ಚಾಮರಾಜನಗರ: 6 ಕೋಟಿ ರೂಪಾಯಿ ವೆಚ್ಚದಲ್ಲಿ ಬೃಹತ್ ಬುದ್ದನ ಪ್ರತಿಮೆ ನಿರ್ಮಾಣ
ಚಾಮರಾಜನಗರ, ನವೆಂಬರ್ 09: ಸುತ್ತಲೂ ಹಚ್ಚ ಹಸಿರಿನಿಂದ ಕೂಡಿದ ಅರಣ್ಯ ಸಂಪತ್ತು, ಎರಡು ಹುಲಿ ಸಂರಕ್ಷಿತ ಪ್ರದೇಶದ ನಡುವೆ ಇರುವ ಪ್ರಾಕೃತಿಕ ಚೆಲುವಿನ ಪ್ರದೇಶದಲ್ಲಿ 6 ಕೋಟಿ ರೂಪಾಯಿ ವೆಚ್ಚದಲ್ಲಿ 113 ಅಡಿ ಎತ್ತರದ ಬೃಹತ್ ಬುದ್ದನ ವಿಗ್ರಹ ನಿರ್ಮಾಣವಾಗುತ್ತಿದೆ.
ಕರ್ನಾಟಕ ತಮಿಳುನಾಡು ನಡುವೆ ಇರುವ ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಒಡೆಯರಪಾಳ್ಯ ಸಮೀಪವಿರುವ ಟಿಬೆಟಿಯನ್ನರ ನಿರಾಶ್ರಿತರ ಶಿಬಿರ, ಬಿಳಿಗಿರಿರಂಗನಾಥ ಹುಲಿ ಸಂರಕ್ಷಿತ ಪ್ರದೇಶ ಹಾಗೂ ತಮಿಳುನಾಡಿನ ಸತ್ಯಮಂಗಲಂ ಹುಲಿ ಸಂರಕ್ಷಿತ ಪ್ರದೇಶಕ್ಕೆ ಹೊಂದಿಕೊಂಡಂತೆ ಇದ್ದು, ಉಭಯ ರಾಜ್ಯಗಳನ್ನು ಬೆಸೆಯುವ ಅರಣ್ಯವಾಗಿದೆ.

ಒಡೆಯರ್ ಪಾಳ್ಯದ ಟಿಬೇಟಿಯನ್ ಶಿಬಿರದಲ್ಲಿ ಟಿಬೆಟಿಯನ್ ಸಮುದಾಯದವರೇ 113 ಅಡಿ ಎತ್ತರದ ಬೃಹತ್ ಎತ್ತರದ ಧ್ಯಾನಸ್ಥ ಹಸನ್ಮುಖಿ ಬುದ್ಧನ ಪ್ರತಿಮೆ ನಿರ್ಮಾಣಕ್ಕೆ ಮುಂದಾಗಿದ್ದು, ಕಾಮಗಾರಿ ಭರದಿಂದ ಸಾಗುತ್ತಿದೆ. ಪ್ರತಿಮೆ ಪ್ರತಿಷ್ಠಾಪಿಸುವ ಸಲುವಾಗಿ ಈಗಾಗಲೇ ಕಮಲದ ಹೂವಿನ ಆಕಾರದ ವೇದಿಕೆ ನಿರ್ಮಾಣ ಮಾಡಲಾಗಿದೆ. ಪ್ರಾಥಮಿಕ ಹಂತದ ಕಾಮಗಾರಿ ಮುಗಿಯುತ್ತಿದ್ದಂತೆ ಪಕ್ಕದ ಭೂತಾನ್ ದೇಶದಲ್ಲಿ ತಯಾರಿಸಲಾಗಿರುವ ಹಸನ್ಮುಖಿ ಧ್ಯಾನಸ್ಥ ಬುದ್ಧನ ಪ್ರತಿಮೆಯನ್ನು ತಂದು ಪ್ರತಿಷ್ಠಾಪನೆ ಮಾಡಲಾಗುತ್ತಿದೆ.
ಬುದ್ಧನ ಬೃಹತ್ ಮೂರ್ತಿಯ ಪ್ರತಿಷ್ಠಾಪನೆಗೆ ಕಳೆದ ವರ್ಷದ ಹಿಂದೆಯೇ ಭೂಮಿಪೂಜೆ ನೆರವೇರಿಸಲಾಗಿದ್ದು ಅಂದಿನಿಂದ ನಿರಂತರವಾಗಿ ಕಾಮಗಾರಿ ಭರದಿಂದ ಸಾಗಿದೆ. ಭೂತಾನ್ ದೇಶದಿಂದ ಪ್ರತಿಮೆಯನ್ನು ಇಲ್ಲಿಗೆ ತರಿಸಿಕೊಳ್ಳುವ ಕುರಿತು ಸಿದ್ಧತೆಗಳು ನಡೆಯುತ್ತಿದೆ. ಮುಂದಿನ ಎರಡು ವರ್ಷದೊಳಗೆ ಪ್ರತಿಷ್ಠಾಪನಾ ಕಾರ್ಯ ಸಂಪೂರ್ಣವಾಗಿ ಮುಗಿಯಲಿದೆ.
ಟಿಬೆಟ್ ನಿಂದ ಕಳೆದ ಐದು ದಶಕಗಳ ಹಿಂದೆ ನಿರಾಶ್ರಿತರಾಗಿ ಭಾರತಕ್ಕೆ ಬಂದವರಿಗೆ ಕರ್ನಾಟಕದ ರಾಜ್ಯದ ಮುಂಡಗೋಡು, ಬೈಲುಗುಪ್ಪೆ ಹಾಗೂ ಒಡೆಯರಪಾಳ್ಯ ಬಳಿ ಸ್ಥಳ ನೀಡಿ ಶಿಬಿರ ನಿರ್ಮಿಸಿಕೊಡಲಾಯಿತು. ಅಂದಿನಿಂದ ಟಿಬೆಟಿಯನ್ ಸಂಸ್ಕೃತಿಯ ಜತೆಗೆ ಆಯಾ ಜಿಲ್ಲೆಗಳ ಆಚಾರ ವಿಚಾರಗಳಲ್ಲೂ ಭಾಗಿಯಾಗುವ ಮೂಲಕ ಟಿಬೆಟನ್ನರು ಸ್ಥಳೀಯರೊಂದಿಗೆ ಸೌರ್ಹಾರ್ದಯುವಾಗಿ ಬದುಕು ಸಾಗಿಸುತ್ತಿದ್ದಾರೆ.
ಚಾಮರಾಜನಗರ ಜಿಲ್ಲೆಯ ಒಡೆಯರ್ ಪಾಳ್ಯ ಸಮೀಪದ ಟಿಬೇಟಿಯನ್ ಶಿಬಿರದಲ್ಲಿರುವ ಬುದ್ಧ ಮಂದಿರದ ಬಳಿ ಬುದ್ಧನ ಮೂರ್ತಿಯನ್ನು ಪ್ರತಿಷ್ಠಾಪನೆ ಮಾಡಲಾಗುತ್ತಿದೆ. ತಾಮ್ರದಿಂದ ಪ್ರತಿಮೆಯನ್ನು ತಯಾರಿಸಿ ಬಳಿಕ ಚಿನ್ನದ ಬಣ್ಣದ ಲೇಪನ ಮಾಡಲಾಗುತ್ತದೆ. ಪ್ರತಿಮೆಯ ಭಾಗಗಳನ್ನು ತಯಾರಿಸಿ, ಇಲ್ಲಿಗೆ ತಂದು ಜೋಡಿಸಲಾಗುತ್ತದೆ. ಪ್ರತಿಮೆ ನಿರ್ಮಾಣಕ್ಕೆ ಅಂದಾಜು 6 ಕೋಟಿ ವೆಚ್ಚವಾಗಲಿದೆ ಎನ್ನಲಾಗುತ್ತಿದೆ.
ಒಡೆಯರಪಾಳ್ಯ ಬಳಿ ಇರುವ ನಿರಾಶ್ರಿತರ ಶಿಬಿರವು ಮೈಸೂರು ಜಿಲ್ಲೆಯ ಬೈಲುಗುಪ್ಪೆ, ಮುಂಡಗೋಡು ಮಾದರಿಯಲ್ಲಿ ಪ್ರವಾಸಿಸ್ಥಳವಾಗಿ ರೂಪುಗೊಂಡಿದೆ. ತಮಿಳುನಾಡಿನ ಸತ್ಯಮಂಗಲಂ ಹುಲಿ ಸಂರಕ್ಷಿತ ಪ್ರದೇಶ ಹಾಗೂ ಚಾಮರಾಜನಗರ ಜಿಲ್ಲೆಯ ಬಿಳಿಗಿರಿರಂಗನಾಥ ಸ್ವಾಮಿ ಹುಲಿರಕ್ಷಿತಾಣ್ಯಕ್ಕೆ ಹೊಂದಿಕೊಂಡಿರುವ ಶಿಬಿರವು ಸುತ್ತಲೂ ಬೆಟ್ಟಗುಡ್ಡಗಳಿಂದ ಆವೃತವಾಗಿದ್ದು, ಸ್ವಚಂದ ಪರಿಸರದ ನಡುವೆ ಕಂಗೊಳಿಸುತ್ತಿದೆ.
ಚಾಮರಾಜನಗರ ಜಿಲ್ಲೆ ಮಾತ್ರವಲ್ಲದೆ ಹೊರ ಜಿಲ್ಲೆಗಳ ಜನರನ್ನೂ ಇದು ಆಕರ್ಷಿಸುತ್ತಿದೆ. ಇಲ್ಲಿರುವ ಬುದ್ಧ ಮಂದಿರಗಳಲ್ಲಿ ಬಾಲ ಬೌದ್ಧ ಬಿಕ್ಕುಗಳು ಗಮನ ಸೆಳೆಯುತ್ತಾರೆ. ಒಡೆಯರ ಪಾಳ್ಯದಲ್ಲಿ ಐದು ಬೌದ್ಧ ದೇವಾಲಯಗಳಿದ್ದು ಪ್ರತಿ ಮಂದಿರದಲ್ಲೂ ಬುದ್ಧನ ಮೂರ್ತಿಗಳಿವೆ. ಇಲ್ಲಿಗೆ ಬರುವ ಪ್ರವಾಸಿಗರು ಬುದ್ಧನ ಮೂರ್ತಿಗಳ ಮುಂದೆ ಫೋಟೊ ಕ್ಲಿಕ್ಕಿಸಿಕೊಳ್ಳುತ್ತಾರೆ.
ವಾರಾಂತ್ಯದಲ್ಲಿ ಕುಟುಂಬ ಸಮೇತ ಭೇಟಿ ನೀಡುವ ಪ್ರವಾಸಿಗರು ದಿನವಿಡಿ ಶಿಬಿರದಲ್ಲಿರುವ ಬುದ್ಧ ಮಂದಿರಗಳಿಗೆ ಭೇಟಿ ನೀಡುತ್ತಾರೆ. ಒಂದು ದಿನದ ಪ್ರವಾಸಕ್ಕೆ ಇದು ಯೋಗ್ಯವಾದ ಸ್ಥಳ ಎನಿಸಿದೆ. ದಿನದಿಂದ ದಿನಕ್ಕೆ ಇಲ್ಲಿಗೆ ಆಗಮಿಸುತ್ತಿರುವವರ ಪ್ರವಾಸಿಗರ ಸಂಖ್ಯೆ ಏರಿಕೆಯಾಗುತ್ತಲೇ ಇದೆ. ಈಗಾಗಲೇ ಪ್ರವಾಸಿ ತಾಣವಾಗಿ ಹೊರಹೊಮ್ಮುತ್ತಿರುವ ಈ ಶಿಬಿರದಲ್ಲಿ ಬುದ್ಧನ ಮೂರ್ತಿ ಪ್ರತಿಷ್ಠಾಪನೆಯಾದರೆ ಪ್ರವಾಸಿಗರ ಸಂಖ್ಯೆ ಇನ್ನಷ್ಟು ಹೆಚ್ಚಲಿದೆ. ರಾಜ್ಯದಲ್ಲೇ ಅತಿ ಎತ್ತರದ ಬುದ್ಧನ ಪ್ರತಿಮೆ ಹೊಂದಿರುವ ಸ್ಥಳ ಎಂಬ ಹೆಗ್ಗಳಿಕೆಗೂ ಒಡೆಯರಪಾಳ್ಯದ ಶಿಬಿರ ಪಾತ್ರವಾಗಲಿದೆ.
-
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
ಮಾರ್ಚ್ 31ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Gold Price: ದಿಢೀರ್ ಏರಿಕೆ ಕಂಡ ಚಿನ್ನದ ದರ: ಪ್ರತಿ ಗ್ರಾಂಗೆ 14,929 ರೂಪಾಯಿ, ಕೆ.ಜಿಗೆ 2.5 ಲಕ್ಷ ರೂ. ತಲುಪಿದ ಬೆಳ್ಳಿ -
Kannada: ಕರ್ನಾಟಕದಲ್ಲಿರುವ ಬ್ಯಾಂಕ್ಗಳಲ್ಲಿ ಸ್ಪಷ್ಟ ಕನ್ನಡ; ತುಳು, ಕೊಂಕಣಿ ಭಾಷೆಯ ಕಲರವ ಈಗ ಉಳಿದಿಲ್ಲ: ಕವಿರಾಜ್












Click it and Unblock the Notifications