ಚಾಮರಾಜನಗರ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಚಾಮರಾಜನಗರದ 24 ಸಾವುಗಳಿಗೆ ಆಕ್ಸಿಜನ್ ಕೊರತೆಯೇ ಕಾರಣ; ಮೈಸೂರು ಡಿಸಿಗೆ ಕ್ಲೀನ್‌ಚಿಟ್

By ಮೈಸೂರು ಪ್ರತಿನಿಧಿ
|
Google Oneindia Kannada News

ಚಾಮರಾಜನಗರ, ಮೇ 13: ಚಾಮರಾಜನಗರ ಜಿಲ್ಲಾ ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ (ಸಿಐಎಂಎಸ್‌) ಕಳೆದ ಮೇ 2ರ ಮಧ್ಯರಾತ್ರಿ ಆಕ್ಸಿಜನ್ ಕೊರತೆಯಿಂದ ಸಂಭವಿಸಿದೆ ಎಂದು ಹೇಳಲಾದ 24 ಜನರ ಸಾವಿಗೆ ಆಮ್ಲಜನಕ ಕೊರತೆಯೇ ಕಾರಣ ಎಂದು ಹೈಕೋರ್ಟ್‌ ನೇಮಿಸಿದ್ದ ಮೂವರು ಸದಸ್ಯರ ಸಮಿತಿ ಧೃಢಪಡಿಸಿದೆ ಎಂದು ತಿಳಿದುಬಂದಿದೆ. ಈ ಸಮಿತಿಯು ಹೈಕೋರ್ಟಿಗೆ ತನ್ನ ವರದಿಯನ್ನೂ ಸಲ್ಲಿಸಿದೆ.

'ಮೇ 2ರಂದು ರಾತ್ರಿ 11 ರಿಂದ ಮೇ 3ರ ಬೆಳಿಗ್ಗೆ ತನಕ ‌ಆಸ್ಪತ್ರೆಯಲ್ಲಿ ಆಮ್ಲಜನಕವೇ ಲಭ್ಯವಿರಲಿಲ್ಲ' ಎಂದು ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಎ.ಎನ್.ವೇಣುಗೋಪಾಲಗೌಡ ನೇತೃತ್ವದ ಕಾನೂನು ಸೇವೆಗಳ ಪ್ರಾಧಿಕಾರದ ಸಮಿತಿಯು ಪತ್ತೆ ಹಚ್ಚಿದೆ. ಅಲ್ಲದೆ ಮೃತಪಟ್ಟವರ ಕುಟುಂಬಗಳಿಗೆ ಸೂಕ್ತ ಪರಿಹಾರ ನೀಡಬೇಕು ಎಂದು ಸಮಿತಿ ಶಿಫಾರಸು ಮಾಡಿದೆ. 24 ವ್ಯಕ್ತಿಗಳಿಗೆ ಸಂಬಂಧಿಸಿದಂತೆ ಜಿಲ್ಲಾ ಶಸ್ತ್ರಚಿಕಿತ್ಸಕ ಮತ್ತು ಇತರ ನಾಲ್ವರನ್ನು ಒಳಗೊಂಡ ಸಮಿತಿ ನಡೆಸಿದ ವರದಿಯನ್ನೂ ಸಮಿತಿ ವಿಶ್ಲೇಷಿಸಿದೆ.

ಆಮ್ಲಜನಕದ ಕೊರತೆಯಿಂದ ಮೂವರು, ಮೆದುಳಿಗೆ ಆದ ಗಾಯದಿಂದ 7 ಮಂದಿ ಮತ್ತು ಕೋವಿಡ್ ಕಾರಣದಿಂದ 14 ಮಂದಿ ಮೃತಪಟ್ಟಿದ್ದಾರೆ ಎಂದು ಆ ಸಮಿತಿಯ ವರದಿ ಹೇಳಿತ್ತು. ಗಂಭೀರ ಸಮಯದಲ್ಲಿ ಅವರಿಗೆ ಆಮ್ಲಜನಕದ ಅಗತ್ಯವಿತ್ತು. ಆದರೆ, ಆಸ್ಪತ್ರೆಯಲ್ಲಿ ಆಮ್ಲಜನಕ ಪೂರೈಕೆಯೇ ಇರಲಿಲ್ಲ. ಮೃತಪಟ್ಟವರ ಕೇಸ್ ಶೀಟ್‌ಗಳನ್ನು ಗಮನಿಸಿದರೆ ಅವರಿಗೆ ಆಮ್ಲಜನಕದ ಅಭಾವ ಇತ್ತು ಎಂಬುದನ್ನು ಸೂಚಿಸುತ್ತದೆ. ಆಮ್ಲಜನಕ ಕೊರತೆ ಕಾರಣಕ್ಕೆ ಮೆದುಳಿನ ಕೋಶಗಳಿಗೆ ಹಾನಿಯಾಗಿದೆ' ಎಂದು ಹೈಕೋರ್ಟ್‌ ನೇಮಿಸಿದ್ದ ಸಮಿತಿ ಅಭಿಪ್ರಾಯಪಟ್ಟಿದೆ.

Chamarajanagar: 24 Covid-19 Patients Death Due To Shortage Of Oxygen; Highcourt Committee Report

'ಮೈಸೂರಿನಲ್ಲಿನ ಆಮ್ಲಜನಕ ಸಿಲಿಂಡರ್ ಮರುಪೂರಣ ಘಟಕದಿಂದ ಆಸ್ಪತ್ರೆಗೆ ಆಮ್ಲಜನಕ ಸರಬರಾಜು ಮಾಡಿಕೊಳ್ಳುವುದು ಜಿಲ್ಲಾಡಳಿತ ಮತ್ತು ಆಸ್ಪತ್ರೆ ಅಧಿಕಾರಿಗಳ ಜವಾಬ್ದಾರಿ. ಆಸ್ಪತ್ರೆಯ ಆಡಳಿತ ಜಾಗರೂಕರಾಗಿದ್ದರೆ, ಪೂರೈಕೆದಾರರು ಸಮಯೋಚಿತವಾಗಿ ಮರುಪೂರಣಗೊಳಿಸಿದ್ದರೆ ಸಾಕಷ್ಟು ಆಮ್ಲಜನಕ ಸಂಗ್ರಹಿಸಬಹುದಿತ್ತು. ಅದನ್ನು ಮಾಡದೆ ಇರುವುದು ಅಮೂಲ್ಯ ಜೀವಗಳ ಹಾನಿಗೆ ಕಾರಣವಾಗಿದೆ' ಎಂದು ವರದಿ ಹೇಳಿದೆ.

'ಸಂದರ್ಭಕ್ಕೆ ತಕ್ಕಂತೆ ನಾಯಕತ್ವ ಮತ್ತು ಕ್ರಿಯಾಶೀಲತೆ ತೋರಿಸುವಲ್ಲಿ ಚಾಮರಾಜನಗರ ಜಿಲ್ಲಾಧಿಕಾರಿ ವಿಫಲವಾಗಿದ್ದಾರೆ. ಚಾಮರಾಜನಗರಕ್ಕೆ ಆಮ್ಲಜನಕ ಸಾಗಿಸಲು ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ತಡೆ ಒಡ್ಡಿದ್ದಾರೆ ಎಂಬುದಕ್ಕೆ ಯಾವುದೇ ಸಾಕ್ಷ್ಯ ಇಲ್ಲ' ಎಂದು ವರದಿ ಹೇಳಿದೆ.

Chamarajanagar: 24 Covid-19 Patients Death Due To Shortage Of Oxygen; Highcourt Committee Report

Recommended Video

ಕರ್ನಾಟಕದ ಮೇಲೆ ಮೋದಿಗೆ ಲವ್ ಕಡಿಮೆಯಾಗಿದ್ದು ಯಾಕೆ? | Oneindia Kannada

ಮೈಸೂರು ಜಿಲ್ಲಾಧಿಕಾರಿ ವಿರುದ್ಧ ಆರೋಪ ಸಾಬೀತುಪಡಿಸುವ ಯಾವುದೇ ದಾಖಲೆಗಳಿಲ್ಲ. ಚಾಮರಾಜನಗರ ಜಿಲ್ಲೆ ಸೇರಿ ಯಾವುದೇ ಜಿಲ್ಲೆಗೆ ಆಮ್ಲಜನಕ ಪೂರೈಸಲು ರೋಹಿಣಿ ಸಿಂಧೂರಿ ತಡೆದಿದ್ದಾರೆ ಎಂದು ಹೇಳಲು ಯಾವುದೇ ಸಾಕ್ಷ್ಯ ಇಲ್ಲ ಎಂದೂ ಸಮಿತಿ ತಿಳಿಸಿದೆ.

English summary
The three-member panel appointed by the High Court has confirmed that the death of 24 people at the Chamarajanagar District Medical Sciences Institute was the Shortage Of Oxygen cause of death.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X