ಹನೂರು: ರೆಸ್ಟೋರೆಂಟ್‌ನಲ್ಲಿ ರಾತ್ರೋರಾತ್ರಿ ₹32,000 ಮೌಲ್ಯದ ಮದ್ಯ ಎಗರಿಸಿದ ಕಳ್ಳರು

ಚಾಮರಾಜನಗರ, ಮೇ, 05: ಶುಕ್ರವಾರ (ಮೇ 11) ತಡರಾತ್ರಿ ಸುಮಾರು 32,000 ರೂಪಾಯಿ ಬೆಲೆ ಬಾಳುವ ಮದ್ಯವನ್ನು ಕಳ್ಳನೋರ್ವ ಕಳವು ಮಾಡಿರುವ ಘಟನೆ ಹನೂರು ಪಟ್ಟಣದ ಅಮೃತ್ ಬಾರ್ ಅಂಡ್ ರೆಸ್ಟೋರೆಂಟ್‌ನಲ್ಲಿ ನಡೆದಿದೆ.

ಹನೂರು ಪಟ್ಟಣದ ಬಂಡಳ್ಳಿ ಮುಖ್ಯ ರಸ್ತೆಯಲ್ಲಿರುವ ಅಮೃತ್ ಬಾರ್ ಅಂಡ್ ರೆಸ್ಟೋರೆಂಟ್‌ನಲ್ಲಿ ಬಾರ್ ಹಿಂಭಾಗದ ಶೆಲ್ಟರ್ ಒಡೆದು ಒಳನುಗ್ಗಿರುವ ಕಳ್ಳ ಸಾವಿರಾರು ರೂಪಾಯಿ ಮೌಲ್ಯದ ವಿವಿಧ ಕಂಪನಿಯ ಮಧ್ಯವನ್ನು ಕಳ್ಳತನ ಮಾಡಿಕೊಂಡು ಹೋಗಿದ್ದಾನೆ.

32 000 worth Liquor was stolen in restaurant overnight at hanur

ಅಮೃತ್ ಬಾರ್ ಅಂಡ್ ರೆಸ್ಟೋರೆಂಟ್‌ನಲ್ಲಿ ಕಳ್ಳತನ ದೂರು ದಾಖಲಾಗುತ್ತಿದ್ದಂತೆ ಪಟ್ಟಣ ಪೊಲೀಸ್ ಠಾಣೆಯ ಸಬ್ ಇನ್ಸ್‌ಪೆಕ್ಟರ್ ರಿಹಾನ ಬೇಗಮ್ ನೇತೃತ್ವದಲ್ಲಿ ಚಾಮರಾಜನಗರ ಜಿಲ್ಲಾ ಕೇಂದ್ರದಿಂದ ಆಗಮಿಸಿದ್ದ ಬೆರಳಚ್ಚು ತಜ್ಞರು ಹಾಗೂ ಶ್ವಾನದಳದ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇನ್ನು ಸಿಸಿ ಟಿವಿಯಲ್ಲಿ ಯುವಕನೋರ್ವ ಓಡಾಡಿ ಬಾಕ್ಸ್ ಹೊತ್ತೊಯ್ಯುವುದು ಸೆರೆಯಾಗಿದೆ.

ಲೋಕಾಯುಕ್ತ ಅಧಿಕಾರಿಗಳ ದಾಳಿ: ಚಿತ್ರದುರ್ಗ ಬಯಲು ಸೀಮೆಯ ಅಭಿವೃದ್ಧಿ ಮಂಡಳಿ ಕಾರ್ಯದರ್ಶಿ ಬಸವರಾಜಪ್ಪ 4,00,000 ರೂಪಾಯಿ ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಅಧಿಕಾರಿಗಳ ಬಲೆಗೆ ಬಿದ್ದಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.

ಗುತ್ತಿಗೆದಾರನ ಕಾಮಗಾರಿಗೆ ಬಿಲ್ ಪಾವತಿ ಮಾಡಲು ಲಂಚಕ್ಕೆ ಬೇಡಿಕೆ ಇಟ್ಟಿದ್ದಾರೆ. ಗುತ್ತಿಗೆದಾರ ಸಿದ್ದನಗೌಡನಿಂದ 4 ಲಕ್ಷ ರೂಪಾಯಿ ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಅಧಿಕಾರಿಗಳು ಬಯಲು ಸೀಮೆಯ ಅಭಿವೃದ್ಧಿ ಮಂಡಳಿ ಕಾರ್ಯದರ್ಶಿಯನ್ನು ಬಲೆಗೆ ಕೆಡವಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ಈ ದಾಳಿಯನ್ನು ಲೋಕಾಯುಕ್ತ ಡಿವೈಎಸ್ಪಿ ಬಸವರಾಜ್ ನೇತೃತ್ವದಲ್ಲಿ ನಡೆಸಲಾಗಿದ್ದು, ಆರೋಪಿ ವಿರುದ್ಧ ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ ಎನ್ನಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+