ಬ್ಯಾಂಕುಗಳ ವಿಲೀನಕ್ಕೆ ಸಂಪುಟ ಒಪ್ಪಿಗೆ: ಬರಿ ನೆನಪಾಗಿ ಉಳಿಯಲಿದೆ ವಿಜಯಾ ಬ್ಯಾಂಕ್

ನವದೆಹಲಿ, ಜನವರಿ 2: ಸರ್ಕಾರಿ ಸ್ವಾಮ್ಯದ ಬ್ಯಾಂಕುಗಳು ಮತ್ತು ವಿವಿಧ ವಲಯದ ಜನರ ತೀವ್ರ ವಿರೋಧದ ನಡುವೆಯೂ ದೇಶದ ಮೂರು ಪ್ರಮುಖ ಬ್ಯಾಂಕುಗಳಾದ ವಿಜಯಾ ಬ್ಯಾಂಕ್ ಮತ್ತು ದೇನಾ ಬ್ಯಾಂಕ್‌ಗಳನ್ನು ಬ್ಯಾಂಕ್ ಆಫ್ ಬರೋಡಾದೊಂದಿಗೆ ವಿಲೀನಗೊಳಿಸಲು ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿದೆ.

ಈ ವಿಲೀನವು ಏಪ್ರಿಲ್ 1ರಿಂದ ಜಾರಿಯಾಗಲಿದ್ದು, ಇದರ ಮೂಲಕ ಬ್ಯಾಂಕ್ ಆಫ್ ಬರೋಡಾ ದೇಶದ ಮೂರನೇ ಅತಿದೊಡ್ಡ ಸಾರ್ವಜನಿಕ ವಲಯದ ಬ್ಯಾಂಕ್ ಎನಿಸಿಕೊಳ್ಳಲಿದೆ.

ಭಾರತದ ಬ್ಯಾಂಕಿಂಗ್ ವ್ಯವಸ್ಥೆಯಲ್ಲಿ ಇದೇ ಮೊದಲ ಬಾರಿಗೆ ಮೂರು ಬ್ಯಾಂಕುಗಳನ್ನು ವಿಲೀನಗೊಳಿಸಲಾಗುತ್ತಿದೆ.

union cabinet approved the merger vijaya bank dena bank with bank of baroda

ವಿಜಯಾ ಬ್ಯಾಂಕ್ ಮತ್ತು ದೇನಾ ಬ್ಯಾಂಕ್‌ನ ಎಲ್ಲ ಉದ್ಯೋಗಿಗಳನ್ನೂ ಬ್ಯಾಂಕ್ ಆಫ್ ಬರೋಡಾಕ್ಕೆ ವರ್ಗಾವಣೆ ಮಾಡಲಾಗುತ್ತದೆ ಎಂದು ಕೇಂದ್ರ ಸಚಿವ ರವಿಶಂಕರ್ ಪ್ರಸಾದ್ ತಿಳಿಸಿದ್ದಾರೆ. ವಿಲೀನ ಪ್ರಕ್ರಿಯೆಯಲ್ಲಿ ಯಾರನ್ನೂ ಕೆಲಸದಿಂದ ತೆಗೆದುಹಾಕುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಬ್ಯಾಂಕ್ ಆಫ್ ಬರೋಡಾ ಮತ್ತು ದೇನಾ ಬ್ಯಾಂಕ್‌ಗಳ ಸಾರ್ವಜನಿಕ ಸಾಲದಾರರ ಮಂಡಳಿಗಳು ಎರಡು ಬ್ಯಾಂಕುಗಳ ವಿಲೀನದ ಪ್ರಸ್ತಾವಕ್ಕೆ ವಿನಿಮಯ ಅನುಪಾತಕ್ಕೆ ಬುಧವಾರ ಅನುಮೋದನೆ ನೀಡಿವೆ.

ತನ್ನ ಷೇರುದಾರರು ತಾವು ಹೊಂದಿರುವ ಪ್ರತಿ ಸಾವಿರ ಷೇರಿನ ಮೇಲೆ 2 ರೂ ಮೌಲ್ಯದಂತೆ ಬ್ಯಾಂಕ್ ಆಫ್ ಬರೋಡಾದ 110 ಈಕ್ವಿಟಿ ಷೇರುಗಳನ್ನು ಪಡೆದುಕೊಳ್ಳಲಿದ್ದಾರೆ ಎಂದು ದೇನಾ ಬ್ಯಾಂಕ್ ತಿಳಿಸಿದೆ.

ವಿಜಯಾ ಬ್ಯಾಂಕ್‌ನ ಷೇರುದಾರರು ತಾವು ಹೊಂದಿರುವ ಪ್ರತಿ ಸಾವಿರ ಷೇರುಗಳ ಮೇಲೆ ಬ್ಯಾಂಕ್ ಆಫ್ ಬರೋಡಾದ 402 ಈಕ್ವಿಟಿ ಷೇರುಗಳನ್ನು ಪಡೆದುಕೊಳ್ಳಲಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+