9 ಟ್ರಿಲಿಯನ್ ಡಾಲರ್ ಮೌಲ್ಯ ದಾಟಿದ ಅಮೆರಿಕಾದ ಟೆಕ್ ಷೇರುಗಳು
ಬೆಂಗಳೂರು, ಆಗಸ್ಟ್ 08: ಅಮೆರಿಕಾದ ಟೆಕ್ ಷೇರುಗಳು ಷೇರು ಮಾರುಕಟ್ಟೆಯನ್ನು ದಾಖಲೆಯ ಗರಿಷ್ಠ ಮಟ್ಟಕ್ಕೆ ತಲುಪುತ್ತಿವೆ. ಇನ್ನೊಂದು ವಿಚಾರ ಏನಪ್ಪಾ ಅಂದ್ರೆ ಈ ವಲಯವು ಇಡೀ ಯುರೋಪಿಯನ್ ಷೇರು ಮಾರುಕಟ್ಟೆಗಿಂತ ಇತಿಹಾಸದಲ್ಲಿ ಮೊದಲ ಬಾರಿಗೆ ಹೆಚ್ಚು ಮೌಲ್ಯಯುತವಾಗಿದೆ ಎಂದು ಬ್ಯಾಂಕ್ ಆಫ್ ಅಮೆರಿಕಾದ ಇತ್ತೀಚಿನ ಸಂಶೋಧನೆ ಹೇಳಿದೆ.
ಅಮೆರಿಕಾದ ಟೆಕ್ ಷೇರುಗಳ ಒಟ್ಟು ಮಾರುಕಟ್ಟೆ ಬಂಡವಾಳೀಕರಣವು 9.1 ಟ್ರಿಲಿಯನ್ ತಲುಪಿದೆ ಎಂದು ಬ್ಯಾಂಕ್ ವರದಿಯಲ್ಲಿ ತಿಳಿಸಿದೆ. ಇದು ಇಂಗ್ಲೆಂಡ್ ಮತ್ತು ಸ್ವಿಟ್ಜರ್ಲೆಂಡ್ ಸೇರಿದಂತೆ ಇಡೀ ಇಡೀ ಯುರೋಪಿಯನ್ ಮಾರುಕಟ್ಟೆಯನ್ನು ಮೀರಿಸುತ್ತದೆ, ಈಗ ಇದರ ಮೌಲ್ಯ 8.9 ಟ್ರಿಲಿಯನ್ ಡಾಲರ್ ಆಗಿದೆ.
ಅದೇ 2007ಕ್ಕೆ ಹೋಲಿಸಿದರೆ, ಯುರೋಪಿಯನ್ ಮಾರುಕಟ್ಟೆ ಅಮೆರಿಕಾ ಟೆಕ್ ವಲಯಕ್ಕಿಂತ ನಾಲ್ಕು ಪಟ್ಟು ಹೆಚ್ಚಾಗಿದೆ ಎಂದು ಸಂಸ್ಥೆ ಹೇಳಿದೆ.

ಎಸ್ & ಪಿ 500 ಮಾರ್ಚ್‌ನಲ್ಲಿನ ಕುಸಿತದ ಹಂತದಿಂದ ಶೇಕಡಾ 55 ಕ್ಕಿಂತ ಹೆಚ್ಚಾಗಿದೆ. ಆದರೆ ಈ ಬೆಳವಣಿಗೆಯು ಅಮೆರಿಕಾದ ಷೇರು ಮಾರುಕಟ್ಟೆಯ ಬೆರಳೆಣಿಕೆಯಷ್ಟು ಮೆಗಾಕ್ಯಾಪ್ ಟೆಕ್ ಷೇರುಗಳಲ್ಲಿ ಹೆಚ್ಚು ಕೇಂದ್ರೀಕೃತವಾಗುತ್ತಿರುವ ಬಗ್ಗೆ ಕಳವಳಕ್ಕೆ ಕಾರಣವಾಗಿದೆ. ಅಂದರೆ ಕೆಲವೇ ಟೆಕ್ ಷೇರುಗಳಲ್ಲೇ ಮೌಲ್ಯ ಹೆಚ್ಚಾಗುತ್ತಿದೆ.
ಎಸ್ & ಪಿ ಡೌ ಜೋನ್ಸ್ ಸೂಚ್ಯಂಕಗಳ ಹಿರಿಯ ಸೂಚ್ಯಂಕ ವಿಶ್ಲೇಷಕ ಹೊವಾರ್ಡ್ ಸಿಲ್ವರ್‌ಬ್ಲಾಟ್ ಪ್ರಕಾರ, ಐದು ದೊಡ್ಡ ಕಂಪನಿಗಳಾದ ಆಪಲ್, ಮೈಕ್ರೋಸಾಫ್ಟ್, ಅಮೆಜಾನ್, ಗೂಗಲ್ ಮಾತೃಸಂಸ್ಥೆ ಆಲ್ಫಾಬೆಟ್ ಮತ್ತು ಫೇಸ್‌ಬುಕ್ ಎಸ್ ಎಸ್ & ಪಿ 500 ರ ಶೇಕಡಾ 23.8 ರಷ್ಟು ಮೌಲ್ಯವನ್ನು ಹೊಂದಿವೆ.
-
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ












Click it and Unblock the Notifications