ವಿ. ಜಿ ಸಿದ್ದಾರ್ಥ ಅನುಭವಿಸಿದ 'ಕಿರುಕುಳ' ಬಗ್ಗೆ ಮಲ್ಯ ಕಳವಳ
Recommended Video
ಲಂಡನ್, ಜುಲೈ 31: "ಪರೋಕ್ಷವಾಗಿ ನಾನು ಕೂಡ ಸಿದ್ಧಾರ್ಥ ಅವರ ಸಾಲಿಗೆ ಸೇರುತ್ತೇನೆ. ಸಿದ್ಧಾರ್ಥ ಉತ್ತಮ ಮನುಷ್ಯ ಮತ್ತು ಬುದ್ಧಿವಂತ ಉದ್ಯಮಿಯಾಗಿದ್ದರು. ಅವರ ಪತ್ರವನ್ನು ನೋಡಿ ನನಗೆ ಆಘಾತವಾಗಿದೆ" ಎಂದು ಉದ್ಯಮಿ ವಿಜಯ್ ಮಲ್ಯ ಅವರು ಸರ್ಕಾರದ ತನಿಖಾ ಸಂಸ್ಥೆ, ಬ್ಯಾಂಕ್ಗಳ ವಿರುದ್ಧ ಕಿಡಿಕಾರಿದ್ದಾರೆ.
ಮಾಜಿ ಮುಖ್ಯಮಂತ್ರಿ ಎಸ್ಎಂ ಕೃಷ್ಣ ಅಳಿಯ, ಕೆಫೆ ಕಾಫಿ ಡೇ ಸ್ಥಾಪಕ, ಕರ್ನಾಟಕದ ಪ್ರಮುಖ ಉದ್ಯಮಿ ವಿ.ಜಿ ಸಿದ್ದಾರ್ಥ ಅವರ ಮೃತದೇಹ ಬುಧವಾರ ಬೆಳಗ್ಗೆ ನೇತ್ರಾವತಿ ನದಿಯಲ್ಲಿ ಪತ್ತೆಯಾಗಿದೆ. ಇದಕ್ಕೂ ಮುನ್ನ ಜುಲೈ 27ರಂದು ಸಿದ್ದಾರ್ಥ ಬರೆದಿದ್ದ ಪತ್ರದ ಬಗ್ಗೆ ಉದ್ಯಮದಾರರು ಆತಂಕ ವ್ಯಕ್ತಪಡಿಸಿದ್ದಾರೆ. ಕೆಫೆ ಕಾಫಿ ಡೇ ಸಂಸ್ಥಾಪಕ ವಿ.ಜಿ.ಸಿದ್ಧಾರ್ಥ ಅವರು ತಮ್ಮ ಪತ್ರದಲ್ಲಿ ಉಲ್ಲೇಖಿಸಿದಂತೆ ತಾವು ಕೂಡ ಕಿರುಕುಳ ಎದುರಿಸುತ್ತಿರುವುದಾಗಿ ಮಲ್ಯ ತಮ್ಮನ್ನು ಹೋಲಿಸಿಕೊಂಡಿದ್ದಾರೆ.

ಸಿದ್ದಾರ್ಥ ಅವರ ಪತ್ರ ಹಾಗೂ ನಾಪತ್ತೆ ಬಗ್ಗೆ ಟ್ವೀಟ್ ಮಾಡಿರುವ ಮಲ್ಯ, "ತನಗೂ ಕೂಡ ತನಿಖಾ ಏಜೆನ್ಸಿಗಳು ಮತ್ತು ಬ್ಯಾಂಕುಗಳು ಕಿರುಕುಳ ನೀಡುತ್ತಿದ್ದು, ಸಿದ್ಧಾರ್ಥ ಅವರಿಗಿಂತ ನನ್ನ ಸ್ಥಿತಿ ಭಿನ್ನವಾಗಿಲ್ಲ" ಎಂದಿದ್ದಾರೆ.
In Western Countries, Government and Banks help borrowers repay their debts. In my case they are obstructing every possible effort for me to repay my debt whilst competing for my assets. As far as the prima facie criminal case goes wait for the appeal granted.
— Vijay Mallya (@TheVijayMallya) July 30, 2019
ಸರಣಿ ಟ್ವೀಟ್ ನಲ್ಲಿ ತಮ್ಮ ನೋವು, ಉದ್ಯಮಿಗಳಿಗೆ ಸರ್ಕಾರಿ ಏಜೆನ್ಸಿಗಳು ಮತ್ತು ಬ್ಯಾಂಕುಗಳು ನೀಡುವ ಕಾಟವನ್ನು ಉಲ್ಲೇಖಿಸಿದ್ದಾರೆ. "ಸರ್ಕಾರಿ ಏಜೆನ್ಸಿಗಳು ಯಾರನ್ನಾದರೂ ಹತಾಶೆಗೆ ದೂಡಬಹುದು. ಸಾಲವನ್ನು ಪೂರ್ಣ ಮರುಪಾವತಿ ಮಾಡುತ್ತೇನೆ ಎಂದಿದ್ದರು ಕೂಡ ಅವರು ನನಗೆ ಏನು ಮಾಡುತ್ತಿದ್ದಾರೆಂದು ನೋಡಿ. ಇದೊಂದು ಕೆಟ್ಟ ಮತ್ತು ಪಟ್ಟುಹಿಡಿದ ವರ್ತನೆಯಾಗಿದೆ" ಎಂದು ಟ್ವೀಟ್ ಮಾಡಿದ್ದಾರೆ.
I am indirectly related to VG Siddhartha. Excellent human and brilliant entrepreneur. I am devastated with the contents of his letter. The Govt Agencies and Banks can drive anyone to despair. See what they are doing to me despite offer of full repayment. Vicious and unrelenting.
— Vijay Mallya (@TheVijayMallya) July 30, 2019
"ವಿದೇಶಗಳಲ್ಲಿ ಸರ್ಕಾರ ಮತ್ತು ಬ್ಯಾಂಕುಗಳು ಸಾಲಗಾರರಿಗೆ ಸಾಲ ಮರುಪಾವತಿಗೆ ಸಹಾಯ ಮಾಡುತ್ತವೆ. ಆದರೆ ನನ್ನ ಪ್ರಕರಣದಲ್ಲಿ ನನ್ನ ಸಾಲವನ್ನು ಮರುಪಾವತಿಸಲು ಸಾಧ್ಯವಿರುವ ಎಲ್ಲ ಪ್ರಯತ್ನಗಳನ್ನು ತಡೆಯುತ್ತಿದ್ದಾರೆ" ಎಂದು ಮತ್ತೊಂದು ಟ್ವೀಟ್ ನಲ್ಲಿ ಆರೋಪಿಸಿದ್ದಾರೆ.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications