ಹನೂರು: ಆಟೋ-ಬೈಕ್ ನಡುವೆ ಅಪಘಾತ: ಶಾಲಾ ಬಾಲಕ ಸಾವು, ಇಬ್ಬರಿಗೆ ಗಂಭೀರ ಗಾಯ
ಚಾಮರಾಜನಗರ, ನವೆಂಬರ್, 29: ಜಿಲ್ಲೆಯಲ್ಲಿ ಇತ್ತೀಚಿನ ದಿನಗಳಲ್ಲಿ ಅಪಘಾತ ಪ್ರಕರಣದಗಳ ಸಂಖ್ಯೆ ಹೆಚ್ಚಾಗುತ್ತಲೇ ಇದೆ. ಹಾಗೆಯೇ ಇದೀಗ ಶಾಲಾ ಮಕ್ಕಳಿದ್ದ ಆಟೋ ಮತ್ತು ಸ್ಕೂಟಿ ನಡುವೆ ರಸ್ತೆ ಅಪಘಾತವಾಗಿದೆ. ಪರಿಣಾಮ ಶಾಲಾ ವಿದ್ಯಾರ್ಥಿ ಮೃತಪಟ್ಟಿರುವ ಘಟನೆ ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ಕಾಮಗೆರೆಯಲ್ಲಿ ನಡೆದಿದೆ. ಹಾಗಾದರೆ ಈ ಘಟನೆ ನಡೆದಿದ್ದು ಹೇಗೆ ಎನ್ನುವ ಮಾಹಿತಿಯನ್ನು ಇಲ್ಲಿ ತಿಳಿಯಿರಿ.
ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಮಂಗಲ ಗ್ರಾಮದಿಂದ ಕಾಮಗೆರೆ ಗ್ರಾಮದ ಸೆಂಟ್ ಕ್ಲೇವಿಯರ್ ಶಾಲೆಯಲ್ಲಿ 5ನೇ ತರಗತಿ ಓದುತ್ತಿದ್ದ ಬಾಲಕ ವಿಮಲ್ ರಾಜ್ ಮೃತ ದುರ್ದೈವಿ. ಬೈಕ್ ಹಾಗೂ ಆಟೋ ಅಪಘಾತ ನಡೆದು ಆಟೋ ಪಲ್ಟಿಯಾದ ಪರಿಣಾಮ ವಿಮಲ್ ರಾಜ್ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮತ್ತಿಬ್ಬರು ಬಾಲಕರಿಗೆ ಗಂಭೀರ ಗಾಯವಾಗಿ ಕಾಮಗೆರೆಯ ಹೋಲಿಕ್ರಾಸ್ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ.

ಆಟೋ ಪಲ್ಟಿಯಾಗಿ ಶಾಲಾ ಬಾಲಕ ಸಾವನ್ನಪ್ಪಿದ್ದ ಸುದ್ದಿ ತಿಳಿಯುತ್ತಿದ್ದಂತೆ ಪೋಷಕರ ಆಕ್ರಂದನ ಆಸ್ಪತ್ರೆ ಮುಂಭಾಗ ಮುಗಿಲು ಮುಟ್ಟಿತ್ತು. ಸದ್ಯ ಈ ಪ್ರಕರಣಟ ಕೊಳ್ಳೇಗಾಲ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.
ಕಾರುಗಳ ನಡುವೆ ಅಪಘಾತ: ಚಿತ್ರದುರ್ಗದ ಮೇಲೆ ಹಾದುಹೋಗುವ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಅಪಘಾತ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಲಿದ್ದವು. ಇನ್ನು ನವೆಂಬರ್ 25ರಂದು ನಗರದ ಹೊರವಲಯದ ಗುಡ್ಡದ ರಂಗವ್ವನಹಳ್ಳಿ ಬಳಿಯ ರಾಷ್ಟ್ರೀಯ ಹೆದ್ದಾರಿ 13ರಲ್ಲಿ ಇನೋವಾ ಕಾರು-ಫಾರ್ಚುನರ್ ಅಪಘಾತ ಸಂಭವಿಸಿದ್ದು, 8 ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ.
ಚಿತ್ರದುರ್ಗ ತಾಲ್ಲೂಕಿನ ಗುಡ್ಡದ ರಂಗವ್ವಹಳ್ಳಿ ಬಳಿಯ ರಾಷ್ಟ್ರೀಯ ಹೆದ್ದಾರಿ 13ರಲ್ಲಿ ಅಪಘಾತ ಸಂಭವಿಸಿದೆ. ಈ ವೇಳೆ ಕಾರಿನಲ್ಲಿದ್ದ ಒಂದೇ ಕುಟುಂಬದ 8 ಜನ ಗಾಯಗೊಂಡಿದ್ದು, ಅದೃಷ್ಟವಶಾತ್ ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎನ್ನಲಾಗಿದೆ.
ರಾಯಚೂರು ಜಿಲ್ಲೆಯ ಮಂತ್ರಾಲಯ ದೇವರ ದರ್ಶನಕ್ಕೆ ತೆರಳಿ ದರ್ಶನ ಪಡೆದು ವಾಪಾಸ್ ದಾಬಸ್ ಪೇಟೆಗೆ ತೆರಳುತ್ತಿದ್ದ ವೇಳೆ ಚಿತ್ರದುರ್ಗ ಬಳಿ ಅಪಘಾತ ಸಂಭವಿಸಿದೆ. ಗಾಯಗೊಂಡವರನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಚಿತ್ರದುರ್ಗ-ಹೊಸಪೇಟೆ ಹೈವೆಯಲ್ಲಿ ಯೂಟರ್ನ್ ಮಾಡುವಾಗ ಈ ಅಪಘಾತ ಸಂಭವಿಸಿದೆ.
ಫಾರ್ಚುನರ್ ಡಿಕ್ಕಿ ಹೊಡೆದ ರಭಸಕ್ಕೆ ಇನೋವಾ ಕಾರು ಸಂಪೂರ್ಣ ಜಖಂಗೊಂಡಿದೆ. ಸ್ಥಳಕ್ಕೆ ಗ್ರಾಮಾಂತರ ಠಾಣೆ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ಮುಂದುವರೆಸಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.












Click it and Unblock the Notifications