ಶಿವರಾತ್ರಿ ಜಾತ್ರೆ ಪ್ರಯುಕ್ತ ಮಲೆ ಮಾದಪ್ಪನ ಬೆಟ್ಟದಲ್ಲಿ 4 ಲಕ್ಷ ಲಡ್ಡು ತಯಾರಿ, ಸಿದ್ಧತೆಗಳು ಹೇಗಿವೆ ಗೊತ್ತಾ?
ಚಾಮರಾಜನಗರ, ಮಾರ್ಚ್, 07: ಶಿವನ ಭಕ್ತರ ಪವಿತ್ರ ಹಬ್ಬಗಳಲ್ಲಿ ಒಂದಾದ ಮಹಾಶಿವರಾತ್ರಿ ಹಿನ್ನೆಲೆ ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ಇಂದಿನಿಂದ ಶಿವರಾತ್ರಿ ಜಾತ್ರಾ ಮಹೋತ್ಸವ ಆರಂಭಗೊಂಡಿದ್ದು, ಪ್ರಾಧಿಕಾರ ಸಕಲ ಸಿದ್ಧತೆ ಕೈಗೊಂಡಿದೆ. ಹಾಗೆಯೇ ಬರುವ ಬಕ್ತಾದಿಗಳಿಗೆಂದೇ 4 ಲಕ್ಷ ಲಡ್ಡು ಹುಂಡೆಗಳನ್ನು ತಯಾರು ಮಾಡಲಾಗಿದೆ.
ಈಗಾಗಲೇ ಕನಕಪುರ, ಬೆಂಗಳೂರು, ರಾಮನಗರ, ಚನ್ನಪಟ್ಟಣ ಕಡೆಯಿಂದ ಕಾವೇರಿ ಸಂಗಮವನ್ನು ದಾಟಿ ಲಕ್ಷಾಂತರ ಮಂದಿ ಭಕ್ತರು ಬೆಟ್ಟಕ್ಕೆ ಬಂದಿದ್ದು, ಚಾಮರಾಜನಗರ, ಮಂಡ್ಯ, ಮೈಸೂರು ಭಾಗದಿಂದಲೂ ಭಕ್ತಸಾಗರವೇ ಹರದುಬಂದಿದೆ. ಕಳೆದ ಎರಡು ವರ್ಷಗಳಿಗೆ ಹೋಲಿಕೆ ಮಾಡಿದರೇ ಭಕ್ತರ ಸಂಖ್ಯೆ ಗಣನೀಯವಾಗಿ ಏರಿಕೆ ಕಂಡಿದ್ದು, ಎತ್ತ ನೋಡಿದರೂ ಮಾದಪ್ಪನ ಜಯಘೋಷಗಳು ಮಾರ್ದನಿಸುತ್ತಿದೆ.

4 ಲಕ್ಷ ಲಡ್ಡು ರೆಡಿ: ತಿರುಪತಿಯಂತೇ ಮಲೆ ಮಹದೇಶ್ವರನ ಲಾಡು ಪ್ರಸಾದಕ್ಕೂ ಬೇಡಿಕೆ ಇರುವ ಹಿನ್ನೆಲೆ ಮಲೆಮಹದೇಶ್ವರ ಬೆಟ್ಟ ಪ್ರಾಧಿಕಾರವು ಈಗಾಗಲೇ 4 ಲಕ್ಷ ಲಾಡುಗಳನ್ನು ತಯಾರಿಸಿದ್ದು, ಲಾಡು ಪ್ರಸಾದ ಮಾರಾಟವಾಗುತ್ತಿದ್ದಂತೆ ಪ್ರಸಾದ ತಯಾರಿಸಲು ಎಲ್ಲಾ ಸಿದ್ಧತೆ ಮಾಡಿಕೊಂಡಿದೆ. ಲಾಡು ಪ್ರಸಾದ ಮಾರಾಟ ಈ ಬಾರಿ 5 ಲಕ್ಷ ಮೀರುವ ನಿರೀಕ್ಷೆ ಇದೆ.
ಮಡಕೆ ನೀರು-ಮಾತೃ ಕುಟೀರ: ಬಿಸಿಲಿನ ತಾಪ ಹೆಚ್ಚಾದ ಹಿನ್ನೆಲೆ ಪ್ರಾಧಿಕಾರದ ಕಾರ್ಯದರ್ಶಿ ರಘು ಮೊದಲ ಬಾರಿಗೆ ಕ್ಷೇತ್ರದ ಅಲ್ಲಲ್ಲಿ ಮಡಕೆಗಳನ್ನು ಇರಿಸಿದ್ದು, ಭಕ್ತರು ಈ ಬಾರಿ ಕುಡಿಯುವ ನೀರಿನ ಟ್ಯಾಂಕ್ ಜೊತೆಗೆ ಮಡಕೆ ನೀರನ್ನು ಸೇವಿಸಬಹುದಾಗಿದೆ.
ತಾಯಂದಿರು ಕೂಡ ಸಾವಿರಾರು ಸಂಖ್ಯೆಯಲ್ಲಿ ಬರುವುದರಿಂದ ಯಾವುದೇ ತೊಂದರೆಯಾಗದಂತೆ ತೆಂಗಿನ ಗರಿಗಳನ್ನು ಬಳಸಿಕೊಂಡು ಹಾಲುಣಿಸುವ ಕೇಂದ್ರ ತೆರೆದಿದ್ದು, ಇದಕ್ಕೆ ಮಾತೃ ಕುಟೀರ ಎಂದು ಹೆಸರಿಡಲಾಗಿದೆ. ಇದು ಭಕ್ತರ ಮೆಚ್ಚುಗೆಗೆ ಪಾತ್ರವಾಗಿದೆ.
ನಿರಂತರ ದಾಸೋಹದ ವ್ಯವಸ್ಥೆ: ಬೆಟ್ಟಕ್ಕೆ ಬರುವ ಭಕ್ತಾದಿಗಳಿಗೆ ತಾಳು ಬೆಟ್ಟದಿಂದ ಮಲೆ ಮಾದೇಶ್ವರ ಬೆಟ್ಟದವರೆಗೆ ಟ್ಯಾಂಕ್‌ಗಳಲ್ಲಿ ಕುಡಿಯುವ ನೀರಿನ ಪೂರೈಕೆ ಮಾಡಲು 10 ಕಡೆ ಸೂಕ್ತ ಕ್ರಮ ಕೈಗೊಳ್ಳಲಾಗಿದೆ. ಶ್ರೀ ಕ್ಷೇತ್ರದ ಎರಡು ಕಡೆಗಳಲ್ಲಿ ಶುದ್ಧ ಕುಡಿಯುವ ನೀರಿನ ಘಟಕದಲ್ಲಿ ಜನರಿಗೆ ದಿನದ 24 ಗಂಟೆಯೂ ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಲಾಗಿದೆ.
ದಾಸೋಹ ಭವನದಲ್ಲಿ ವಿಶೇಷ ದಾಸೋಹದ ವ್ಯವಸ್ಥೆ ಕಲ್ಪಿಸಲಾಗಿದ್ದು, ಒಂದು ಬಾರಿಗೆ 2 ಸಾವಿರಕ್ಕೂ ಹೆಚ್ಚು ಜನರು ಪ್ರಸಾದ ಸ್ವೀಕರಿಸಬಹುದಾಗಿದೆ. ಶ್ರೀ ಕ್ಷೇತ್ರಕ್ಕೆ ಬರುವ ಭಕ್ತಾದಿಗಳಿಗೆ ಹಳೆ ದಾಸೋಹದ ಮುಂಭಾಗ ನಿರಂತರ ದಾಸೋಹದ ವ್ಯವಸ್ಥೆಯನ್ನೂ ಸಹ ಮಾಡಲಾಗಿದೆ.
ಮಹಾಶಿವರಾತ್ರಿ ಜಾತ್ರಾ ಮಹೋತ್ಸವಕ್ಕೆ ಕೆಎಸ್ಆರ್‌ಟಿಸಿ ವತಿಯಿಂದ 500 ಬಸ್‌ಗಳ ವ್ಯವಸ್ಥೆ ಮಾಡಲಾಗಿದೆ. ವಾಹನಗಳು ಕೆಟ್ಟ ನಿಂತರೆ ದುರಸ್ತಿ ಪಡಿಸಲು 15 ಜನ ತಾಂತ್ರಿಕ ಸಿಬ್ಬಂದಿಯನ್ನು ಕೂಡ ನೇಮಕ ಮಾಡಲಾಗಿದೆ. ತಾಳು ಬೆಟ್ಟದಲ್ಲಿ ತಾತ್ಕಾಲಿಕ ಆರೋಗ್ಯ ಕೇಂದ್ರವನ್ನು ತೆರೆಯಲಾಗಿದ್ದು, ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಹೆಚ್ಚು ಸಿಬ್ಬಂದಿಯನ್ನು ನೇಮಕ ಮಾಡಿಕೊಳ್ಳಲಾಗಿದೆ.
ತಾಳುಬೆಟ್ಟ ಹಾಗೂ ಶಂಕಮ್ಮನ ನಿಲಯ ಸಮೀಪ 100 ಮೊಬೈಲ್ ಶೌಚಾಲಯವನ್ನು ತಾತ್ಕಾಲಿಕವಾಗಿ ನಿರ್ಮಾಣ ಮಾಡಲಾಗುತ್ತಿದೆ. ದಿನದ 24 ಗಂಟೆಯೂ ಕುಡಿಯುವ ನೀರು ಪೂರೈಕೆ ಮಾಡಲಾಗುತ್ತಿದೆ.
ಇನ್ನು ಮಾರ್ಚ್ 7ರ ಬೆಳಗ್ಗೆ 6 ಗಂಟೆಯಿಂದ ಮಾರ್ಚ್ 12ರ ಬೆಳಗಿನ ಜಾವ 6 ಗಂಟೆಯವರೆಗೆ ಶಿವರಾತ್ರಿ ಜಾತ್ರಾ ಮಹೋತ್ಸವ ಪ್ರಯುಕ್ತ ಮಲೆ ಮಾದೇಶ್ವರ ಬೆಟ್ಟಕ್ಕೆ ತೆರಳಲು ದ್ವಿಚಕ್ರ ವಾಹನ ಸವಾರರಿಗೆ ತೆರಳಲು ನಿರ್ಬಂಧ ಹೇರಲಾಗಿದೆ. ಇದರಿಂದ ಕೌದಳ್ಳಿ ಗ್ರಾಮದ ಖಾಸಗಿ ಲೇಔಟ್‌ನಲ್ಲಿ ಪಾರ್ಕಿಂಗ್ ವ್ಯವಸ್ಥೆ ಕಲ್ಪಿಸಲಾಗಿದೆ. ಪಾರ್ಕಿಂಗ್‌ನಿಂದ ಮಲೆಮಾದೇಶ್ವರ ಬೆಟ್ಟಕ್ಕೆ ತೆರಳಲು 10 ವಿಶೇಷ ಬಸ್‌ಗಳ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ಪ್ರಾಧಿಕಾರದ ಕಾರ್ಯದರ್ಶಿ ರಘು ತಿಳಿಸಿದ್ದಾರೆ.
ಶಿವರಾತ್ರಿ ಜಾತ್ರಾ ಮಹೋತ್ಸವದ ವಿಶೇಷತೆ: ಮಹಾಶಿವರಾತ್ರಿ ಜಾತ್ರಾ ಮಹೋತ್ಸವ ಮಾರ್ಚ್ 7ರಿಂದ ಪ್ರಾರಂಭವಾಗಿದ್ದು, ಮಹದೇಶ್ವರ ಸ್ವಾಮಿಗೆ ವಿಶೇಷ ಪೂಜೆ ನೆರವೇರಿಸಲಾಗಿದೆ. ಮಾರ್ಚ್ 8ರಂದು ಮಹಾಶಿವರಾತ್ರಿ ಪ್ರಯುಕ್ತ ಸ್ವಾಮಿಗೆ ವಿಶೇಷ ಪೂಜೆ ಹಾಗೂ ಎಣ್ಣೆ ಮಜ್ಜನ ಸೇವೆ ವಿವಿಧ ಉತ್ಸವಗಳು ನಡೆಯಲಿವೆ.
ಮಾರ್ಚ್ 9 ರಂದು ಅಮಾವಾಸ್ಯೆ ವಿಶೇಷ ಪೂಜೆ ಹಾಗೂ ಉತ್ಸವಗಳು, 10ರಂದು ಬೆಳಗ್ಗೆ ಮಹಾರಥೋತ್ಸವ ಜರುಗಲಿದ್ದು, ಅದೇ ದಿನ ರಾತ್ರಿ ಅಭಿಷೇಕದ ಪೂಜೆ ಮುಗಿದ ನಂತರ ಕೋಂಡೋತ್ಸವ ನಡೆಯಲಿದೆ. ಒಟ್ಟಿನಲ್ಲಿ ಅಬಾಲವೃದ್ಧರಿಂದ ಲಕ್ಷಾಂತರ ಮಂದಿ ಭಕ್ತರು ಮಾದಪ್ಪನ ದರ್ಶನಕ್ಕೆ ಹರಿದು ಬರುತ್ತಿದ್ದಾರೆ.
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications