ದಾಖಲೆ ಇಲ್ಲದೆ ಸಾಗಿಸುತ್ತಿದ್ದ ₹1.57 ಕೋಟಿ ಮೌಲ್ಯದ ಚಿನ್ನಾಭರಣ ವಶ

ಲೋಕಸಭಾ ಸಾರ್ವತ್ರಿಕ ಚುನಾವಣೆ-2024ರ ಸಂಬಂಧ ಹನೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಸತ್ತೇಗಾಲ ಚೆಕ್‌ ಪೋಸ್ಟ್ ನಲ್ಲಿ ಗುರುವಾರ ದಾಖಲೆ ಇಲ್ಲದೆ ಸಾಗಾಣಿಕೆ ಮಾಡುತ್ತಿದ್ದ 1,57,87,000 ರೂ. ಮೌಲ್ಯದ 2 ಕೆ.ಜಿ. 170 ಗ್ರಾಂ ಚಿನ್ನಾಭರಣಗಳನ್ನು ಎಫ್‌ಎಸ್‌ಟಿ ತಂಡದ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.

ಸತ್ತೇಗಾಲ ಚೆಕ್‌ ಪೋಸ್ಟ್ ನಲ್ಲಿ ಗುರುವಾರ ಬೆಳಿಗ್ಗೆ10.45 ಗಂಟೆ ಸಮಯದಲ್ಲಿ ಬೆಂಗಳೂರಿನಿಂದ ಕೊಳ್ಳೆಗಾಲಕ್ಕೆ ಬರುತ್ತಿದ್ದ ಕೆಎ-17 ಜಡ್-9447 ಸಂಖ್ಯೆಯ ಹುಂಡೈ ವೆನ್ಯೂ (ಕಾರು) ವಾಹನದಲ್ಲಿ ದಾಖಲೆಗಳಿಲ್ಲದೇ ಸಾಗಾಣಿಕೆ ಮಾಡುತ್ತಿದ್ದ ಚಿನ್ನಾಭರಣಗಳನ್ನು ಕಾರ್ತಿಕ್ ಮತ್ತು ಚಿರಾಂತ್ ಎಂಬುವವರಿಂದ ಎಫ್ಎಸ್‌ಟಿ ತಂಡದ ಅಧಿಕಾರಿ ಎಂ. ರವಿಶಂಕರ್ ಅವರು ಜಪ್ತಿ ಮಾಡಿದ್ದಾರೆ.

1 57 Crore Worth of Gold Jewelry Seized at Sattegala Checkpost

ಚಿನ್ನಾಭರಣ ಸಾಗಣೆ ಮಾಡುತ್ತಿದ್ದ ಬಗ್ಗೆ ವಿಚಾರಣೆ ಮಾಡಿದ ವೇಳೆ ಸರಿಯಾದ ಉತ್ತರ ದೊರೆಯದ ಹಿನ್ನೆಲೆಯಲ್ಲಿ ಚಿನ್ನವನ್ನು ವಶಕ್ಕೆ ಪಡೆದು, ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಆದಾಯ ತೆರಿಗೆ ಇಲಾಖೆಯ ಅನ್ವೇಷಣೆ ವಿಭಾಗದ ಸಹಾಯಕ ನಿರ್ದೇಶಕರಾದ ಆರ್. ರಂಗನಾಥ್, ಆದಾಯ ತೆರಿಗೆ ಇಲಾಖೆ ಅಧಿಕಾರಿಗಳಾದ ಜಿ. ರಘು, ಜಿ. ದಿವಾಕರ್ ಅವರಿಂದ ತನಿಖೆ ಹಾಗೂ ಪರಿಶೀಲನಾ ಕಾರ್ಯ ಪ್ರಗತಿಯಲ್ಲಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿಗಳಾದ ಶಿಲ್ಪಾ ನಾಗ್ ಮಾಹಿತಿ ನೀಡಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+