ಚಾಮರಾಜನಗರ: ಮೆರವಣಿಗೆಯಲ್ಲಿ ಡ್ಯಾನ್ಸ್ ಮಾಡುವಾಗಲೇ ಹೃದಯಾಘಾತದಿಂದ ವ್ಯಕ್ತಿ ಸಾವು
ಚಾಮರಾಜನಗರ, ಸೆಪ್ಟೆಂಬರ್, 30: ಇತ್ತೀಚಿನ ದಿನಗಳಲ್ಲಿ ಅತೀ ಚಿಕ್ಕ ವಯಸ್ಸಿನವರೇ ಹೆಚ್ಚಿನ ಸಂಖ್ಯೆಯಲ್ಲಿ ಹೃದಯಾಘತದಿಂದ ಮೃತಪಟ್ಟಿರುವ ಉದಾಹರಣೆಗಳಿವೆ. ಹಾಗೆಯೇ ಇದೀಗ ದೇವರ ಮೆರವಣಿಗೆ ವೇಳೆ ಡಿಜೆ ಸೌಂಡ್‌ಗೆ ಕುಣಿಯುತ್ತಿದ್ದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ಚಾಮರಾಜನಗರ ತಾಲೂಕಿನ ಮೂಡ್ನಾಕೂಡು ಗ್ರಾಮದಲ್ಲಿ ಭಾನುವಾರ ಮಧ್ಯಾಹ್ನ ನಡೆದಿದೆ.
ಮೂಡ್ನಾಕೂಡು ಗ್ರಾಮದಲ್ಲಿ ದೇವರ ಉತ್ಸವದ ವೇಳೆ ಡಿಜೆಗೆ ಡ್ಯಾನ್ಸ್ ಮಾಡುತ್ತಿದ್ದ ಬಾಬು(42) ಎಂಬವರು ನೋಡ ನೋಡುತ್ತಲೇ ಹೃದಯಾಘಾತದಿಂದ ಕುಸಿದು ಬಿದ್ದು ಮೃತಪಟ್ಟಿದ್ದಾರೆ.

ಭಾನುವಾರ (ಸೆಪ್ಟೆಂಬರ್ 29) ಗ್ರಾಮದಲ್ಲಿ ಬಸವೇಶ್ವರ ಉತ್ಸವ ನಡೆದಿದ್ದು, ದೇವರ ಉತ್ಸವದ ವೇಳೆ ಡಿಜೆಗೆ ಸ್ನೇಹಿತರ ಜೊತೆ ಡ್ಯಾನ್ಸ್ ಮಾಡುತ್ತಿದ್ದ ಬಾಬು ಹೃದಯಾಘಾತಕ್ಕೊಳಗಾಗಿ ಕುಸಿದು ಬಿದ್ದು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
ಹೃದಯಾಘಾತದಿಂದ ಐಟಿ ಕಂಪನಿ ಉದ್ಯೋಗಿ ಸಾವು: ಐಟಿ ಕಂಪನಿಯೊಂದಲ್ಲಿ ಉದ್ಯೋಗಿಯೊಬ್ಬರು ಶೌಚದಲ್ಲೇ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ನಡೆದಿದೆ. ಹಾಗಾದರೆ ಈ ಘಟನೆ ನಡೆದಿದ್ದು ಎಲ್ಲಿ ಎನ್ನುವ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.
ಕಂಪನಿಗಳಲ್ಲಿ ಉದ್ಯೋಗಿಗಳು ಕೆಲಸದ ಒತ್ತಡದಿಂದ ಆತ್ಮಹತ್ಯೆ ಮಾಡಿಕೊಂಡಿರುವ ಉದಾಹರಣೆಗಳು ಇವೆ. ಇತ್ತೀಚೆಗಷ್ಟೇ ಕಂಪನಿಯೊಂದರಲ್ಲಿ ಉದ್ಯೋಗಿಯೊಬ್ಬರು ತಾವು ಕೆಲಸ ಮಾಡುವ ಕುರ್ಚಿಯ ಮೇಲೆಯೇ ಪ್ರಾಣ ಕಳೆದುಕೊಂಡ ಘಟನೆ ನಡೆದಿತ್ತು. ಇದೀಗ ಶೌಚದಲ್ಲಿ ಐಟಿ ಕಂಪನಿಯ ಉದ್ಯೋಗಿಯೊಬ್ಬರು ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ನಡೆದಿದೆ.
ಐಟಿ ಕಂಪನಿಯೊಂದಲ್ಲಿ ಉದ್ಯೋಗಿಯೊಬ್ಬರು ಶೌಚದಲ್ಲೇ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದ್ದು, ಮೃತರನ್ನು ಎಚ್‌ಸಿಎಲ್ ಟೆಕ್ನಾಲಜೀಸ್‌ನ ಹಿರಿಯ ವಿಶ್ಲೇಷಕ ನಿತಿನ್ ಎಡ್ವಿನ್ ಮೈಕೆಲ್ ಎಂದು ಗುರುತಿಸಲಾಗಿದೆ ಎಂದು ಪೊಲೀಸ್ ಮೂಲಗಳಿಂದ ತಿಳಿದುಬಂದಿದೆ. ಮಿಹಾನ್ ಪ್ರದೇಶದಲ್ಲಿನ ಕಚೇರಿಯಲ್ಲಿ ಈ ಘಟನೆ ನಡೆದಿದೆ ಎನ್ನಲಾಗಿದೆ.
ನಿನ್ನೆ ಸಂಜೆ 7 ಗಂಟೆ ಸುಮಾರಿಗೆ ಮಿಹಾನ್ ಪ್ರದೇಶದಲ್ಲಿನ ಕಂಪನಿಯ ಕಚೇರಿಯಲ್ಲಿ ವಾಶ್‌ರೂಮ್‌ಗೆ ಪ್ರವೇಶಿಸಿದ ಎಡ್ವಿನ್ ಸ್ಪಂದಿಸದೆ ಇರುವುದು ಕಂಡುಬಂದಿದೆ. ತಕ್ಷಣ ಅವರನ್ನು ನಾಗ್ಪುರದ ಆಲ್ ಇಂಡಿಯಾ ಇನ್‌ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸನ್‌ಗೆ ದಾಖಲಿಸಲಾಯಿತು. ವೈದ್ಯರು ಬರುವುದರೊಳಗೆ ಆತ ಸಾವನ್ನಪ್ಪಿದ್ದ ಎಂದು ಅಲ್ಲಿನ ಅಧಿಕಾರಿಗಳಿಂದ ತಿಳಿದುಬಂದಿದೆ.
ಸೋನೆಗಾಂವ್ ಪೊಲೀಸರು ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದು, ಆಕಸ್ಮಿಕ ಸಾವು ಎಂದು ಪ್ರಕರಣ ದಾಖಲಿ ಮಾಡಿಕೊಂಡಿದ್ದಾರೆ. ಪ್ರಾಥಮಿಕ ಶವ ಪರೀಕ್ಷೆಯ ಫಲಿತಾಂಶಗಳು ಹೃದಯ ಸ್ತಂಭನದಿಂದ ಸಾವನ್ನಪ್ಪಿದ್ದಾನೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.












Click it and Unblock the Notifications