ಬಹಿರ್ದೆಸೆಗೆ ಹೋದಾಗ ಕಾಲು ಜಾರಿ ಕಬಿನಿ ನಾಲೆಗೆ ಬಿದ್ದು ಯುವಕ ಸಾವು

ಚಾಮರಾಜನಗರ, ಸೆಪ್ಟೆಂಬರ್.06: ಬಹಿರ್ದೆಸೆಗೆಂದು ತೆರಳಿದ್ದ ವೇಳೆ ಕಾಲು ಜಾರಿ ನಾಲೆಗೆ ಬಿದ್ದು ಯುವಕ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಸಂತೇಮರಹಳ್ಳಿ ಸಮೀಪದ ಕಬಿನಿ ನಾಲೆಯಲ್ಲಿ ನಡೆದಿದೆ.

ಯಳಂದೂರು ತಾಲೂಕಿನ ಯರಿಯೂರು ಗ್ರಾಮದ ವಿನೋದ್ ಎಂಬುವವನೇ(18) ಸಾವನ್ನಪ್ಪಿದ ಯುವಕ. ವಿನೋದ್ ಗಾರೆ ಕೆಲಸ ಮಾಡಲು ಯರಿಯೂರಿನಿಂದ ಸಂತೇಮರಹಳ್ಳಿಗೆ ಬಂದಿದ್ದ ಎಂದು ತಿಳಿದು ಬಂದಿದೆ.

ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಶವಕ್ಕಾಗಿ ಹುಡುಕಾಟ ನಡೆಸಿದರು. ಇದೀಗ ಶವ ಸಿಕ್ಕಿದ್ದು ಯಳಂದೂರು ತಾಲೂಕು ಆಸ್ಪತ್ರೆಗೆ ರವಾನಿಸಲಾಗಿದೆ.

A young man died fell in to Kabini fosse

ವ್ಯಕ್ತಿಗೆ ಗಂಭೀರ ಗಾಯ

ಕಾಡಾನೆಯಿಂದ ತಪ್ಪಿಸಿಕೊಳ್ಳುವಾಗ ವ್ಯಕ್ತಿ ಓರ್ವನಿಗೆ ಗಂಭೀರವಾಗಿ ಗಾಯವಾಗಿದೆ. ರೈತ ಮೋಹನ್ ಗೌಡ ಎಂಬುವವರಿಗೆ ಗಂಭೀರ ಗಾಯವಾಗಿದ್ದು, ಮೂಡಿಗೆರೆ ಸರ್ಕಾರಿ ಅಸ್ಪತ್ರೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

ಮೂಡಿಗೆರೆ ತಾಲೂಕಿನ ಕೊಡೆಬೈಲ್ ಗ್ರಾಮದಲ್ಲಿ ಘಟನೆ ಸಂಭವಿಸಿದ್ದು, ರಾತ್ರಿ ಗ್ರಾಮದ ಜಮೀನಿನಲ್ಲಿ ಕಾಣಿಸಿಕೊಂಡ 3 ಕಾಡಾನೆಯಿಂದ ತಪ್ಪಿಸಿಕೊಳ್ಳಲು ಮುಂದಾದಾಗ ಗಂಭೀರವಾಗಿ ಗಾಯವಾಗಿದೆ.

ಬಣಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಕಳೆದ ಒಂದು ತಿಂಗಳಿನಿಂದ ಕಾಡಾನೆಗಳು ಸ್ಥಳದಲ್ಲೇ ಬೀಡುಬಿಟ್ಟಿವೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+