ್ಧಾರ ಕೈಗೊಂಡಿಲ್ಲ.

Tax exemption limit may be raised from Rs 2.5 lakh to Rs 3 lakh: Report

ಮಧ್ಯಮ ವರ್ಗದ ಜನರಿಗೆ ತೆರಿಗೆ ವಿನಾಯಿತಿ ಮಿತಿಯನ್ನು ಹೆಚ್ಚಳ ಮಾಡುವ ಮೂಲಕ ಚುನಾವಣೆ ವರ್ಷದಲ್ಲಿ ಮತದಾರರನ್ನು ಹಿಡಿದಿಟ್ಟುಕೊಳ್ಳುವುದು ಎನ್ ಡಿಎ ಸರ್ಕಾರದ ಗುರಿ ಎನ್ನಲಾಗಿದೆ.

ಸಂಕ್ರಾಂತಿ ವಿಶೇಷ ಪುಟ

ಕಳೆದ ಬಜೆಟ್ ನಲ್ಲಿ 2.5 ರಿಂದ 5 ಲಕ್ಷ ತನಕದ ಆದಾಯವುಳ್ಳವರಿಗೆ ಶೇ 10ರಷ್ಟಿದ್ದ ತೆರಿಗೆ ಹೊರೆಯನ್ನು ಶೇ5ಕ್ಕೆ ಇಳಿಸಲಾಗಿತ್ತು.

ಈ ಬಾರಿ 5 ಲಕ್ಷ ರು ನಿಂದ 10 ಲಕ್ಷ ರು ತನಕದ ಆದಾಯ ಉಳ್ಳವರಿಗೆ ಶೇ 10ರಷ್ಟು ತೆರಿಗೆ ವಿಧಿಸುವ ಸಾಧ್ಯತೆಯಿದೆ. ಇದೇ ರೀತಿ 10 ಲಕ್ಷ ರುನಿಂದ 20 ಲಕ್ಷ ರು ತನಕದ ಆದಾಯ ಉಳ್ಳವರಿಗೆ ಶೇ 20 ರಷ್ಟು ಹಾಗೂ ವಾರ್ಷಿಕ 20ಲಕ್ಷಕ್ಕೂ ಅಧಿಕ ಆದಾಯವುಳ್ಳವರಿಗೆ ಶೇ 30ರಷ್ಟು ತೆರಿಗೆ ವಿಧಿಸುವ ಸಾಧ್ಯತೆಯಿದೆ.

ಆದಾಯ ತೆರಿಗೆ ಮಿತಿ ಹೆಚ್ಚಳ ಸೇರಿದಂತೆ ತೆರಿಗೆ ಭಾರ ಇಳಿಸುವ ನಿರೀಕ್ಷೆ ಇತ್ತು. ಆದರೆ, ಮನೆ ಬಾಡಿಗೆ ಭತ್ಯೆ ಮಿತಿ ಏರಿಕೆ ಮಾತ್ರ ಹೆಚ್ಚಳ ಮಾಡಲಾಗಿದೆ. ಸಣ್ಣ ತೆರಿಗೆದಾರರಿಗೆ ಅನುಕೂಲವಾಗಲು ಆದಾಯ ತೆರಿಗೆ ಇಲಾಖೆಯಿಂದ ಇ -ಸಹಯೋಗ ಜಾರಿಗೊಳಿಸಲಿದೆ. ಈ ಬಾರಿ ಬಜೆಟ್ ನಲ್ಲಿ ತೆರಿಗೆ ಪಾವತಿ ಮಿತಿ ಬದಲಾಯಿಸಿಲ್ಲ. ತೆರಿಗೆ ಪಾವತಿಯಲ್ಲಿ ಮಾತ್ರ ಬದಲಾವಣೆಯಾಗಿತ್ತು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+