• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ಟೊಯೊಟಾ ಇನೋವಾ ಕ್ರಿಸ್ಟಾ 2020 ಬಿಡುಗಡೆ: ವಿನೂತನ ಫೀಚರ್ಸ್

|

ನವದೆಹಲಿ, ನವೆಂಬರ್ 24: ಟೊಯೋಟಾ ಕಿರ್ಲೋಸ್ಕರ್ ಮೋಟಾರ್ಸ್ (ಟಿಕೆಎಂ) ನವೆಂಬರ್ 24 ರಂದು ತನ್ನ ಹೊಸ ಇನ್ನೋವಾ ಕ್ರಿಸ್ಟಾವನ್ನು ಬಿಡುಗಡೆ ಮಾಡಿದೆ. ಜನಪ್ರಿಯ ಕಾರು ಆದ ಇನೋವಾ ಹೊಸ ಫೀಚರ್‌ಗಳೊಂದಿಗೆ ಮಾರುಕಟ್ಟೆ ಪ್ರವೇಶಿಸಲಿದ್ದು, ದುಬಾರಿ ಬೆಲೆಯಲ್ಲಿ ಬಿಡುಗಡೆಗೊಂಡಿದೆ.

2006ರಲ್ಲಿ ಮೊದಲ ಬಾರಿಗೆ ಬಿಡುಗಡೆಗೊಂಡಿದ್ದ ಇನೋವಾ ಕಾರು 2016ರಲ್ಲಿ ಹೊಸ ಫೀಚರ್ಸ್‌ಗಳೊಂದಿಗೆ ಟೊಯೊಟೊ ಇನ್ನೊವಾ ಕ್ರಿಸ್ಟಾ ಬಿಡುಗಡೆಗೊಂಡಿತ್ತು. ಇದೀಗ 2021ರ ಮಾದರಿಯಲ್ಲಿ ಮತ್ತಷ್ಟು ಫೀಚರ್ಸ್‌ಗಳೊಂದಿಗೆ ಮಾರುಕಟ್ಟೆ ಪ್ರವೇಶಿಸಿದೆ.

ಟೊಯೋಟಾ ಇನ್ನೋವಾ ಕ್ರಿಸ್ಟಾವನ್ನು 16.26 ಲಕ್ಷ ರೂ.ಗಳ ಆರಂಭಿಕ ಬೆಲೆಯೊಂದಿಗೆ 24.33 ಲಕ್ಷ ರೂ.ಗಳವರೆಗೆ (ಎಕ್ಸ್ ಶೋ ರೂಂ ಬೆಲೆಗಳು) ಪ್ರಾರಂಭಿಸುವುದಾಗಿ ಘೋಷಿಸಿದೆ. ಹೊಸ ಇನೋವಾ ಕ್ರಿಸ್ಟಾ ಫೇಸ್‌ಲಿಫ್ಟ್ ಮಾದರಿಯು ಜಿಎಕ್ಸ್, ವಿಎಕ್ಸ್ ಮತ್ತು ಜೆಡ್ಎಕ್ಸ್ ಎಂಬ ಮೂರು ಮಾದರಿಗಳಲ್ಲಿ ಖರೀದಿಗೆ ಲಭ್ಯವಿದ್ದು, ಹೊಸ ಫೀಚರ್ಸ್ ಅಳವಡಿಕೆ ನಂತರ ಕಾರಿನ ಬೆಲೆಯು ಮಾದರಿಗಳಿಗೆ ಅನುಗುಣವಾಗಿ 60 ಸಾವಿರದಿಂದ 70 ಸಾವಿರ ರೂಪಾಯಿಯಷ್ಟು ಹೆಚ್ಚುವರಿ ಬೆಲೆ ನೀಡಬೇಕಾಗುತ್ತದೆ.

ಹೊಸ ಕಾರಿನಲ್ಲಿ ಪ್ರಮುಖ ಬದಲಾವಣೆಗಾಗಿ ಕ್ರೊಮ್ ಸೌಲಭ್ಯ ಹೊಂದಿರುವ ಪಿಯಾನೊ ಬ್ಲ್ಯಾಕ್ ಬಣ್ಣದ ಟ್ರಾಪೆಜೊಡಿಯಲ್ ಫ್ರಂಟ್ ಗ್ರಿಲ್ ಮತ್ತು ಹೊಸ ವಿನ್ಯಾಸ ಫ್ರಂಟ್ ಬಂಪರ್ ಪ್ರಮುಖ ಆಕರ್ಷಣೆಯಾಗಿದೆ. ಇದರ ಜೊತೆಗ ಎಲ್ಇಡಿ ಹೆಡ್‌ಲ್ಯಾಂಪ್ ಸೆಟಪ್, ಡೈಮಂಡ್ ಕಟ್ ಅಲಾಯ್ ವೀಲ್ಹ್ ಮತ್ತು ಹೊಸ ಬಣ್ಣದ ಆಯ್ಕೆಯನ್ನು ಸ್ಪಾರ್ಕ್ಲಿಂಗ್ ಬ್ಲ್ಯಾಕ್ ಕ್ರಿಸ್ಟಲ್ ಶೈನ್ ಎಂದು ಹೆಸರಿಸಿದೆ.

ಬಿಎಸ್‌-6 ಎಮಿಷನ್ ಜಾರಿ ನಂತರ ಪರಿಚಯಿಸಲಾಗಿರುವ ಈ ಫೇಸ್‌ಲಿಫ್ಟ್ ಕಾರಿನ ಮುಂಭಾಗದ ವಿನ್ಯಾಸ ಮತ್ತು ಒಳಭಾಗದಲ್ಲಿ ಕೆಲವು ಪ್ರೀಮಿಯಂ ಫೀಚರ್ಸ್ ಹೊರತುಪಡಿಸಿ ಕಾರಿನ ಹಿಂಭಾಗದ ವಿನ್ಯಾಸವನ್ನು ಈ ಹಿಂದಿನಂತೆಯೇ ಮುಂದುವರಿಸಲಾಗಿದ್ದು, ಎಂಜಿನ್ ಆಯ್ಕೆಯು ಕೂಡಾ ಯಾವುದೇ ಬದಲಾವಣೆ ಪಡೆದುಕೊಂಡಿಲ್ಲ.

English summary
Toyota Kirloskar Motors (TKM) on November 24 rolled out its all new Innova Crysta. Available in GX, VX & ZX grades. New features here
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X