ಹನೂರು: ಕಂದಾಯ ಇಲಾಖೆ ಅಧಿಕಾರಿಗಳಿಂದ ಜಮೀನು ವಶ: ಮನನೊಂದು ಮಹಿಳೆ ಆತ್ಮಹತ್ಯೆ
ಚಾಮರಾಜನಗರ, ಆಗಸ್ಟ್ 16: ಕಂದಾಯ ಇಲಾಖೆ ಅಧಿಕಾರಿಗಳು ಜಮೀನು ವಶ ಪಡಿಸಿಕೊಂಡ ಹಿನ್ನೆಲೆ ಮನನೊಂದು ಮಹಿಳೆ ನೇಣಿಗೆ ಶರಣಾದ ಘಟನೆ ಚಾಮರಾಜನಗರದಲ್ಲಿ ನಡೆದಿದೆ. ಹಾಗಾದ್ರೆ ಯಾವ ಕಾರಣಕ್ಕೆ ಅಧಿಕಾರಿಗಳು ಜಮೀನು ವಶಪಡಿಸಿಕೊಳ್ಳಲು ನಿರ್ಧರಿಸಿದ್ದರು ಎನ್ನುವ ಮಾಹಿತಿಯನ್ನು ಇಲ್ಲಿ ತಿಳಿಯಿರಿ.
ರಾಜಮ್ಮ (52) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ. ಹನೂರು ತಾಲೂಕಿನ ದೊಡ್ಡಾಲತ್ತೂರಿನಲ್ಲಿ ಈ ಘಟನೆ ನಡೆದಿದೆ. ರಾಜಮ್ಮರಿಗೆ ಪಿತ್ರಾರ್ಜಿತವಾಗಿ 90 ಸೆಂಟ್ಸ್ ಭೂಮಿ ಬಂದಿತ್ತು. ಇದರಲ್ಲೇ ಇವರ ಕುಟುಂಬ ವ್ಯವಸಾಯ ಮಾಡಿಕೊಂಡು ಜೀವನ ನಡೆಸುತಿತ್ತು. ಆದರೆ, ಕಳೆದ ವಾರ ಇದ್ದಕ್ಕಿದ್ದಂತೆ ಕಂದಾಯ ಇಲಾಖೆಯ ಅಧಿಕಾರಿಗಳು 20 ಸೆಂಟ್ಸ್ ಭೂಮಿ ವಶಪಡಿಸಿಕೊಂಡಿದ್ದರು.

ಕಂದಾಯ ಇಲಾಖೆಯ ಅಧಿಕಾರಿಗಳು ಅಂಬೇಡ್ಕರ್ ಭವನ ನಿರ್ಮಾಣಕ್ಕಾಗಿ ಜಮೀನು ವಶಪಡಿಸಿಕೊಂಡಿದ್ದು, ಇದರಿಂದ ಮನನೊಂದ ರಾಜಮ್ಮ ತಮ್ಮ ಜಮೀನಿನಲ್ಲಿ ನೇಣಿಗೆ ಶರಣಾಗಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ಇನ್ನು ಗ್ರಾಮಸ್ಥರು ರಾಜಮ್ಮ ಅವರ ಶವವನ್ನಿಟ್ಟಿ ಪ್ರತಿಭಟನೆ ನಡೆಸುವ ಮೂಲಕ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿದ್ದಾರೆ. ಜಿಲ್ಲಾಧಿಕಾರಿಗಳು ಸ್ಥಳಕ್ಕೆ ಬರುವವರೆಗೂ ನಾವು ಶವ ತೆಗೆಯುವುದಿಲ್ಲ ಎಂದು ಪಟ್ಟುಹಿಡಿದ್ದರು. ಇನ್ನು ಘಟನೆ ಸಂಬಂಧ ರಾಮಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲು ಆಗಿದೆ ಎಂದು ತಿಳಿದುಬಂದಿದೆ.
ಅಧಿಕಾರಿಗಳ ವಿರುದ್ಧ ಗ್ರಾಮಸ್ಥರ ಆಕ್ರೋಶ: ಘಟನೆಯ ಸುದ್ದಿ ತಿಳಿದ ಗ್ರಾಮಸ್ಥರು ಮತ್ತು ಸಂಬಂಧಿಕರು ಸ್ಥಳಕ್ಕೆ ಆಗಮಿಸಿ ಕಂದಾಯ ಇಲಾಖೆಯ ಕ್ರಮದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಜಮೀನಿನಲ್ಲೇ ರಾಜಮ್ಮರ ಶವವನ್ನಿಟ್ಟು ಪ್ರತಿಭಟನೆ ನಡೆಸುವ ಮೂಲಕ ಆಕ್ರೊಶ ವ್ಯಕ್ತಪಡಿಸಿದ್ದಾರೆ. ಅಸಮಾಧಾನ ಹೊರಹಾಕಿದ್ದಾರೆ. ಇನ್ನು ಸ್ಥಳಕ್ಕೆ ಆಗಮಿಸಿದ ಪೊಲೀಸರು ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ ಎಂದು ತಿಳಿದುಬಂದಿದೆ.












Click it and Unblock the Notifications