ಚಾಮರಾಜನಗರ: ಟಿಪ್ಪರ್ ಹರಿದು ವ್ಯಕ್ತಿ ಸ್ಥಳದಲ್ಲೇ ಸಾವು

Posted By:
Subscribe to Oneindia Kannada

ಚಾಮರಾಜನಗರ, ನವೆಂಬರ್ 14: ಟಿಪ್ಪರ್ ಲಾರಿ ಡಿಕ್ಕಿ ಹೊಡೆದ ಪರಿಣಾಮ ಪಾದಚಾರಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ನ.14 ರಂದು ನಡೆದಿದೆ.

ಮೈಸೂರು-ಹುಣಸೂರು ರಸ್ತೆಯಲ್ಲಿ ಭೀಕರ ಅಪಘಾತ: ಒಂದೇ ಕುಟುಂಬದ ಮೂವರ ಸಾವು

ವೀರನಪುರ ಕಾಲೋನಿಯ ನಿವಾಸಿ ನಿಂಗಯ್ಯ(70) ಘಟನೆಯಲ್ಲಿ ಸಾವನ್ನಪ್ಪಿದ ದುರ್ದೈವಿ. ಈತ ಪಟ್ಟಣದ ವಿಜಯಾಗ್ಯಾಸ್ ಬಳಿ ರಸ್ತೆ ದಾಟುತ್ತಿದ್ದ ವೇಳೆ ಕಲ್ಲು ಸಾಗಾಣಿಕೆ ಮಾಡುತ್ತಿದ್ದ ಟಿಪ್ಪರ್ ಲಾರಿ ವೇಗವಾಗಿ ಬೇಗೂರು ಕಡೆಯಿಂದ ಗುಂಡ್ಲುಪೇಟೆ ಕಡೆಗೆ ಬಂದು ಡಿಕ್ಕಿ ಹೊಡೆದಿದೆ.

A man dies in an accident tin Gundlupet

ಪರಿಣಾಮ ಗಂಭೀರ ಗಾಯಗೊಂಡಿದ್ದ ನಿಂಗಯ್ಯ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಈ ಘಟನೆಗೆ ಟಿಪ್ಪರ್ ಲಾರಿ ಚಾಲಕನ ಅಜಾಗರೂಕತೆ ಮತ್ತು ಅತಿವೇಗವೇ ಕಾರಣ ಎಂದು ಸ್ಥಳದಲ್ಲಿದ್ದವರು ದೂರಿದ್ದಾರೆ.

ಘಟನೆ ಬಳಿಕ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ. ಈ ಸಂಬಂಧ ಲಾರಿಯನ್ನು ವಶಕ್ಕೆ ಪಡೆದಿರುವ ಪಟ್ಟಣ ಠಾಣೆ ಪೊಲೀಸರು ಪ್ರಕರಣವನ್ನು ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
In a tragic accident a man dies when a tipper collides him, while he was crossing a road. The incident took place in Veeranapura colony in Gundlupet, Chamarajanagara on Nov 14th.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ