ಕೇವಲ 21 ದಿನಗಳಲ್ಲಿ ಮಲೆಮಾದಪ್ಪನಿಗೆ ಹರಿದು ಬಂತು 1.56 ಕೋಟಿ ರೂಪಾಯಿ ಕಾಣಿಕೆ
ಚಾಮರಾಜನಗರ, ಜುಲೈ, 28: ಶಕ್ತಿ ಯೋಜನೆ ಜಾರಿಯಾದಾಗಿನಿಂದ ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಧಾರ್ಮಿಕ ಸ್ಥಳಗಳಿಗೆ ಭೇಟಿ ನೀಡುತ್ತಿದ್ದು, ಇದರಿಂದ ದೇವಸ್ಥಾನಗಳ ಹುಂಡಿಯ ಮೊತ್ತವೂ ಏರಿಕೆಯಾಗುತ್ತಲೇ ಇದೆ ಎಂದು ತಿಳಿದುಬರುತ್ತಿದೆ. ಹಾಗೆಯೇ ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ಮಲೆಮಾದಪ್ಪನ ಹುಂಡಿಯಲ್ಲಿ ಬರೀ 21 ದಿನಕ್ಕೆ ಬರೋಬ್ಬರಿ 1.56 ಕೋಟಿ ರೂಪಾಯಿ ಕಾಣಿಕೆ ಹಣ ಸಂಗ್ರಹವಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.
ಮಲೆಮಹದೇಶ್ವರ ಬೆಟ್ಟದ ಬಸ್ ನಿಲ್ದಾಣದ ಬಳಿಯ ವಾಣಿಜ್ಯ ಸಂಕೀರ್ಣದಲ್ಲಿ ಪ್ರಾಧಿಕಾರ ಕಾರ್ಯದರ್ಶಿ ಗೀತಾ ಹುಡೇದಾ ಹಾಗೂ ಸಾಲೂರು ಮಠದ ಶಾಂತಮಲ್ಲಿಕಾರ್ಜುನ ಸ್ವಾಮೀಜಿ ಸಮ್ಮುಖದಲ್ಲಿ ನಡೆದ ಹುಂಡಿ ಎಣಿಕೆ ಕಾರ್ಯ ನಡೆದಿದೆ. ಹಾಗೆಯೇ ಈ ವೇಳೆ ಬ್ಯಾಂಕ್ ಆಫ್ ಬರೋಡ ನೌಕರರು ಹಾಗೂ ಪ್ರಾಧಿಕಾರದ ಸಿಬ್ಬಂದಿಗಳು ಭಾಗಿಯಾಗಿದ್ದರು.

ಸಿಸಿ ಕ್ಯಾಮರಾ ಕಣ್ಗಾವಲಿನಲ್ಲಿ ಬೆಳಗ್ಗೆ 8 ರಿಂದ ಸಂಜೆಯವರೆಗೂ ಹುಂಡಿ ಎಣಿಕೆ ಕಾರ್ಯ ನಡೆದಿದ್ದು, ಹುಂಡಿಯಲ್ಲಿ 1,56,28,122 ರೂಪಾಯಿ ನಗದು, 30 ಗ್ರಾಂ ಚಿನ್ನ ಹಾಗೂ 1 ಕೆ.ಜಿ 26 ಗ್ರಾಂ ಬೆಳ್ಳಿ ಸಂಗ್ರಹವಾಗಿದೆ ಎಂದು ತಿಳಿದುಬಂದಿದೆ.
ಅದರಲ್ಲೂ ಈ ಬಾರಿ ಉಚಿತ ಬಸ್ ಪ್ರಯಾಣದ ಹಿನ್ನೆಲೆ ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯರು ಮಲೆಮಹದೇಶ್ವ ಬೆಟ್ಟಕ್ಕೆ ಭೇಟಿ ನಿಡಿದ್ದಾರೆ.ಜೊತೆಗೆ ಹುಣ್ಣಿಮೆ, ಭೀಮನ ಅಮಾವಾಸ್ಯೆ ಹಾಗೂ ಸರ್ಕಾರಿ ರಜಾ ದಿನಗಳಿಂದ ಭಕ್ತ ಸಾಗರರವೇ ಹರಿದು ಬಂದಿದ್ದು, ಈ ವೇಳೆ ಇಷ್ಟಾರ್ಥ ಸಿದ್ಧಿಗಾಗಿ ಹರಕೆಯ ರೂಪದಲ್ಲಿ ಹಣ, ಚಿನ್ನ ಹಾಗೂ ಬೆಳ್ಳಿ ಪದಾರ್ಥಗಳನ್ನು ಹುಂಡಿಗೆ ಹಾಕಿದ್ದಾರೆ. ಇದರಿಂದ ಹುಂಡಿಯಲ್ಲಿ ಇಷ್ಟು ಪ್ರಮಾಣದಲ್ಲಿ ಕಾಣಿಕೆ ಸಂಗ್ರಹವಾಗಿದೆ ಎನ್ನಲಾಗಿದೆ.
2.53 ಕೋಟಿ ರೂಪಾಯಿ ಸಂಗ್ರಹ
ಹಾಗೆಯೆ ಮೇ ತಿಂಗಳಿನಲ್ಲಿ ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟದ ಮಾದಪ್ಪನ ಸನ್ನಿಧಿಯಲ್ಲಿ ನಡೆದ ಹುಂಡಿಗಳ ಎಣಿಕೆ ಕಾರ್ಯ ನಡೆದಿದ್ದು, ಹುಂಡಿಯಲ್ಲಿ 2.53 ಕೋಟಿ ರೂಪಾಯಿ ಸಂಗ್ರಹವಾಗಿದೆ ಎನ್ನುವ ಮಾಹಿತಿ ಲಭ್ಯವಾಗಿತ್ತು.
ಮಲೆಮಹದೇಶ್ವರ ಬೆಟ್ಟದ ಬಸ್ ನಿಲ್ದಾಣದ ಬಳಿಯ ವಾಣಿಜ್ಯ ಸಂಕೀರ್ಣದಲ್ಲಿ ಸಿಸಿ ಕ್ಯಾಮೆರಾ ಕಣ್ಗಾವಲು ಹಾಗೂ ಪೊಲೀಸ್ ಬಂದೋಬಸ್ತ್‌ನಲ್ಲಿ ಹುಂಡಿ ಎಣಿಕೆ ಕಾರ್ಯವನ್ನು ಪ್ರಾರಂಭ ಮಾಡಲಾಗಿತ್ತು.
ಅಮಾವಾಸ್ಯೆ, ವಿಶೇಷ ದಿನಗಳಲ್ಲಿ ಹಾಗೂ ಸರ್ಕಾರಿ ರಜಾ ದಿನಗಳಂದು ರಾಜ್ಯದ ವಿವಿಧೆಡೆಯಿಂದ ಸಾವಿರರು ಜನರು ಮಾದಪ್ಪನ ದರ್ಶನಕ್ಕೆ ಆಗಮಿಸಿದ್ದರು. ಅಲ್ಲದೆ ವಿದ್ಯಾರ್ಥಿಗಳಿಗೆ ಬೇಸಿಗೆ ರಜೆ ಹಾಗೂ ವಿಧಾನಸಭಾ ಚುನಾವಣೆಯಿದ್ದ ಹಿನ್ನೆಲೆ ಕಳೆದ 32 ದಿನಗಳ ಅವಧಿಯಲ್ಲಿ 2.53,58,519 ರೂಪಾಯಿ ಹಣ, 65 ಗ್ರಾಂ ಚಿನ್ನ ಹಾಗೂ 3.358 ಗ್ರಾಂ ಬೆಳ್ಳಿ ಸಂಗ್ರಹವಾಗಿದೆ ಎಂದು ತಿಳಿದುಬಂದಿತ್ತು.
ಮಲೆ ಮಹದೇಶ್ವರಸ್ವಾಮಿ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಕಾತ್ಯಾಯಿನಿ ದೇವಿ, ಉಪಕಾರ್ಯದರ್ಶಿ ಬಸವರಾಜು, ದ್ವಿತೀಯ ದರ್ಜೆ ಸಹಾಯಕ ಸರಗೂರು ಮಹದೇವಸ್ವಾಮಿ ಬ್ಯಾಂಕ್ ಆಫ್ ಬರೋಡದ ವ್ಯವಸ್ಥಾಪಕರು, ಮಲೆಮಹದೇಶ್ವರ ಬೆಟ್ಟದ ಪೊಲೀಸ್ ಸಿಬ್ಬಂದಿಗಳು ಸೇರಿದಂತೆ ಪ್ರಾಧಿಕಾರದ ಸಿಬ್ಬಂದಿ ವರ್ಗದವರು ಹಾಜರಿದ್ದರು.
-
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
IPL ಐಪಿಎಲ್ ಫ್ರೀ ಟಿಕೆಟ್ ವಿವಾದ: ವೆಂಕಟೇಶ್ ಪ್ರಸಾದ್ – ಸಿದ್ದರಾಮಯ್ಯ ಭೇಟಿ ಫೋಟೋಗೆ ತೇಜಸ್ವಿ ಸೂರ್ಯ ಕೆಂಡ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು -
1ನೇ ತರಗತಿ ದಾಖಲಾತಿ: 6 ವರ್ಷ ತುಂಬಿರಬೇಕು ಎಂಬ ನಿಯಮವನ್ನು ಕೊಂಚ ಸಡಿಲಿಕೆ ಮಾಡಿದ ಸರ್ಕಾರ -
ಮಾ.30ರಂದು ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ದಿಢೀರ್ ಮುಂದೂಡಿಕೆ: ಕಾರಣವೇನು? -
ಬೆಂಗಳೂರು-ಅರಸೀಕೆರೆ ನಡುವೆ ನೂತನ ಮೆಮು ರೈಲು ಸೇವೆ: ಈಡೇರಿತು ಪ್ರಯಾಣಿಕರ ಬಹುದಿನದ ಬೇಡಿಕೆ -
Viral Videlo: 2 ಗಂಟೆ ಸ್ಟ್ಯಾಚ್ಯೂ ರೀತಿ ನಿಂತ ಯುವಕ ವಿಡಿಯೋ ವೈರಲ್, ಭಾರತಕ್ಕೂ ಬಂತಾ ಅಮೆರಿಕದ ಜಾಂಬಿ ಡ್ರಗ್ಸ್ -
ಉದ್ಯೋಗ ಸಂದರ್ಶನ ಮಾಡಲು ಹೋದ CEOಗೆ ಬೆವರಿಳಿಸಿದ ಅಭ್ಯರ್ಥಿ, Viral ಆಯ್ತು ವಿಚಿತ್ರ ಕಥೆ -
Summer Camp: ನಟನ ಮೈಸೂರು ಸಂಸ್ಥೆಯಿಂದ ಮಕ್ಕಳಿಗೆ ಬೇಸಿಗೆ ಶಿಬಿರ 'ರಜಾಮಜಾ' ಆಯೋಜನೆ -
115 ರೂಪಾಯಿಯ ಪೊಂಗಲ್ಗೆ 273 ರೂ. ಬಿಲ್: ಸ್ವಿಗ್ಗಿ ವಿರುದ್ಧ ಸುಮಲತಾ ಅಂಬರೀಷ್ ಆಕ್ರೋಶ -
Sri Rama Navami 2026: ಶ್ರೀ ರಾಮನವಮಿ; ಧರ್ಮದ ಜಯದ ದಿವ್ಯ ಸಂದೇಶ












Click it and Unblock the Notifications