LPG Price Reduced: ಕೇಂದ್ರ ಬಜೆಟ್‌ನಲ್ಲಿ ಎಲ್‌ಪಿಜಿ ಸಿಲಿಂಡರ್ ದರ ಕಡಿಮೆಯಾಗುವ ಸಾಧ್ಯತೆ ಹೆಚ್ಚು: ಕಾರಣ ಇಲ್ಲಿದೆ
LPG Cylinder Price Reduced: ಕೇಂದ್ರ ಬಜೆಟ್ ಮಂಡನೆಗೆ ಕ್ಷಣಗಣನೆ ಆರಂಭವಾಗಿದೆ. ಈಗಾಗಲೇ ದೇಶಾದ್ಯಂತ ಎಲ್ಲಾ ಕ್ಷೇತ್ರಗಳಲ್ಲಿ ಅವರದ್ದೇ ಆದ ಬೇಡಿಕೆಗಳನ್ನು ಇಟ್ಟಿದ್ದಾರೆ. ಈ ಪೈಕಿ ಬಹುಮುಖ್ಯವಾಗಿ ನಿರೀಕ್ಷೆಯಂತೆ ಎಲ್‌ಪಿಜಿ ಸಿಲಿಂಡರ್ ದರ ಇಳಿಕೆ ಆಗುವ ನಿರೀಕ್ಷೆಯಲ್ಲಿ ದೇಶದ ಬಹುತೇಕ ಮಂದಿ ಇದ್ದಾರೆ. ಹಾಗಾದರೆ ಎಷ್ಟು ಕಡಿಮೆಯಾಗಬಹುದು ಎನ್ನುವ ಅಂದಾಜು ಮೊತ್ತದ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ಗಮನಿಸಿ.
ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು 2025ರ ಫೆಬ್ರವರಿ 2ರಂದು ಕೇಂದ್ರ ಸರ್ಕಾರ ಪೂರ್ಣ ಪ್ರಮಾಣದ ಬಜೆಟ್ ಮಂಡನೆ ಮಾಡಲಿದ್ದಾರೆ. ಇದು ಅವರು ಮಂಡನೆ ಮಾಡಲಿರುವ 8ನೇ ಬಜೆಟ್ ಆಗಲಿದೆ. ಈ ಮೂಲಕ ಅತೀ ಹೆಚ್ಚು ಬಜೆಟ್ ಮಂಡಿಸಿದ ಪಾತ್ರ ಅವರದ್ದಾಗಲಿದೆ. ಇನ್ನೂ ಈ ಬಜೆಟ್‌ನಲ್ಲಿ ದೇಶದ ಜನರು ಹಲವು ನಿರೀಕ್ಷೆಗಳನ್ನು ಇಟ್ಟುಕೊಂಡಿದ್ದಾರೆ. ಈ ಪೈಕಿ ದಿನನಿತ್ಯ ಬಳಕೆಯಲ್ಲೊಂದಾದ ಎಲ್‌ಪಿಜಿ ಸಿಲಿಂಡರ್ ದರ ಇಳಿಕೆಯಾಗುವ ನಿರೀಕ್ಷೆಯಲ್ಲಿದ್ದಾರೆ.

ಇದೀಗ ಈ ಬಜೆಟ್‌ನಲ್ಲಿ ದೇಶದ ಬಹುತೇಕ ಮಧ್ಯಮ ವರ್ಗದವರು ಹಲವು ನಿರೀಕ್ಷೆಗಳನ್ನಿಟ್ಟುಕೊಂಡಿದ್ದಾರೆ. ಈ ಪೈಕಿ ಜನರ ಗಮನ ಎಲ್‌ಪಿಜಿ ಸಿಲಿಂಡರ್‌ನತ್ತ ನೆಟ್ಟಿದೆ. ಇಂಧನ ಮಾರುಕಟ್ಟೆ ಕಂಪನಿಗಳು ಪ್ರತಿ ತಿಂಗಳ ಮೊದಲ ದಿನ ಎಲ್‌ಪಿಜಿ ಗ್ಯಾಸ್ ಸಿಲಿಂಡರ್ ದರ ಪರಿಷ್ಕರಣೆ ಮಾಡುತ್ತಲೇ ಇರುತ್ತವೆ. ಇನ್ನು ಈ ಬಾರಿ ಬಜೆಟ್ ಫೆಬ್ರವರಿ 1ರಂದೇ ಬರುವುದರಿಂದ ಎಲ್‌ಪಿಜಿ ಗ್ಯಾಸ್ ಸಿಲಿಂಡರ್ ಬೆಲೆ ಕಡಿಮೆ ಆಗುವ ಸಾಧ್ಯತೆಯಿದೆ ಎಂದು ಹೇಳಲಾಗುತ್ತದೆ.
ಕಳೆದ ವರ್ಷ ಲೋಕಸಭಾ ಚುನಾವಣೆ ಹಿನ್ನೆಲೆ ನಿರ್ಮಲಾ ಸೀತಾರಾಮನ್ ಅವರು ಮಧ್ಯಂತರ ಬಜೆಟ್ ಮಂಡನೆ ಮಾಡಿದ್ದರು. ಮಧ್ಯಂತರ ಬಜೆಟ್ ಘೋಷಣೆಗೂ ಮುನ್ನವೇ ತೈಲ ಮಾರುಕಟ್ಟೆ ಕಂಪನಿಗಳು ಎಲ್‌ಪಿಜಿ ಗ್ಯಾಸ್ ಬೆಲೆ ಹೆಚ್ಚಿಸಿದ್ದವು. 2024ರ ಚುನಾವಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್‌ಡಿಎ ಸರ್ಕಾರ ಗೆಲುವು ಸಾಧಿಸಿತ್ತು.
ಗೆಲುವಿನ ಬಳಿಕ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಪೂರ್ಣ ಪ್ರಮಾಣದ ಬಜೆಟ್ ಮಂಡನೆ ಮಾಡಿದ್ದರು. ಆಗ ಮೆಟ್ರೋ ನಗರಗಳಾದ್ಯಂತ 19 ಕೆ.ಜಿ. ಸಿಲಿಂಡರ್ ಬೆಲೆಗಳನ್ನು 30ರಿಂದ 31 ರೂಪಾಯಿ ಕಡಿಮೆ ಮಾಡಿದ್ದರು. ಈ ಬಾರಿ ಸಹ ಇದೇ ಪ್ರವೃತ್ತಿ ಮುಂದುವರೆಯುವ ಸಾಧ್ಯತೆಯಿದೆ ಎಂದು ಹೇಳಲಾಗುತ್ತಿದೆ.
ಈ ಬಾರಿಯ ಬಜೆಟ್‌ನಲ್ಲಿ ಕೇಂದ್ರ ಸರ್ಕಾರ ಅಡುಗೆ ಅನಿಲ ಸಿಲಿಂಡರ್‌ಗೆ ನೀಡುವ ಸಬ್ಸಿಡಿಯನ್ನು ಶೇಕಡ 8ರಷ್ಟು ಹೆಚ್ಚಿಸುವ ಸಾಧ್ಯತೆಯಿದೆ. ಒಂದು ವೇಳೆ ಹೀಗಾದರೆ ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಬಜೆಟ್‌ನಲ್ಲಿ ಎಲ್‌ಪಿಜಿ ಗ್ಯಾಸ್ ಸಿಲಿಂಡರ್ ದರ ಕಡಿಮೆ ಆಗಲೂಬಹುದು ಎಂದು ಹೇಳಲಾಗುತ್ತಿದೆ.












Click it and Unblock the Notifications