ವೊಡಾಫೋನ್ ಐಡಿಯಾ ತ್ರೈಮಾಸಿಕ ನಷ್ಟ 25,460 ಕೋಟಿ ರೂಪಾಯಿ
ನವದೆಹಲಿ, ಆಗಸ್ಟ್ 07: ಪ್ರಮುಖ ಟೆಲಿಕಾಂ ಕಂಪನಿಗಳಲ್ಲಿ ಒಂದಾದ ವೊಡಾಫೋನ್ ಐಡಿಯಾ ಗುರುವಾರ 2020-21ರ ಮೊದಲ ತ್ರೈಮಾಸಿಕ ವರದಿಯನ್ನು ಪ್ರಕಟಿಸಿದ್ದು, 25,460 ಕೋಟಿ ರೂಪಾಯಿಗಳ ನಷ್ಟವನ್ನು ವರದಿ ಮಾಡಿದೆ.
ವೊಡಾಫೋನ್ ಐಡಿಯಾದ ನಷ್ಟವು ಹಿಂದಿನ ವರ್ಷದ ಈ ಅವಧಿಯಲ್ಲಿ ಸುಮಾರು 4,874 ಕೋಟಿ ರೂಪಾಯಿ ಆಗಿತ್ತು. ಇನ್ನು ಹಣಕಾಸು ವರ್ಷ 2021 ರ ಮೊದಲ ತ್ರೈಮಾಸಿಕದಲ್ಲಿ ಕಂಪನಿಯ ಆದಾಯ 10,659.3 ಕೋಟಿ ರೂಪಾಯಿಗೆ ತಲುಪಿದ್ದು, ಹಿಂದಿನ ವರ್ಷದ ಇದೇ ಅವಧಿಯಲ್ಲಿ 11,269.9 ಕೋಟಿ ರೂಪಾಯಿ ಆಗಿತ್ತು
ನಿಯಂತ್ರಕ ಸಲ್ಲಿಕೆಯೊಂದರಲ್ಲಿ ಟೆಲಿಕಾಂ ಕಂಪನಿಯು ಜೂನ್ ತ್ರೈಮಾಸಿದಲ್ಲಿ ಹೊಂದಾಣಿಕೆಯ ಆದಾಯ (ಎಜಿಆರ್) ಹೊಣೆಗಾರಿಕೆಗಾಗಿ ಹೆಚ್ಚುವರಿಯಾಗಿ 19,440.5 ಕೋಟಿ ರೂ. ಒಳಗೊಂಡಿದೆ. ಒಟ್ಟು ಅಂದಾಜು ಎಜಿಆರ್ 194.4 ಬಿಲಿಯನ್ ರೂ.ಗಳ ಬಾಕಿ ಶುಲ್ಕವನ್ನು ಗುರುತಿಸಿದ್ದೇವೆ. ಜೊತೆಗೆ ಮಾರ್ಚ್ 31, 2020 ರ ವೇಳೆಗೆ 460.0 ಬಿಲಿಯನ್ ರೂ.ಗಳ ಬಾಕಿ ಹೊಣೆಗಾರಿಕೆ ಇದೆ ಎಂದು ಕಂಪನಿಯ ಹೇಳಿಕೆ ತಿಳಿಸಿದೆ .

ಕೊರೊನಾವೈರಸ್ ಕಾರಣದಿಂದಾಗಿ ರಾಷ್ಟ್ರವ್ಯಾಪಿ ಲಾಕ್ಡೌನ್ನಿಂದ ಮೊದಲ ತ್ರೈಮಾಸಿಕ ಆದಾಯ ಪ್ರಭಾವಿತವಾಗಿದೆ ಎಂದು ಕಂಪನಿ ತಿಳಿಸಿದೆ. ಅಂಗಡಿಗಳ ಲಾಕ್ ಡೌನ್ ಆಗಿ ರೀಚಾರ್ಜ್ಗಳ ಲಭ್ಯತೆ ಕಡಿಮೆಯಾಗಿತ್ತು. ಆರ್ಥಿಕ ಕುಸಿತದ ಕಾರಣದಿಂದಾಗಿ ಗ್ರಾಹಕರ ರೀಚಾರ್ಜ್ ಮಾಡುವ ಸಾಮರ್ಥ್ಯದ ಮೇಲೆ ಸಹ ಪರಿಣಾಮ ಬೀರಿದೆ ಎನ್ನಲಾಗಿದೆ.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications