ಮೊಸರು ಸಕ್ಕರೆ ತಿನ್ನಿಸಿ ಕೇಂದ್ರ ಬಜೆಟ್ ಆರಂಭಕ್ಕೆ ಶುಭ ಕೋರಿದ ರಾಷ್ಟ್ರಪತಿಗಳು... Union Budget 2026
ಪ್ರಪಂಚವೇ ಕಾದು ಕುಳಿತಿರುವ ಭಾರತದ ಕೇಂದ್ರ ಬಜೆಟ್ ಮಂಡನೆ ಆರಂಭ ಆಗಿದ್ದು, ಈ ಬಾರಿ ದೊಡ್ಡ ದೊಡ್ಡ ಘೋಷಣೆಗಳು ಹೊರಬೀಳುವ ನಿರೀಕ್ಷೆ ಮನೆಮಾಡಿದೆ. ಕೇಂದ್ರದ ಮೋದಿ ಅವರ ಸರ್ಕಾರ ಮಾಸ್ಟರ್ ಪ್ಲಾನ್ ಮಾಡಿ ಈ ಬಾರಿಯ ಬಜೆಟ್ ಮಂಡನೆ ಮಾಡುತ್ತಿದ್ದು, ಮುಂಬರುವ ಹಲವು ಚುನಾವಣೆಗಳಿಗೆ ಇದು ದೊಡ್ಡ ಅಸ್ತ್ರವಾಗುವ ನಿರೀಕ್ಷೆ ಇದೆ. ಅದರಲ್ಲೂ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮತ್ತೊಮ್ಮೆ ಬಜೆಟ್ ಮಂಡನೆ ಮಾಡುತ್ತಿದ್ದು, ಇತಿಹಾಸವನ್ನೇ ನಿರ್ಮಾಣ ಮಾಡುತ್ತಿದ್ದಾರೆ. ಹೀಗಿದ್ದಾಗಲೇ, ಮೊಸರು & ಸಕ್ಕರೆ ತಿನ್ನಿಸಿದ ರಾಷ್ಟ್ರಪತಿ ಮುರ್ಮು ಅವರು ಕೇಂದ್ರ ಬಜೆಟ್ ಆರಂಭಕ್ಕೆ ಶುಭ ಕೋರಿದ್ದಾರೆ.
ಅಷ್ಟಕ್ಕೂ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು, ಪದ್ಧತಿಯಂತೆ ಬಜೆಟ್ ಮಂಡನೆಗೆ ಮೊದಲು ರಾಷ್ಟ್ರಪತಿ ಅವರನ್ನು ಭೇಟಿ ಮಾಡಿದರು. ಸಂಸತ್ತಿನಲ್ಲಿ ಕೇಂದ್ರ ಬಜೆಟ್ ಮಂಡಿಸುವ ಮುನ್ನ ಹಣಕಾಸು ಸಚಿವರು ರಾಷ್ಟ್ರಪತಿ ಅವರನ್ನ ಭೇಟಿ ಮಾಡುವುದು ವಾಡಿಕೆ ಆಗಿದ್ದು, ಈ ಹಿನ್ನೆಲೆಯಲ್ಲಿ ರಾಷ್ಟ್ರಪತಿಗಳಾದ ದ್ರೌಪದಿ ಮುರ್ಮು ಅವರನ್ನು ನಿರ್ಮಲಾ ಸೀತಾರಾಮನ್ ಅವರು ತಮ್ಮ ತಂಡದ ಜೊತೆ ಭೇಟಿ ಮಾಡಿದರು. ಇದೇ ವೇಳೆ ರಾಷ್ಟ್ರಪತಿ ಭವನದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ಗೆ ಮೊಸರು & ಸಕ್ಕರೆ ತಿನ್ನಿಸಿ ಶುಭ ಹಾರೈಸಿದ್ದಾರೆ. ಪ್ರತಿವರ್ಷ ಕೂಡ ಹೀಗೆ ಹಣಕಾಸು ಸಚಿವರಿಗೆ ರಾಷ್ಟ್ರಪತಿಗಳು ಮೊಸರು ಮತ್ತು ಸಕ್ಕರೆ ತಿನ್ನಿಸುವ ಪದ್ಧತಿ ಬೆಳೆದು ಬಂದಿದೆ.

ಚಿನ್ನ & ಬೆಳ್ಳಿ ಬೆಲೆ ಇಳಿಕೆ ಆಗುತ್ತಾ?
ಹೌದು, ಚಿನ್ನದ ಬೆಲೆ ದಿಢೀರ್ ಭಾರಿ ಪ್ರಮಾಣದಲ್ಲಿ ಕುಸಿದು ಬೀಳುತ್ತಿರುವ ಕಾರಣಕ್ಕೆ ಚರ್ಚೆಯು ಜೋರಾಗಿದೆ. ಇಂದು ಕೇಂದ್ರ ಬಜೆಟ್ ಮಂಡನೆ ಆಗುತ್ತಿದ್ದು, ಚಿನ್ನದ ಮೇಲಿನ ತೆರಿಗೆ ಇಳಿಕೆಯ ಸಾಧ್ಯತೆ ಬಗ್ಗೆ ಕೂಡ ಚರ್ಚೆ ಜೋರಾಗಿದೆ. ಆಭರಣ ಪ್ರಿಯರು ಇದೀಗ ಕೇಂದ್ರ ಬಜೆಟ್ ಮೇಲೆ ತಮ್ಮ ಗಮನ ನೆಟ್ಟಿದ್ದು, ಚಿನ್ನದ ಬೆಲೆ ಹಾಗೂ ಬೆಳ್ಳಿ ಬೆಲೆ ಇಳಿಕೆ ಆಗುತ್ತಾ? ಎಂದು ಕಾಯುತ್ತಿದ್ದಾರೆ. ಮತ್ತೊಂದು ಕಡೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಹಲವು ಯುದ್ಧಗಳು ಹಿಡಿತಕ್ಕೆ ಬಂದ ಕಾರಣ ಕೂಡ ಚಿನ್ನ ಹಾಗೂ ಬೆಳ್ಳಿ ಬೆಲೆ ಇಳಿಕೆ ಆಗಲಿದೆ ಎಂದು ಅಂದಾಜು ಮಾಡಲಾಗುತ್ತಿದೆ. ಹೀಗಾಗಿ ಆಭರಣ ಪ್ರಿಯರು ಇದೀಗ ಕೇಂದ್ರ ಬಜೆಟ್ ಮುಗಿಯುವ ತನಕ, ಉಸಿರು ಬಿಗಿಹಿಡಿದು ಕೂರುವ ಸಾಧ್ಯತೆ ದಟ್ಟವಾಗಿದೆ.
ಕೇಂದ್ರ ಬಜೆಟ್ ಲೈವ್ ಜೊತೆಗೆ ವಿಶ್ಲೇಷಣೆಯೂ ಇಲ್ಲಿದೆ
ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಭಾನುವಾರ (ಫೆ 1) ಸಂಸತ್ತಿನಲ್ಲಿ ಮಂಡಿಸಿದ ಬಜೆಟ್ ಭಾಷಣದ ಲೈವ್ ವಿಡಿಯೊ ಮತ್ತು ತಜ್ಞರ ವಿಶ್ಲೇಷಣೆಗಾಗಿ 'ಒನ್ ಇಂಡಿಯಾ ಕನ್ನಡ' ಯುಟ್ಯೂಬ್ ಚಾನೆಲ್‌ಗೆ ಭೇಟಿ ನೀಡಿ.












Click it and Unblock the Notifications