ಬೆಂಗಳೂರು-ದಿಂಡಿಗಲ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಮೂರುವರೇ ತಾಸು ಟ್ರಾಫಿಕ್‌ ಜಾಂ: ಕಾರಣ ಏನು?

ಚಾಮರಾಜನಗರ, ಸೆಪ್ಟೆಂಬರ್, 22: ಕರ್ನಾಟಕ ಮತ್ತು ತಮಿಳುನಾಡು ಸಂಪರ್ಕ ಕೊಂಡಿಯಾದ ಬೆಂಗಳೂರು- ದಿಂಡಿಗಲ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಟ್ರಾಫಿಕ್ ಜಾಂ ಸಮಸ್ಯೆ ಹೆಚ್ಚಾಗುತ್ತಲೇ ಇದೆ. ಇಂದು (ಸೆಪ್ಟೆಂಬರ್‌ 22) ಈ ಹೆದ್ದಾರಿಯಲ್ಲಿ ಮೂರುವರೆ ತಾಸು ವಾಹನ ಸವಾರರು ಟ್ರಾಫಿಕ್‌ನಲ್ಲಿ ಸಿಲುಕಿ ಪರದಾಡಿದ ಘಟನೆ ನಡೆದಿದೆ. ಇದಕ್ಕೆ ಕಾರಣ ಏನೆಂದು ಇಲ್ಲಿ ತಿಳಿಯಿರಿ.

ಈ ಮಾರ್ಗದಲ್ಲಿ ಅತಿಭಾರ ಹೊತ್ತು ಸಾಗುವ ದೊಡ್ಡ ದೊಡ್ಡ ವಾಹನಗಳು ಸಂಚರಿಸುವಂತಿಲ್ಲ. ಆದರೂ ಕ್ಯಾರೆ ಅಲ್ಲದೆ, ಅತಿಭಾರ ಹೊತ್ತ ವಾಹನಗಳು ಕಳೆದ ಕೆಲವು ದಿನಗಳಿಂದ ಮತ್ತೇ ಸಂಚರಿಸುತ್ತಿವೆ. ಆದ್ದರಿಂದ ಕರ್ನಾಟಕ ಮತ್ತು ತಮಿಳು‌ನಾಡು ಬೆಸೆಯುವ ಚಾಮರಾಜನಗರ ಗಡಿಭಾಗವಾದ ದಿಂಬಂನಲ್ಲಿ ಸುಮಾರು 3 ಗಂಟೆಗಳ ಟ್ರಾಫಿಕ್ ಜಾಂ ಸಂಭವಿಸಿ ವಾಹನ ಸವಾರರು ಪರದಾಡಿದ್ದಾರೆ.

3 Hours traffic jam on Bengaluru-Dindigul National Highway

ಬೆಂಗಳೂರು- ದಿಂಡಿಗಲ್ ರಾಷ್ಟ್ರೀಯ ಹೆದ್ದಾರಿ ಇದಾಗಿದ್ದು, ಕರ್ನಾಟಕ-ತಮಿಳುನಾಡು ಗಡಿಯಲ್ಲಿ ಕಿಲೋ ಮೀಟರ್‌ಗಟ್ಟಲೇ ಟ್ರಾಫಿಕ್ ಜಾಂ ಉಂಟಾಗಿ ವಾಹನ ಸವಾರರು ಪರದಾಡಿದ್ದಾರೆ. ಬೆಂಗಳೂರು-ದಿಂಡಿಗಲ್ ರಾಷ್ಟ್ರೀಯ ಹೆದ್ದಾರಿ ಹಾದುಹೋಗುವ ಚಾಮರಾಜನಗರದ ಗಡಿಯಲ್ಲಿರುವ ಅಸನೂರು, ದಿಂಬಂನಲ್ಲಿ ಅತಿಭಾರ ಹೊತ್ತ ವಾಹನಗಳು ಸಂಚಾರ ಮಾಡುತ್ತಿರುವ ಹಿನ್ನೆಲೆ ಉಳಿದ ವಾಹನಗಳಾದ ಬಸ್, ಕಾರು, ಬೈಕ್ ಸವಾರರು ಗಂಟೆಗಟ್ಟಲೇ ಟ್ರಾಫಿಕ್ ಜಾಂನಲ್ಲಿ ಸಿಲುಕಿ ಪರದಾಡಿದ್ದಾರೆ.

ಆ್ಯಂಬುಲೆನ್ಸ್‌ಗಳು ಸೇರಿದಂತೆ ಹಲವು ವಾಹನಗಳು ಕಿಲೋ ಮೀಟರ್‌ಗಟ್ಟಲೇ ನಿಂತು ಕರ್ನಾಟಕ-ತಮಿಳುನಾಡು ಗಡಿಯಲ್ಲಿ ಫಜೀತಿ ಅನುಭವಿಸಿದ್ದಾರೆ. ಬೆಳಗ್ಗೆ 7 ಗಂಟೆ ವೇಳೆಗೆ ಉಂಟಾದ ಈ ಟ್ರಾಫಿಕ್ ಬೆಳಗ್ಗೆ 10 ಆದರೂ ಹನುಮನ ಬಾಲದಂತಾಗಿದ್ದು, ಭಾನುವಾರದ ಖುಷಿಯಲ್ಲಿ ತೆರಳುತ್ತಿದ್ದ ಜನರ ಮುಖ ಬಾಡಿದಂತಾಗಿತ್ತು.

2 ಗಂಟೆ ಟ್ರಾಫಿಕ್‌ ಜಾಮ್‌: ಇತ್ತೀಚೆಗಷ್ಟೇ ಇದೇ ಹೆದ್ದಾರಿಯಲ್ಲಿ ಸುಮಾರು ಎರಡು ಗಂಟೆಗಳ ಕಾಲ ವಾಹನ ಸವಾರರು ಪರದಾಡಿದ ಘಟನೆ ನಡೆದಿತ್ತು.

ಅತಿಭಾರ ಹೊತ್ತ ವಾಹನಗಳು ಕಳೆದ ಕೆಲವು ದಿನಗಳಿಂದ ಮತ್ತೇ ಸಂಚರಿಸುತ್ತಿರುವ ಹಿನ್ನೆಲೆ ಕರ್ನಾಟಕ ಮತ್ತು ತಮಿಳು‌ನಾಡು ಬೆಸೆಯುವ ಚಾಮರಾಜನಗರ ಗಡಿಭಾಗವಾದ ದಿಂಬಂನಲ್ಲಿ 2 ತಾಸು ಟ್ರಾಫಿಕ್ ಜಾಂ ಆದ ಘಟನೆ ಗುರುವಾರ (ಸೆಪ್ಟೆಂಬರ್‌ 19) ಮಧ್ಯಾಹ್ನ ನಡೆದಿದೆ. ಬೆಂಗಳೂರು-ದಿಂಡಿಗಲ್ ರಾಷ್ಟ್ರೀಯ ಹೆದ್ದಾರಿ ಇದಾಗಿದ್ದು, ಕರ್ನಾಟಕ-ತಮಿಳುನಾಡು ಗಡಿಯಲ್ಲಿ ಕಿಲೋ ಮೀಟರ್‌ಗಟ್ಟಲೇ ಟ್ರಾಫಿಕ್ ಜಾಂ ಉಂಟಾಗಿ ವಾಹನ ಸವಾರರು ಪರದಾಡಿದರು.

ಬೆಂಗಳೂರು-ದಿಂಡಿಗಲ್ ರಾಷ್ಟ್ರೀಯ ಹೆದ್ದಾರಿ ಹಾದುಹೋಗುವ ಚಾಮರಾಜನಗರದ ಗಡಿಯಲ್ಲಿರುವ ಅಸನೂರು, ದಿಂಬಂನಲ್ಲಿ ಅತಿಭಾರ ಹೊತ್ತ ವಾಹನಗಳು ಸಂಚಾರ ಮಾಡಿವೆ. ಈ ಹಿನ್ನೆಲೆ ಉಳಿದ ವಾಹನಗಳಾದ ಬಸ್, ಕಾರು, ಬೈಕ್ ಸವಾರರು ಗಂಟೆಗಟ್ಟಲೇ ಟ್ರಾಫಿಕ್ ಜಾಂನಲ್ಲಿ ಸಿಲುಕಿ ಪರದಾಡಿದರು. ಆ್ಯಂಬುಲೆನ್ಸ್‌ಗಳು ಸೇರಿದಂತೆ ಹಲವು ವಾಹನಗಳು ಕಿಲೋ ಮೀಟರ್‌ಗಟ್ಟಲೇ ನಿಂತು ಕರ್ನಾಟಕ-ತಮಿಳುನಾಡು ಗಡಿಯಲ್ಲಿ ಫಜೀತಿ ಅನುಭವಿಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+