ಟ್ರಾಯ್: 4ಜಿ ಡೌನ್ಲೋಡ್ ಸ್ಪೀಡ್ನಲ್ಲಿ ರಿಲಯನ್ಸ್ ಜಿಯೋ ಎಲ್ಲರಿಗಿಂತ ಮುಂದೆ
ನವದೆಹಲಿ, ಮೇ 13: ರಿಲಯನ್ಸ್ ಜಿಯೋ, ಪ್ರತಿ ಸೆಕೆಂಡ್ಗೆ 20.1 ಮೆಗಾಬೈಟ್ ಡೇಟಾ ಡೌನ್ಲೋಡ್ ಪ್ರಮಾಣದಲ್ಲಿ 4ಜಿ ಸ್ಪೀಡ್ ಪಟ್ಟಿಯಲ್ಲಿ ಮೊದಲ ಸ್ಥಾನ ಪಡೆದಿದೆ. ಏಪ್ರಿಲ್ ತಿಂಗಳ ಅಪ್ಲೋಡ್ ವೇಗದ ವಿಭಾಗದಲ್ಲಿ ವೊಡಾಫೋನ್ 6.7 Mbpsನೊಂದಿಗೆ ಇತರೆ ಕಂಪೆನಿಗಳಿಗಿಂತ ಮುಂಚೂಣಿಯಲ್ಲಿದೆ ಎಂದು ದೂರಸಂಪರ್ಕ ನಿಯಂತ್ರಕ ಸಂಸ್ಥೆ ಟ್ರಾಯ್ನ ಇತ್ತೀಚಿನ ಮಾಹಿತಿ ತಿಳಿಸಿದೆ.
ತನ್ನ ಅತ್ಯಂತ ನಿಕಟ ಸ್ಪರ್ಧಿ ವೊಡಾಫೋನ್ಗಿಂತಲೂ ಮೂರು ಪಟ್ಟು ಅಧಿಕ ಡೌಲ್ಲೋಡ್ ವೇಗವನ್ನು ರಿಲಯನ್ಸ್ ಜಿಯೋ ಹೊಂದಿದೆ.
ವೊಡಾಫೋನ್ ಮತ್ತು ಐಡಿಯಾ ಸೆಲ್ಯುಲರ್ಗಳು ತಮ್ಮ ಮೊಬೈಲ್ ಉದ್ಯಮಗಳನ್ನು ವೊಡಾಫೋನ್ ಐಡಿಯಾ ಲಿಮಿಟೆಡ್ ಎಂಬ ಹೆಸರಿನಲ್ಲಿ ವಿಲೀನಗೊಳಿಸಿದ್ದರೂ, ಭಾರತೀಯ ದೂರಸಂಪರ್ಕ ನಿಯಂತ್ರಣ ಪ್ರಾಧಿಕಾರಿ (ಟ್ರಾಯ್) ಈಗಲೂ ಎರಡೂ ಸಂಸ್ಥೆಗಳ ಪ್ರತ್ಯೇಕ ನೆಟ್ವರ್ಕ್ ವೇಗದ ದತ್ತಾಂಶಗಳನ್ನು ಬಿಡುಗಡೆ ಮಾಡುತ್ತಿದೆ.
ಏಪ್ರಿಲ್ನಲ್ಲಿ ವೊಡಾಫೋನ್ 7Mbps ಡೌನ್ಲೋಡ್ ವೇಗವನ್ನು ದಾಖಲಿಸಿದೆ ಎಂದು ಟ್ರಾಯ್ ಮೇ 11ರಂದು ನೀಡಿರುವ ಮಾಹಿತಿ ತಿಳಿಸಿದೆ. ಇದರ ಬಳಿಕ ಐಡಿಯಾ 5.8 Mbps ಮತ್ತು ಏರ್ಟೆಲ್ 5Mbps ಡೌನ್ಲೋಡ್ ವೇಗದೊಂದಿಗೆ ನಂತರದ ಸ್ಥಾನಗಳಲ್ಲಿವೆ.

ಅಪ್ಲೋಡ್ ವಿಭಾಗದಲ್ಲಿ 6.7 Mbpsನೊಂದಿಗೆ ವೊಡಾಫೋನ್ ಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿದೆ. ನಂತರದ ಸ್ಥಾನದಲ್ಲಿ 6.1 Mbps ಇರುವ ಐಡಿಯಾ ಇದೆ. ಜಿಯೋ 4.2 Mbps ಮತ್ತು ಏರ್ಟೆಲ್ 3.9 Mbps ಹೊಂದಿವೆ.
ಡೌನ್ಲೋಡ್ ವೇಗವು ಗ್ರಾಹಕರು ಅಂತರ್ಜಾಲದಿಂದ ಮಾಹಿತಿಗಳನ್ನು ಪಡೆದುಕೊಳ್ಳಲು ನೆರವಾಗುತ್ತದೆ. ಅಪ್ಲೋಡ್ ವೇಗವು ತಮ್ಮ ಸಂಪರ್ಕದಲ್ಲಿರುವವರಿಗೆ ಚಿತ್ರಗಳು ಮತ್ತು ವಿಡಿಯೋಗಳನ್ನು ತ್ವರಿತವಾಗಿ ರವಾನಿಸಲು ನೆರವಾಗುತ್ತದೆ.
Recommended Video
ಮೈಸ್ಪೀಡ್ ಆಪ್ನ ಸಹಾಯದೊಂದಿಗೆ ದೇಶಾದ್ಯಂತ ರಿಯಲ್ ಟೈಮ್ ಆಧಾರದಲ್ಲಿ ದತ್ತಾಂಶಗಳನ್ನು ಸಂಗ್ರಹಿಸುವ ಟ್ರಾಯ್, ಅದರ ಮೂಲಕ ಸರಾಸರಿ ವೇಗವನ್ನು ಲೆಕ್ಕ ಹಾಕುತ್ತದೆ.
-
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
Pratham: ನಟ ಪ್ರಥಮ್ ಬೆಂಗಳೂರು ತೊರೆಯಲು ದರ್ಶನ್ ಅಭಿಮಾನಿಗಳ ಗಲಾಟೆ ಕಾರಣವೇ? ಅಸಲಿ ಕಾರಣ ಬಿಚ್ಚಿಟ್ಟ ಒಳ್ಳೆ ಹುಡುಗ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು -
ದಾವಣಗೆರೆಯಲ್ಲಿ ಹೈಡ್ರಾಮಾ: ಪ್ರದೀಪ್ ಈಶ್ವರ್ ಪ್ರಚಾರದ ವೇಳೆ ಚಪ್ಪಲಿ, ಪೊರಕೆ ತೋರಿಸಿದ ಬಿಜೆಪಿ ಕಾರ್ಯಕರ್ತರು -
ಬೆಂಗಳೂರಿನ ಫುಟ್ಪಾತ್ಗಳ ದುರಸ್ತಿಗೆ ಶ್ರಮಿಸಿದ್ದ ಕೆನಡಾ ಪ್ರಜೆ ಈಗ ಮಿಜೋರಾಂಗೆ ಶಿಫ್ಟ್: 'ಬೆಂಗಳೂರಿಗೆ ವಿದಾಯ' ಎಂದ Vlogger -
Vijay Mallya: ವಿಜಯ್ ಮಲ್ಯ ಆರ್ಸಿಬಿಗೆ ಇಂಗ್ಲೀಷ್ ಪದಗಳಲ್ಲಿ ಕನ್ನಡದ ವಿಶೇಷ ಸಂದೇಶ: ಭಾರೀ ವೈರಲ್ -
ಸಕಲೇಶಪುರ: ಬೆಟ್ಟದ ಭೈರವೇಶ್ವರ ದೇವಸ್ಥಾನದಲ್ಲಿ ಪ್ರೀ-ವೆಡ್ಡಿಂಗ್ ಶೂಟ್ ವೇಳೆ ಸ್ಥಳೀಯರಿಂದ ಹಲ್ಲೆ -
ಐಪಿಎಲ್ 2026: ಆರ್ಸಿಬಿ-ಎಸ್ಆರ್ಎಚ್ ಪಂದ್ಯದ ಸಮಯ, ನೇರಪ್ರಸಾರ, ಸಂಪೂರ್ಣ ತಂಡಗಳ ವಿವರ ತಿಳಿಯಿರಿ -
March 28 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
Viral ಆಯ್ತು ಅಕೌಂಟ್ಸ್ ಪ್ರಶ್ನೆಪತ್ರಿಕೆ: ಪರೀಕ್ಷೆಯಲ್ಲೂ ಮಿಂಚಿದ 'ಧುರಂಧರ್: ದಿ ರಿವೆಂಜ್' ಸಿನಿಮಾದ ಪಾತ್ರಗಳು -
ಹಿಂದಿ ರಾಜ್ಯಗಳಲ್ಲಿ ಕನ್ನಡವನ್ನ ಕಡ್ಡಾಯ ಮಾಡಿ: ವಿಜಯೇಂದ್ರಗೆ ನೇರ ಸವಾಲು ಹಾಕಿದ ಕರವೇ ನಾರಾಯಣಗೌಡ












Click it and Unblock the Notifications