Chamaraja Elections : ಒಕ್ಕಲಿಗರ ಕೋಟೆಯಲ್ಲಿ ಮತ್ತೆ "ಕಮಲ" ಅರಳುತ್ತಾ?- "ಕೈ", ದಳದ ಲೆಕ್ಕಾಚಾರವೇನು?
ಮೈಸೂರು, ಮಾರ್ಚ್, 25: ರಾಜ್ಯದಲ್ಲಿ ವಿಧಾನಸಭೆ ಚುನಾವಣಾ ಕಣ ದಿನದಿಂದ ದಿನಕ್ಕೆ ರಂಗೇರುತ್ತಲೇ ಇದೆ. ಹಾಗೆಯೇ ಒಕ್ಕಲಿಗರಿಂದ ಕೂಡಿರುವ ಮೈಸೂರು ಜಿಲ್ಲೆಯ ಚಾಮರಾಜ ವಿಧಾನಸಭಾ ಕ್ಷೇತ್ರದಲ್ಲಿ ರಾಜಕೀಯ ಸ್ಥಿತಿ ಗತಿ ಹೇಗಿದೆ ಎಂದು ತಿಳಿಯೋಣ ಬನ್ನಿ.
ಮತ್ತೊಮ್ಮೆ ಚುನಾವಣಾ ಸಮರಕ್ಕೆ ಸಜ್ಜಾಗಿರುವ ಚಾಮರಾಜ ಕ್ಷೇತ್ರ ಕರ್ನಾಟಕ ರಾಜ್ಯದ 224 ಕ್ಷೇತ್ರಗಳ ಪೈಕಿ ಒಂದಾಗಿದೆ. 2018, ಕಳೆದ ಚುನಾವಣೆಯಲ್ಲಿ ಇಲ್ಲಿ ಬಿಜೆಪಿ ಪಕ್ಷದ ಅಭ್ಯರ್ಥಿ ವಿಜಯಪತಾಕೆಯನ್ನು ಹಾರಿಸಿದ್ದರು. ಚಾಮರಾಜ ಕ್ಷೇತ್ರದ ಚುನಾವಣಾ ಇತಿಹಾಸ, ಈಗಿನ ಬೆಳವಣಿಗೆಗಳ ಮಾಹಿತಿಯನ್ನು ಇಲ್ಲಿ ತಿಳಿಯಿರಿ.

ಇಲ್ಲಿ 201 ರಲ್ಲಿ ಬಿಜೆಪಿಯ ಎಲ್. ನಾಗೇಂದ್ರ ಗೆಲುವು ಸಾಧಿಸಿದ್ದರು. ಇವರ ವಿರುದ್ಧ ಕಾಂಗ್ರೆಸ್‌ನಿಂದ ಸ್ಪರ್ಧಿಸಿದ್ದ ವಾಸು 14,936 ಮತಗಳ ಅಂತರದಿಂದ ಸೋಲನುಭವಿಸಿದ್ದರು. ವಿದ್ಯಾವಂತ ಮತ್ತು ಒಕ್ಕಲಿಗರಿಂದ ಕೂಡಿರುವ ಚಾಮರಾಜ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ, ಕಾಂಗ್ರೆಸ್, ಜೆಡಿಎಸ್ ಮೂರು ಪಕ್ಷಗಳು ಸಹ ಸಮಾನವಾಗಿ ಪೈಪೋಟಿ ನೀಡುತ್ತಲೇ ಬಂದಿವೆ. ಕ್ಷೇತ್ರದಲ್ಲಿ ಇಲ್ಲಿಯವರೆಗೂ ಬಿಜೆಪಿ ಅತಿ ಹೆಚ್ಚು ಬಾರಿ ಜಯ ಸಾಧಿಸಿದ್ದು, ಈ ಹಿನ್ನೆಲೆ ಕ್ಷೇತ್ರದಲ್ಲಿ ಬೇರೆ ಪಕ್ಷಗಳಿಗಿಂತ ಬಿಜೆಪಿಯು ಸ್ವಲ್ಪಮಟ್ಟಿಗೆ ಹಿಡಿತ ಸಾಧಿಸಿದೆ ಎನ್ನಲಾಗಿದೆ.
ಚಾಮರಾಜ ಕ್ಷೇತ್ರದ ಮಾಹಿತಿ
ಈ ಬಾರಿ ಮೂರು ಪಕ್ಷಗಳ ನಡುವೆ ನೇರ ಸಮರ ಏರ್ಪಟ್ಟಿದ್ದು, ರಾಜಕೀಯ ಲೆಕ್ಕಾಚಾರ ಬದಲಾಗುವ ಸಾಧ್ಯತೆ ಇದೆ. ಈವರೆಗೆ ಕ್ಷೇತ್ರದಲ್ಲಿ ಯಾವ ಪಕ್ಷದಿಂದಲೂ ಅಭ್ಯರ್ಥಿಗಳನ್ನು ಘೋಷಣೆ ಆಡಿಲ್ಲ. ಆದರೂ ಈ ಕ್ಷೇತ್ರದಲ್ಲಿ ಈಗಾಗಲೇ ಹಾಲಿ ಶಾಸಕ ಹಾಗೂ ಇತರ ಸಾಂಭಾವ್ಯ ಅಭ್ಯರ್ಥಿಗಳು ಭರ್ಜರಿ ಪ್ರಚಾರವನ್ನು ಪ್ರಾರಂಭ ಮಾಡಿದ್ದಾರೆ. ಆದರೆ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕ್ಷೇತ್ರದ ಮತದಾರ ಪ್ರಭುಗಳು ಯಾವ ಕಡೆ ಒಲವು ತೋರಲಿದ್ದಾರೆ ಎನ್ನುವ ಪ್ರಶ್ನೆಯೇ ಕುತೂಹಲ ಮೂಡಿಸಿದೆ.

ಚಾಮರಾಜ ಸುಶಿಕ್ಷಿತರ ಕ್ಷೇತ್ರ ಎನ್ನುವ ಪ್ರಖ್ಯಾತಿ ಪಡೆದಿದೆ. ಆದರೂ ಇಲ್ಲಿ ಒಕ್ಕಲಿಗರದ್ದೇ ದರ್ಬಾರ್ ಆಗಿದ್ದು, ಚುನಾವಣೆಗೂ ಮುನ್ನವೇ ಕ್ಷೇತ್ರದಲ್ಲಿನ ಒಳಜಗಳಗಳು ತೀವ್ರ ಕುತೂಹಲ ಕೆರಳಿಸಿವೆ. ಹಾಲಿ ಬಿಜೆಪಿ ಶಾಸಕರ ಹಾದಿಯಾಗಿ ಕಾಂಗ್ರೆಸ್ ಮತ್ತು ಜೆಡಿಎಸ್‌ನಿಂದಲೂ ಸಮಬಲದ ಸಮರಕ್ಕೆ ತಯಾರಿ ನಡೆದಿದೆ.
ಕ್ಷೇತ್ರದಲ್ಲಿ ಈವರೆಗೂ ಸ್ಪರ್ಧಿಸಿದವರೆಲ್ಲಾ ಬಹುತೇಕ ಒಕ್ಕಲಿಗರೇ ಆಗಿದ್ದಾರೆ. ಶಾಸಕರಾಗಿ ಆಯ್ಕಯಾದರವರೆಲ್ಲರೂ ಒಕ್ಕಲಿಗರೇ ಆಗಿದ್ದಾರೆ. ಆದ್ದರಿಂದ ಈ ಸಲವೂ ಪ್ರಮುಖ ಮೂರು ಪಕ್ಷಗಳು ಒಕ್ಕಲಿಗ ಸಮುದಾಯದ ಅಭ್ಯರ್ಥಿಗಳಿಗೆ ಮಣೆ ಹಾಕಲು ಪ್ಲಾನ್ ಮಾಡಿಕೊಂಡಿವೆ.
ಕ್ಷೇತ್ರದಲ್ಲಿ ರಾಜಕೀಯ ಲೆಕ್ಕಾಚಾರ ಹೇಗಿದೆ?
1978ರಿಂದ ಇಲ್ಲಿಯವರೆಗೂ ಕ್ಷೇತ್ರದಲ್ಲಿ ಒಟ್ಟು 11 ಚುನಾವಣೆಗಳು ನಡೆದಿವೆ. ಈ ವೇಳೆ ಹಲವು ಶಾಸಕರು ಆಯ್ಕೆ ಆಗಿದ್ದರು. ಶಂಕರಲಿಂಗೇಗೌಡ ಸತತವಾಗಿ 4 ಬಾರಿ ಆಯ್ಕೆ ಆಗುವ ಮೂಲಕ ದಾಖಲೆ ಮಾಡಿದ್ದಾರೆ. ಆದರೆ ಕ್ಷೇತ್ರಕ್ಕೆ ಮಂತ್ರಿ ಪಟ್ಟ ದೊರಕದಿರುವುದು ವಿಪರ್ಯಾಸದ ಸಂಗತಿಯಾಗಿದೆ.

ಒಕ್ಕಲಿಗರದ್ದೇ ದರ್ಬಾರ್
ಒಕ್ಕಲಿಗರು ಮಾತ್ರ ಅಲ್ಲದೆ ಬ್ರಾಹ್ಮಣ, ಲಿಂಗಾಯತ, ಗೊಲ್ಲ ಸೇರಿ ಅನೇಕ ಹಿಂದುಳಿದ ಸಮುದಾಯದವರು ಕ್ಷೇತ್ರದಲ್ಲಿ ಇದ್ದಾರೆ. ಬಹುಮಹಡಿ ಅಪಾರ್ಟ್‌ಮೆಂಟ್‌ನ ಮತದಾರರ ಸಂಖ್ಯೆ ಕಡಿಮೆ ಆಗಿದೆ. ಆದರೆ ಸ್ಲಂಗಳಲ್ಲೇ ಅತೀ ಹೆಚ್ಚು ಮತದಾರರು ಇದ್ದಾರೆ. ಆದ್ದರಿಂದ ರಾಜಕೀಯ ನಾಯಕರು ಸ್ಲಂಗಳತ್ತ ಹೆಚ್ಚು ಗಮನಹರಿಸಿದ್ದಾರೆ.
ಇನ್ನು ಕ್ಷೇತ್ರದಲ್ಲಿ ಕಾಂಗ್ರೆಸ್ ಟಿಕೆಟ್‌ಗಾಗಿ ಮಾಜಿ ಶಾಸಕ ವಾಸು ಹಾಗೂ ಮುಖಂಡ ಕೆ.ಹರೀಶ್‌ಗೌಡ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ. ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ ಆಪ್ತರು ಎನ್ನುವ ಕಾರಣಕ್ಕೆ ಟಿಕೆಟ್ ವಿಷಯದಲ್ಲಿ ವಾಸು ಮುಂಚೂಣಿಯಲ್ಲಿದ್ದಾರೆ. ಕ್ಷೇತ್ರದಲ್ಲಿ ನಾಲ್ಕು ಬಾರಿ ಸ್ಪರ್ಧಿಸಿ ಒಂದು ಬಾರಿ ಗೆಲುವು ಸಾಧಿಸಿರುವ ವಾಸು ಈ ಹಿಂದೆ ಮೇಯರ್ ಆಗಿ ಕರ್ತವ್ಯ ನಿಭಾಯಿಸಿದ್ದಾರೆ.
ವೀರಪ್ಪ ಮೋಯ್ಲಿ ಸಿಎಂ ಆಗಿದ್ದ ವೇಳೆಯಲ್ಲಿ ವಾಸು ಅವರ ರಾಜಕೀಯ ಕಾರ್ಯದರ್ಶಿ ಆಗಿಯೂ ಸೇವೆ ಸಲ್ಲಿಸಿದ್ದಾರೆ. ಇದೇ ರೀತಿ ಮುಂಬರು ವಿಧಾನಸಭೆ ಚುನಾವಣೆಗೂ ಅವರೇ ಟಿಕೆಟ್ ಆಕಾಂಕ್ಷಿಯಾಗಿದ್ದಾರೆ. ಅಷ್ಟೇ ಅಲ್ಲದೇ ಕ್ಷೇತ್ರದಲ್ಲಿ ವಾಸು ತಮ್ಮದೇ ಆದ ಅಭಿಮಾನಿ ಬಳಗವನ್ನು ಹೊಂದಿದ್ದಾರೆ. ವಾಸು ಜಿಲ್ಲೆಯ ಸಜ್ಜನ ರಾಜಕಾರಣಿಗಳಲ್ಲಿ ಒಬ್ಬರೆನಿಸಿಕೊಂಡಿದ್ದಾರೆ. ಇದೇ ಕಾರಣದಿಂದ ಬಹುತೇಕ ಇವರಿಗೆ ಟಿಕೆಟ್ ದೊರಕುವುದು ಖಚಿತ ಎನ್ನುವ ಮಾತುಗಳು ಕೇಳಿಬರುತ್ತಿವೆ.
ಕ್ಷೇತ್ರದಲ್ಲಿನ ಸೋಲು, ಗೆಲುವಿನ ಲೆಕ್ಕಾಚಾರ
ಮಾಜಿ ಸಿಎಂ ಸಿದ್ದರಾಮಯ್ಯ ಆಪ್ತರಲ್ಲಿ ಗುರುತಿಸಿಕೊಂಡಿರುವ ಕೆ.ಹರೀಶ್‌ಗೌಡ ಸಹ ಕ್ಷೇತ್ರದ ಟಿಕೆಟ್ ಪ್ರಬಲ ಆಕಾಂಕ್ಷಿ ಆಗಿದ್ದಾರೆ. ಅಲ್ಲದೇ ಅವರು ಕಾಂಗ್ರೆಸ್‌ನಿಂದ ಸ್ಪರ್ಧೆ ಮಾಡಲು ತುದಿಗಾಲಲ್ಲಿ ಕಾಯುತ್ತಿದ್ದಾರೆ. ಕ್ಷೇತ್ರದಲ್ಲಿ ಸತತ 12 ವರ್ಷದಿಂದ ಕೆಲಸ ಮಾಡಿದ್ದಾರೆ. ಪ್ರಾರಂಭದಲ್ಲಿ ಜೆಡಿಎಸ್‌ನಲ್ಲಿದ್ದ ಹರೀಶ್ ಗೌಡ, ಹೆಚ್.ಡಿ.ರೇವಣ್ಣನವರ ಅಪ್ಪಟ ಶಿಶ್ಯ ಆಗಿದ್ದರು. 2013 ಹಾಗೂ 2018ರ ಚುನಾವಣೆಗಳಲ್ಲೂ ಕ್ಷೇತ್ರದ ಜೆಡಿಎಸ್ ಟಿಕೆಟ್ ಆಕಾಂಕ್ಷಿ ಆಗಿದ್ದರು.
ನಂತರ ಬದಲಾದ ರಾಜಕೀಯ ಬೆಳವಣಿಗೆಯಲ್ಲಿ 2013ರಲ್ಲಿ ಜೆಡಿಎಸ್ ಹೆಚ್.ಎಸ್. ಶಂಕರಲಿಂಗೇಗೌಡರಿಗೆ ಟಿಕೆಟ್ ನೀಡಿತ್ತು. ಆಗ ಮುಂದಿನ ಚುನಾವಣೆಗೆ ಟಿಕೆಟ್ ನೀಡುವುದಾಗಿ ಹರೀಶ್ ಗೌಡರನ್ನು ಜೆಡಿಎಸ್ ವರಿಷ್ಠರು ಸಮಾಧಾನಪಡಿಸಿದ್ದರು. ಆದ್ರೆ 2018ರಲ್ಲೂ ಎಚ್.ಡಿ.ದೇವೇಗೌಡರ ಸಂಬಂಧಿ ಎಂಬ ಕಾರಣಕ್ಕೆ ಕೆಎಸ್.ರಂಗಪ್ಪನವರಿಗೆ ಜೆಡಿಎಸ್ ಟಿಕೆಟ್ ನೀಡಿತ್ತು. ಇದರಿಂದ ಅಸಮಾಧಾನಗೊಂಡ ಕೆ.ಹರೀಶ್‌ಗೌಡ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡಿದ್ದರು.
ಬಳಿಕ ಪಾಲಿಕೆ ಚುನಾವಣೆಯಲ್ಲೂ ಕ್ಷೇತ್ರ ವ್ಯಾಪ್ತಿಯಲ್ಲಿ ತಮ್ಮ ಇಬ್ಬರು ಪಕ್ಷೇತರ ಅಭ್ಯರ್ಥಿಗಳನ್ನು ಗೆಲ್ಲಿಸಿಕೊಂಡಿದ್ದರು. ಸಿದ್ದರಾಮಯ್ಯನವರ ನೇತೃತ್ವದಲ್ಲಿ ಕಾಂಗ್ರೆಸ್ ಸೇರಿರುವ ಇವರು, ಈ ಬಾರಿ ಶತಾಯಗತಾಯ ಕಾಂಗ್ರೆಸ್‌ನಿಂದ ಸ್ಪರ್ಧಿಸಲು ತುದಿಗಾಲಲ್ಲಿ ನಿಂತಿದ್ದು, ಟಿಕೆಟ್ ಸಿಗುವ ವಿಶ್ವಾಸದಲ್ಲಿದ್ದಾರೆ.
ಮತ್ತೊಂದೆಡೆ ಬಿಜೆಪಿ ಪಕ್ಷದಲ್ಲೂ ಟಿಕೆಟ್ ಆಕಾಂಕ್ಷಿತರ ಪಟ್ಟಿ ದೊಡ್ಡದಾಗಿದೆ. ಕ್ಷೇತ್ರದ ಬಿಜೆಪಿ ಶಾಸಕ ಎಲ್. ನಾಗೇಂದ್ರ 2023ರ ಟಿಕೆಟ್ ಆಕಾಂಕ್ಷಿತ ಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿ ಇದ್ದಾರೆ. ಚುನಾವಣೆಯ ತಯಾರಿಯನ್ನು ಕೂಡ ನಡೆಸಿದ್ದು, ಬಿಜೆಪಿಯಲ್ಲಿ ಎಷ್ಟೇ ಆಕಾಂಕ್ಷಿಗಳಿ ಇದ್ದರೂ ಶಸಕ ನಾಗೇಂದ್ರ ಮತ್ತೊಮ್ಮೆ ಸ್ಪರ್ಧಿಸುವುದು ಖಚಿತ ಎನ್ನುವ ಮಾತುಗಳು ಜೋರಾಗಿ ಕೇಳಿಬರುತ್ತಿವೆ.
ಜೊತೆಗೆ ಬಿಜೆಪಿ ಮಾಜಿ ನಗರಾಧ್ಯಕ್ಷ ಡಾ. ಮಂಜುನಾಥ್, ವಿಧಾನಪರಿಷತ್ ಮಾಜಿ ಸದಸ್ಯ ಡಿ.ಮಾದೇಗೌಡ, ಪಾಲಿಕೆ ೧ಮಾಜಿ ಸದಸ್ಯ ನಂದೀಶ್ ಪ್ರೀತಂ, ಮೂಡ ಮಾಜಿ ಅಧ್ಯಕ್ಷ ಸಿ.ಬಸವೇಗೌಡ, ಜಯಪ್ರಕಾಶ್ ಕೂಡ ಆಕಾಂಕ್ಷಿ ಆಗಿದ್ದಾರೆ. ಇವರೆಲ್ಲರೂ 2018ರಲ್ಲೂ ಆಕಾಂಕ್ಷಿಗಳಾಗಿದ್ದರು. ಆದರೆ ಇತ್ತೀಚೆಗೆ ಇವರಲ್ಲಿ ಯಾರೂ ಸಹ ಮುನ್ನೆಲೆಗೆ ಬಂದಿಲ್ಲ. ಇದರಿಂದ ಎಲ್.ನಾಗೇಂದ್ರಗೆ ಪ್ಲಸ್ ಪಾಯಿಂಟ್ ಆದಂತಾಗಿದೆ.
ಎಲ್.ನಾಗೇಂದ್ರ ಅವರು ಕ್ಷೇತ್ರದಲ್ಲಿ ನಿರಂತರವಾಗಿ ಪಕ್ಷ ಕಟ್ಟುವ ಕೆಲಸವನ್ನು ಮಾಡುತ್ತಿದ್ದಾರೆ. ಅಲ್ಲದೆ ಕಾರ್ಯಕರ್ತರ ಜೊತೆಯೂ ಉತ್ತಮ ಸಂಪರ್ಕದಲ್ಲಿ ಇದ್ದಾರೆ. ಕ್ಷೇತ್ರ ವ್ಯಾಪ್ತಿಯ ವಾರ್ಡ್‌ಗಳಲ್ಲಿ ಹಲವು ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡುತ್ತಿದ್ದು, ಸಾರ್ವಜನಿಕರ ಸಮಸ್ಯೆಗಳನ್ನು ಆಲಿಸುವ ಮೂಲಕ ಗಮನ ಸೆಳೆದಿದ್ದಾರೆ. ಕ್ಷೇತ್ರದಲ್ಲಿ ಒಟ್ಟು 2,28,483 ಮತದಾರರಿದ್ದಾರೆ. ಇದರಲ್ಲಿ 1,14,639 ಪುರುಷರು, 1,13,844 ಮಹಿಳಾ ಮತದಾರರಿದ್ದಾರೆ.
Chamaraja Karnataka Elections
| ವರ್ಷ | ವಿಜೇತರು | ಮತಗಳು | ಸೋತವರು | ಮತಗಳು |
| 2018 | ಎಲ್ ನಾಗೇಂದ್ರ (ಬಿಜೆಪಿ) | 51683 | ವಾಸು (ಕಾಂಗ್ರೆಸ್) | 23416 |
| 2013 | ವಾಸು (ಕಾಂಗ್ರೆಸ್) | 41930 | ಎಚ್.ಎಸ್. ಶಂಕರಲಿಂಗೇ ಗೌಡ (ಬಿಜೆಪಿ) | 34844 |
| 2008 | ಎಚ್.ಎಸ್. ಶಂಕರಲಿಂಗೇ ಗೌಡ (ಬಿಜೆಪಿ) | 44243 | ವಾಸು (ಕಾಂಗ್ರೆಸ್) | 29015 |
| 2004 | ಎಚ್.ಎಸ್. ಶಂಕರಲಿಂಗೇ ಗೌಡ (ಬಿಜೆಪಿ) | 38193 | ಸಂದೇಶ್ ನಾಗರಾಜು (ಕಾಂಗ್ರೆಸ್) | 36747 |
1978ರಿಂದ ಇಲ್ಲಿಯವರೆಗೆ ಕ್ಷೇತ್ರದಲ್ಲಿ ಒಟ್ಟು 11 ಚುನಾವಣೆಗಳು ನಡೆದಿವೆ. ಅಂಕಿ ಅಂಶಗಳ ಪ್ರಕಾರ ಬಿಜೆಪಿ ಪಕ್ಷದ ಅಭ್ಯರ್ಥಿಗಳು ಅತಿ ಹೆಚ್ಚು ಬಾರಿ ಗೆಲುವು ಸಾಧಿಸಿರುವುದು ಈ ಕ್ಷೇತ್ರದ ವಿಶೇಷತೆ ಆಗಿದೆ. 2018ರ ಚುನಾವಣೆ ಸೇರಿದಂತೆ ಬಿಜೆಪಿ ಒಟ್ಟು 5 ಬಾರಿ ಗೆಲುವು ದಾಖಲಿಸಿದರೆ, ಜನತಾ ಪಕ್ಷ ಮೂರು ಬಾರಿ ಗೆದ್ದಿದೆ. ಇನ್ನು ಕಾಂಗ್ರೆಸ್ ಪಕ್ಷವು ಎರಡು ಬಾರಿ ಜಯಭೇರಿ ಬಾರಿಸಿದೆ.
-
Weekly Horoscope March 9–15: ಮಾರ್ಚ್ ವಾರಭವಿಷ್ಯ – 12 ರಾಶಿಗಳ ಸುಖ-ದುಃಖ, ಹಣಕಾಸು ಮತ್ತು ಆರೋಗ್ಯ ಫಲ -
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ












Click it and Unblock the Notifications