ನಿಮಗೆ ಬೇಕಾದ ಟಿವಿ ಚಾನೆಲ್ ನೀವೆ ಆಯ್ಕೆ ಮಾಡಿಕೊಳ್ಳಿ: ಟ್ರಾಯ್
ನವದೆಹಲಿ, ಜೂನ್ 26: ಭಾರತೀಯ ದೂರಸಂಪರ್ಕ ಪ್ರಾಧಿಕಾರ(ಟ್ರಾಯ್) ಹೊರ ತಂದಿರುವ ಹೊಚ್ಚ ಹೊಸ ನೀತಿ, ನಿಯಮ ಹಾಗೂ ಮೊಬೈಲ್ ಅಪ್ಲಿಕೇಷನ್ ಸಂಪೂರ್ಣ ಗ್ರಾಹಕ ಸ್ನೇಹಿಯಾಗಲಿದೆ. ಕೇಬಲ್ ಆಪರೇಟರ್ಸ್ ನೆರವಿಲ್ಲದೆ, ವೀಕ್ಷಕರು ತಮ್ಮ ಮನೆಯಲ್ಲಿನ ಟಿವಿ ಚಾನೆಲ್ ಗಳ ಪೈಕಿ ತಮಗಿಷ್ಟವಾದ ವಾಹಿನಿಗಳನ್ನು ಸುಲಭವಾಗಿ ಆಯ್ಕೆ ಮಾಡಿಕೊಳ್ಳುವ ಸೌಲಭ್ಯ ಇದೀಗ ಲಭ್ಯವಾಗಿದೆ.
Recommended Video
ಟ್ರಾಯ್ ಹೊರ ತಂದಿರುವ Channel Selector App ಈಗ ಗೂಗಲ್ ಪ್ಲೇ ಸ್ಟೋರಿನಲ್ಲಿ ಲಭ್ಯವಿದೆ. ಆದರೆ, ಈ ಆಪ್ ಬಳಸಿ ಚಾನೆಲ್ ಆಯ್ಕೆ ಮಾಡಿಕೊಳ್ಳಲು ಸೇವಾ ಸಂಸ್ಥೆಯೊಂದಿಗೆ ನಿಮ್ಮ ಮೊಬೈಲ್ ಸಂಖ್ಯೆ ನೋಂದಾಯಿಸಿಕೊಂಡಿರಬೇಕು.

ನಿಮ್ಮ ಕೇಬಲ್ ಆಪರೇಟರ್ ಬಳಿ ನಿಮ್ಮ ನೋಂದಾಯಿತ ಸಂಖ್ಯೆ ಇದ್ದರೆ, ಗೂಗಲ್ ಪ್ಲೇಸ್ಟೋರಿನಿಂದ ಈ ಆಪ್ ಡೌನ್ಲೋಡ್ ಮಾಡಿಕೊಳ್ಳಿ, ನೋಂದಣಿ ಸಂಖ್ಯೆ ಹಾಗೂ ಒಟಿಪಿ ಹಾಕಿದರೆ, ಚಾನೆಲ್ ಆಯ್ಕೆಯ ಅವಕಾಶ ಲಭ್ಯವಾಗಲಿದೆ.
Press Release No. 40 Regarding Launched a Channel Selector App which will facilitate subscribers to view their TV subscription and modify the same.https://t.co/VJ4hhtF5Sb
— TRAI (@TRAI) June 25, 2020
ಇದಲ್ಲದೆ, ಕೇಬಲ್ ಮತ್ತು ಬ್ರಾಡ್ ಕಾಸ್ಟಿಂಗ್ ಸೇವೆಗಳಿಗೆ ಸಂಬಂಧಿಸಿದಂತೆ ಟ್ರಾಯ್ ತಿದ್ದುಪಡಿ ತಂದಿದೆ. ಇದರ ಅನ್ವಯ ಕೇಬಲ್ ಆಪರೇಟರ್‌ಗಳು ಬದಲಾವಣೆ ಮಾಡಿ ವೆಬ್‌ಸೈಟ್‌ನಲ್ಲಿ ಪ್ರಕಟಿಸಬೇಕು ಎಂದು ಟ್ರಾಯ್ ಅಧ್ಯಕ್ಷ ಆರ್ ಎಸ್ ಶರ್ಮ ತಿಳಿಸಿದ್ದಾರೆ.

ಬೆಲೆ ಏರಿಕೆ ದೂರುಗಳಿದ್ದರೆ ಯಾರನ್ನು ಸಂಪರ್ಕಿಸಬೇಕು
ಬೆಲೆ ಏರಿಕೆ ಬಗ್ಗೆ ಗ್ರಾಹಕರಿಂದ ಕೇಬಲ್ ಒಕ್ಕೂಟದಿಂದ ದೂರುಗಳು ಕೇಳಿ ಬಂದಿದ್ದರಿಂದ ಟ್ರಾಯ್ ಹಾಗೂ ಅಖಿಲ ಭಾರತ ಡಿಜಿಟಲ್ ಕೇಬಲ್ ಒಕ್ಕೂಟವು (AIDCF) ಮಾಸಿಕ ಕೇಬಲ್ ಟಿವಿ ಶುಲ್ಕದಲ್ಲಿ ಬದಲಾವಣೆ ತರಲು ಮುಂದಾಗಿದೆ. ತನ್ನ ಗ್ರಾಹಕರಿಗೆ 150 ಚಾನೆಲ್‌ಗಳ ಸೇವೆಯನ್ನು 130 ರೂ.ಗಳ ಕನಿಷ್ಠ ಮಟ್ಟದ ಶುಲ್ಕದ ದರದಲ್ಲಿ ನೀಡಲು AIDCF ನಿರ್ಧರಿಸಿದೆ. ದರ ಪಟ್ಟಿ ಬಗ್ಗೆ ಯಾವುದಾದರೂ ಗೊಂದಲಗಳಿದ್ದರೆ 011-23237922 (ಎ.ಕೆ. ಭಾರಧ್ವಾಜ್) ಮತ್ತು 011-23220209 (ಅರವಿಂದ್ ಕುಮಾರ್) ಇಲ್ಲವೇ ಇ- ಮೇಲ್ [email protected] ಅಥವಾ [email protected]. ಗೆ ಸಂಪರ್ಕಿಸಬಹುದು

ನಿಮಗೆ ಬೇಕಾದ ಪ್ಯಾಕೇಜ್ ಪಡೆಯುವ ಸೌಲಭ್ಯ
ಟ್ರಾಯ್ ನಿಯಮ, ಚಾನೆಲ್ ಆಯ್ಕೆ ಹಾಗೂ ಕೇಬಲ್ ಆಪರೇಟರ್, ಡಿಟಿಎಚ್ ಕಂಪನಿಗಳ ಅಫರ್ ಬಗ್ಗೆ ಚಾನೆಲ್ ನಂಬರ್ 999(ಕೇಬಲ್ ಟಿವಿ ಅಪರೇಟರ್ ಸಂಪರ್ಕಿಸಿ ಕೇಳಿರಿ)ರಲ್ಲಿ ಸಂಪೂರ್ಣ ಮಾಹಿತಿ ನೀಡಲಾಗುತ್ತಿದೆ. ಗ್ರಾಹಕರಿಗೆ ಎಸ್ಎಂಎಸ್ ಮೂಲಕ, ಪ್ರಾತ್ಯಕ್ಷಿಕೆ ವಿಡಿಯೋ, ಪಾಂಪ್ಲೆಟ್ ಮೂಲಕ ಕೂಡಾ ಮಾಹಿತಿ ನೀಡಲಾಗುತ್ತಿದೆ. ಈಗ ಹೊಸ ನಿಯಮದ ಪ್ರಕಾರ ಒಂದು ಚಾನೆಲ್ ಅಥವಾ ಚಾನೆಲ್ ಗಳ ಸಮೂಹಗಳಿರುವ ಪ್ಯಾಕೆಜ್ ಹಾಕಿಸಿಕೊಳ್ಳಬಹುದು.

ನೂರಾರು ಚಾನೆಲ್ ಉಚಿತವಿದೆ
ನೂರಾರು ಚಾನೆಲ್ ಉಚಿತವಿದೆ: ದೂರದರ್ಶನದ ಉಚಿತ 26 ಚಾನೆಲ್ ಸೇರಿದಂತೆ 100 ಚಾನೆಲ್(74 Free to Air) ಗಳನ್ನು ವೀಕ್ಷಿಸಬಹುದು. ಇದಕ್ಕಾಗಿ 130 ರೂ. ಶುಲ್ಕ ನಿಗದಿಪಡಿಸಲಾಗಿದ್ದು, ಇದರೊಂದಿಗೆ ಶೇ. 18 ರಷ್ಟು ಜಿ.ಎಸ್.ಟಿ. ಪಾವತಿಸಿ 154 ರೂ.ಗೆ 100 ಚಾನಲ್ ಗಳನ್ನು ಗ್ರಾಹಕರು ವೀಕ್ಷಿಸಬಹುದಾಗಿದೆ. ಈಗ ಈ ಸಂಖ್ಯೆಯನ್ನು 150ಕ್ಕೇರಿಸಲಾಗಿದೆ. ಇದಕ್ಕಾಗಿ ಹೆಚ್ಚುವರಿ ಶುಲ್ಕವನ್ನು ವಿಧಿಸಬೇಕಾಗಿಲ್ಲ, ಈ ಚಾನೆಲ್ ಬರದಿದ್ದರೆ ದೂರು ಸಲ್ಲಿಸಿ ಪಡೆಯಬಹುದು.

ಶುಲ್ಕದಲ್ಲಿ ಭಾರಿ ಬದಲಾವಣೆ ತರಲಾಗಿದೆ
HD ಚಾನೆಲ್ ಹೊರತು ಪಡಿಸಿ ಎಸ್ ಡಿ ಚಾನೆಲ್ ಗಳ 100ರ ಪ್ಯಾಕ್ ಗೆ 184ರು ಗಿಂತ ಅಧಿಕ ನೀಡಬೇಡಿ ಎಂದು ಟ್ರಾಯ್ ಸೂಚಿಸಿದೆ. ಪ್ರತಿ 25 ಉಚಿತ ಚಾನೆಲ್ ಗಳಿಗೆ ಜಿ.ಎಸ್.ಟಿ. ಸೇರಿ 25 ರೂ.ಪಾವತಿಸಬೇಕಿದೆ. ಪ್ರತಿಯೊಂದು ಚಾನೆಲ್ ಗೂ 1 ಪೈಸೆಯಿಂದ 19 ರೂ.ರವರೆಗೆ ದರ ನಿಗದಿಯಾಗಿದೆ ಎಂದು ಎಂದು ಭಾರತೀಯ ಟೆಲಿಕಾಂ ನಿಯಂತ್ರಣ ಸಂಸ್ಥೆ(ಟ್ರಾಯ್) ತಿಳಿಸಿತ್ತು.
ಆದರೆ, ಈ ಶುಲ್ಕದಲ್ಲಿ ಭಾರಿ ಬದಲಾವಣೆ ತರಲಾಗಿದೆ. ಒಬ್ಬ ಬಳಕೆದಾರನ ಹೆಸರಿನಲ್ಲಿ ಒಂದಕ್ಕಿಂತ ಹೆಚ್ಚು ಸಂಪರ್ಕವಿದ್ದರೆ ಆತನಿಗೆ 2 ಮತ್ತು ಆ ನಂತರ ಪಡೆಯುವ ಪ್ರತಿ ಮೊದಲ ಸಂಪರ್ಕಕ್ಕೆ ಶೇ 40ರಷ್ಟನ್ನು ಮಾತ್ರ ಎನ್‌ಸಿಎಫ್ ಶುಲ್ಕವಾಗಿ ವಿಧಿಸಬಹುದಾಗಿದೆ. 12 ರೂ. ಮತ್ತು ಅದಕ್ಕಿಂತ ಕಡಿಮೆ ಶುಲ್ಕ ಹೊಂದಿರುವ ಚಾನೆಲ್‌ಗಳನ್ನು ಮಾತ್ರ ಆಪರೇಟರ್‌ಗಳು ಚಾನೆಲ್ ಗುಚ್ಛದಲ್ಲಿ ಸೇರಿಸಬೇಕಾಗಿದೆ.
-
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
RCB: ಆರ್ಸಿಬಿ ಪಂದ್ಯದ ನಡುವೆಯೆ ಮತ್ತೊಮ್ಮ ಅಭಿಮಾನಿಗಳ ಮನಗೆದ್ದ 'ಕ್ರಶ್' ಅನನ್ಯಾ ಬಿರ್ಲಾ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
March 29 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
ಬೆಂಗಳೂರಿನ ಫುಟ್ಪಾತ್ಗಳ ದುರಸ್ತಿಗೆ ಶ್ರಮಿಸಿದ್ದ ಕೆನಡಾ ಪ್ರಜೆ ಈಗ ಮಿಜೋರಾಂಗೆ ಶಿಫ್ಟ್: 'ಬೆಂಗಳೂರಿಗೆ ವಿದಾಯ' ಎಂದ Vlogger












Click it and Unblock the Notifications